ಸೋಲಿನ ಸುಳಿಯಿಂದ ಹೊರಬರಲು ಹಳೆ ಸಿನಿಮಾ ಮೊರೆ ಹೋದ ಆಮಿರ್ ಖಾನ್

Aamir Khan: ಆಮಿರ್ ಖಾನ್ ರ ಸಿನಿಮಾ ಒಂದು ಸೂಪರ್ ಹಿಟ್ ಆದಿ ಆರೇಳು ವರ್ಷಗಳೇ ಆಗಿವೆ. ಸೋಲಿನ ಸುಳಿಯಿಂದ ಹೊರ ಬರಲು ತಮ್ಮದೇ ಹಳೆ ಸಿನಿಮಾದ ಮೊರೆ ಹೋಗಿದ್ದಾರೆ ಆಮಿರ್ ಖಾನ್.

ಸೋಲಿನ ಸುಳಿಯಿಂದ ಹೊರಬರಲು ಹಳೆ ಸಿನಿಮಾ ಮೊರೆ ಹೋದ ಆಮಿರ್ ಖಾನ್
ಆಮಿರ್ ಖಾನ್
Follow us
|

Updated on: Jan 21, 2024 | 3:41 PM

ಬಾಲಿವುಡ್​ನ (Bollywood) ಸ್ಟಾರ್ ನಟ ಆಮಿರ್ ಖಾನ್ (Aamir Khan) ಸೋಲಿನ ಸುಳಿಗೆ ಸಿಲುಕಿದ್ದಾರೆ. 2016ರಲ್ಲಿ ನಟಿಸಿದ್ದ ‘ದಂಗಲ್’ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಬಾಕ್ಸ್ ಆಫೀಸ್​ನಲ್ಲಿ ಹಲವು ದಾಖಲೆಗಳನ್ನು ಬರೆದಿತ್ತು. ಅದಾದ ಬಳಿಕ ಯಾವುದೇ ಸಿನಿಮಾ ಆಮಿರ್ ಖಾನ್​ಗೆ ದೊಡ್ಡ ಗೆಲುವು ತಂದುಕೊಟ್ಟಿಲ್ಲ. ಭಾರಿ ನಿರೀಕ್ಷೆ ಇಟ್ಟು ಮಾಡಿದ್ದ ‘ಲಾಲ್ ಸಿಂಗ್ ಚಡ್ಡಾ’ ಹೀನಾಯ ಸೋಲು ಕಂಡಿತು. ಇದೀಗ ಈ ಸೋಲಿನ ಸುಳಿಯಿಂದ ಹೊರಗೆ ಬರಲು ಆಮಿರ್ ಖಾನ್ ಯತ್ನಿಸುತ್ತಿದ್ದು ತಮ್ಮದೇ ಹಳೆ ಸಿನಿಮಾದ ಮೊರೆ ಹೋಗಿದ್ದಾರೆ.

ಆಮಿರ್ ಖಾನ್ ನಟನೆಯ ‘ತಾರೆ ಜಮೀನ್ ಪರ್’ ಸಿನಿಮಾವನ್ನು ಚಿತ್ರಪ್ರೇಮಿಗಳು ಮರೆಯುವಂತಿಲ್ಲ. ಇದೀಗ ಆಮಿರ್ ಖಾನ್ ಅದೇ ಮಾದರಿಯ ‘ಸಿತಾರೆ ಜಮೀನ್ ಪರ್’ ಹೆಸರಿನ ಸಿನಿಮಾದಲ್ಲಿ ನಟಿಸಲು ಮುಂದಾಗಿದ್ದಾರೆ. ಸಿನಿಮಾದ ಕತೆ ಕೇಳಿದ್ದು ಎಲ್ಲವೂ ಬಹುತೇಕ ಫೈನಲ್ ಆಗಿದ್ದು ಪ್ರೀ ಪ್ರೊಡಕ್ಷನ್ ಕಾರ್ಯ ಈಗಾಗಲೇ ಆರಂಭವಾಗಿದ್ದು. ಫೆಬ್ರವರಿ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭ ಆಗಲಿದೆ.

ಇದನ್ನೂ ಓದಿ: ಮಗಳ ಮದುವೆಯಲ್ಲಿ ಮಾಜಿ ಪತ್ನಿ ಕಿರಣ್​ ರಾವ್​ಗೆ ಕಿಸ್​ ಮಾಡಿದ ಆಮಿರ್ ಖಾನ್​; ವಿಡಿಯೋ ವೈರಲ್​

ಫೆಬ್ರವರಿ 2ರಿಂದ ‘ಸಿತಾರೆ ಜಮೀನ್ ಪರ್’ ಸಿನಿಮಾದ ಚಿತ್ರೀಕರಣ ಆರಂಭವಾಗಲಿದ್ದು ಸಿನಿಮಾಕ್ಕಾಗಿ 80 ದಿನಗಳನ್ನು ಆಮಿರ್ ಖಾನ್ ಮೀಸಲಿಟ್ಟಿದ್ದಾರಂತೆ. ಆಮಿರ್ ಖಾನ್​ರ ಇತ್ತೀಚೆಗಿನ ಕೆಲ ವರ್ಷಗಳಲ್ಲಿ ಅತ್ಯಂತ ಬೇಗ ಬಿಡುಗಡೆ ಆಗಲಿರುವ ಸಿನಿಮಾ ಇದಾಗಿರಲಿದೆ ಎನ್ನಲಾಗುತ್ತಿದೆ. ಈ ಸಿನಿಮಾ ಸಹ ‘ತಾರೇ ಜಮೀನ್ ಪರ್’ ರೀತಿ ಮಕ್ಕಳ ಮಾನಸಿಕ ಆರೋಗ್ಯದ ಕುರಿತಾದ ಕತೆಯನ್ನು ಒಳಗೊಂಡಿರಲಿದೆ.

ಆಮಿರ್ ಖಾನ್ ಮತ್ತೊಂದು ಸಿನಿಮಾ ಸಹ ಒಪ್ಪಿಕೊಂಡಿದ್ದಾರೆ. ಇದು ಪೀರಿಯಡ್ ಸಿನಿಮಾ ಆಗಿದ್ದು, ಸಿನಿಮಾದ ಹೆಸರು ‘ಲಾಹೋರ್ 1947’. ಹೆಸರೇ ಹೇಳುತ್ತಿರುವಂತೆ 1947ರ ಆಸು-ಪಾಸಿನ ಕತೆಯನ್ನು ಈ ಸಿನಿಮಾ ಒಳಗೊಂಡಿದ್ದು, ಆಕ್ಷನ್ ಜೊತೆಗೆ ಭಾವುಕ ಅಂಶಗಳನ್ನು ಒಳಗೊಂಡ ಸಿನಿಮಾ ಇದಾಗಿರಲಿದೆ. ಈ ಸಿನಿಮಾದ ಇನ್ನೊಂದು ವಿಶೇಷವೆಂದರೆ ಈ ಸಿನಿಮಾದಲ್ಲಿ ಸನ್ನಿ ಡಿಯೋಲ್ ಸಹ ಮುಖ್ಯ ಪಾತ್ರದಲ್ಲಿ ನಟಿಸಲಿದ್ದಾರೆ. ಇದೇ ಮೊದಲ ಬಾರಿಗೆ ಆಮಿರ್ ಖಾನ್ ಹಾಗೂ ಸನ್ನಿ ಡಿಯೋಲ್ ಒಟ್ಟಿಗೆ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ