
ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮಿರ್ ಖಾನ್ (Aamir Khan) ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದಾರೆ. 90 ಕೋಟಿ ಬಜೆಟ್‌ನಲ್ಲಿ ನಿರ್ಮಿಸಲಾದ ‘ಸಿತಾರೆ ಜಮೀನ್ ಪರ್’ ಚಿತ್ರ ವಿಶ್ವ ಬಾಕ್ಸ್ ಆಫೀಸ್‌ನಲ್ಲಿ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಬೀಗುತ್ತಿದೆ. ಈಗ ಅವರು ತಮ್ಮ ಮೂರನೇ ಮದುವೆ ಬಗ್ಗೆ ಒಂದು ದೊಡ್ಡ ಅಪ್ಡೇಟ್ ನೀಡಿದ್ದಾರೆ. 2 ವಿಚ್ಛೇದನಗಳ ನಂತರ, ಅವರು ಬೆಂಗಳೂರು ಮೂಲದ ಗೌರಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ. ಆಮಿರ್ ಅವರು ಗೌರಿಯನ್ನು ಮದುವೆಯಾಗಿರುವುದಾಗಿ ಬಹಿರಂಗಪಡಿಸಿದ್ದಾರೆ.
ಆಮಿರ್ ಖಾನ್ ತಮ್ಮ 60 ನೇ ಹುಟ್ಟುಹಬ್ಬದಂದು ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರನ್ನು ಮಾಧ್ಯಮಗಳಿಗೆ ಪರಿಚಯಿಸಿದರು. ಅದಾದ ನಂತರ, ಇಬ್ಬರೂ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅವರು ಮುಚ್ಚುಮರೆ ಮಾಡದೆ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದಾರೆ. ಚಿತ್ರದ ಪ್ರದರ್ಶನದ ಸಮಯದಲ್ಲಿಯೂ ಸಹ, ಅವರು ಕೈ ಹಿಡಿದು ಕ್ಯಾಮೆರಾ ಮುಂದೆ ಪೋಸ್ ನೀಡಿದ್ದಾರೆ. ಈಗ ಮೊದಲ ಬಾರಿಗೆ, ಆಮಿರ್ ಮದುವೆಯ ಪ್ರಶ್ನೆಯ ಬಗ್ಗೆ ಮೌನ ಮುರಿದಿದ್ದಾರೆ.
ಇದನ್ನೂ ಓದಿ: ನಟ ವಿಷ್ಣು ವಿಶಾಲ್-ಜ್ವಾಲಾ ದಂಪತಿ ಮಗಳಿಗೆ ಹೆಸರಿಟ್ಟ ಆಮಿರ್; ಇಲ್ಲಿದೆ ನಾಮಕರಣ ಶಾಸ್ತ್ರದ ಫೋಟೋ
ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಗೌರಿ ಮತ್ತು ನಾನು ಪ್ರೀತಿ ವಿಚಾರದಲ್ಲಿ ಗಂಭೀರವಾಗಿದ್ದೇವೆ. ನನ್ನ ಹೃದಯದಲ್ಲಿ ನಾನು ಈಗಾಗಲೇ ಗೌರಿಯನ್ನು ಮದುವೆಯಾಗಿದ್ದೇನೆ. ಅದನ್ನು ಔಪಚಾರಿಕಗೊಳಿಸಬೇಕೆ ಅಥವಾ ಬೇಡವೇ ಎಂಬುದನ್ನು ಮುಂದೆ ನಿರ್ಧರಿಸುತ್ತೇವೆ’ ಎಂದು ಅವರು ಹೇಳಿದ್ದಾರೆ. ಆಮಿರ್ ಖಾನ್ ಹೇಳಿಕೆ ವೈರಲ್ ಆಗುತ್ತಿದೆ.
ಆಮಿರ್ ಖಾನ್ ಮೊದಲು ರೀನಾ ದತ್ತ ಅವರನ್ನು ವಿವಾಹವಾದರು. ಇಬ್ಬರೂ 1986ರಲ್ಲಿ ನ್ಯಾಯಾಲಯದ ಸಮ್ಮುಖದಲ್ಲಿ ಈ ಮದುವೆ ನಡೆಯಿತು. 2002ರಲ್ಲಿ ಇವರು ವಿಚ್ಛೇದನ ಪಡೆದರು. ನಂತರ, ಅವರು 2005ರಲ್ಲಿ ಕಿರಣ್ ರಾವ್ ಅವರನ್ನು ಆಮಿರ್ ವಿವಾಹವಾದರು. ಆದರೆ ಈ ಸಂಬಂಧವೂ ಹೆಚ್ಚು ಕಾಲ ಉಳಿಯಲಿಲ್ಲ, 2021 ರಲ್ಲಿ ಇಬ್ಬರೂ ಬೇರೆಯಾಗಲು ನಿರ್ಧರಿಸಿದರು. ಆಮಿರ್ ಅವರ ಮೊದಲ ಮದುವೆಯಿಂದ ಜುನೈದ್ ಮತ್ತು ಇರಾ ಎಂಬ ಇಬ್ಬರು ಮಕ್ಕಳಿದ್ದಾರೆ. ಎರಡನೇ ಮದುವೆಯಿಂದ ಒಬ್ಬ ಮಗನಿದ್ದು, ಆಜಾದ್ ಎಂದು ಹೆಸರು ಇಟ್ಟಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.