ಮುಗಿಯಿತು ಮಗಳ ಮದುವೆ ಸಂಭ್ರಮ; ಮಗನ ಚಿತ್ರಕ್ಕಾಗಿ ಜಪಾನ್​ಗೆ ತೆರಳಲಿದ್ದಾರೆ ಆಮಿರ್ ಖಾನ್?

ಆಮಿರ್ ಖಾನ್ ಹಾಗೂ ಜುನೈದ್ ಖಾನ್ ಅವರು ಇರಾ ಖಾನ್ ಮದುವೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಇರಾ ಖಾನ್ ಮದುವೆ ಸಂಭ್ರಮದಲ್ಲಿ ಭಾಗಿ ಆಗಿದ್ದರು. ಈಗ ಮಗನಿಗಾಗಿ ಆಮಿರ್ ಖಾನ್ ಜಪಾನ್ ತೆರಳೋಕೆ ರೆಡಿ ಆಗಿದ್ದಾರೆ.

ಮುಗಿಯಿತು ಮಗಳ ಮದುವೆ ಸಂಭ್ರಮ; ಮಗನ ಚಿತ್ರಕ್ಕಾಗಿ ಜಪಾನ್​ಗೆ ತೆರಳಲಿದ್ದಾರೆ ಆಮಿರ್ ಖಾನ್?
ಆಮಿರ್-ಜುನೈದ್
Follow us
ರಾಜೇಶ್ ದುಗ್ಗುಮನೆ
|

Updated on: Feb 01, 2024 | 7:31 AM

ಆಮಿರ್ ಖಾನ್ (Aamir Khan) ಅವರು ಮಗಳು ಇರಾ ಖಾನ್ ಹಾಗೂ ಫಿಟ್ನೆಸ್​ ಟ್ರೇನರ್ ನೂಪುರ್ ಶಿಖಾರೆ ಮದುವೆ ಸಂಭ್ರಮದಲ್ಲಿ ಬ್ಯುಸಿ ಆಗಿದ್ದರು. ಅದ್ದೂರಿಯಾಗಿ ನಡೆದ ಈ ಮದುವೆಯಲ್ಲಿ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ನಾನಾ ಕಡೆಗಳಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಿತು. ಈಗ ಮತ್ತೆ ಸಿನಿಮಾ ಕೆಲಸಗಳಲ್ಲಿ ಆಮಿರ್ ಖಾನ್ ಬ್ಯುಸಿ ಆಗುತ್ತಿದ್ದಾರೆ. ನಟನೆಯ ಜೊತೆ ನಿರ್ಮಾಣದಲ್ಲೂ ಬ್ಯುಸಿ ಇದ್ದಾರೆ. ಈಗ ಅವರು ಮಗ ಜುನೈದ್ ಖಾನ್​ಗಾಗಿ ಜಪಾನ್​ಗೆ ತೆರಳುತ್ತಿದ್ದಾರೆ ಎಂದು ವರದಿ ಆಗಿದೆ.

ಜುನೈದ್ ಖಾನ್ ಅವರು ಚಿತ್ರರಂಗಕ್ಕೆ ಕಾಲಿಡೋಕೆ ರೆಡಿ ಆಗಿದ್ದಾರೆ. ಆದಿತ್ಯ ಚೋಪ್ರಾ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಿದ್ದಾರ್ಥ್ ಪಿ. ಮಲ್ಹೋತ್ರ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರ ಜೊತೆಗೆ ಆಮಿರ್ ಖಾನ್ ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲೂ ಜುನೈದ್ ನಟಿಸುತ್ತಿದ್ದಾರೆ. ಇದು ಅವರ ಎರಡನೇ ಸಿನಿಮಾ. ಈ ಚಿತ್ರದ ಶೂಟಿಂಗ್​ ಜಪಾನ್​ನಲ್ಲಿ ನಡೆಯುತ್ತಿದೆ. ಈ ಚಿತ್ರಕ್ಕಾಗಿ ಆಮಿರ್ ಖಾನ್ ಅವರು ಅಲ್ಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಮುಂಬೈನಲ್ಲಿ ಈ ಚಿತ್ರದ ಶೂಟಿಂಗ್ ನಡೆದಿತ್ತು. ಈ ವೇಳೆ ಆಮಿರ್ ಖಾನ್ ಅವರು ನಿರಂತರವಾಗಿ ಸಂಪರ್ಕದಲ್ಲಿ ಇದ್ದರು. ಈಗ ನಿರ್ಮಾಣ ಸಂಸ್ಥೆ ಜಪಾನ್​ಗೆ ಪ್ರಯಾಣ ಬೆಳೆಸಿದೆ. ಅಲ್ಲಿ ಭರದಿಂದ ಶೂಟಿಂಗ್ ನಡೆಯುತ್ತಿದೆ. ಈವರೆಗೆ ಸಿನಿಮಾಗಳಲ್ಲಿ ತೋರಿಸದೇ ಇರುವ ಜಾಗವನ್ನು ತೋರಿಸಲು ಆಮಿರ್ ಖಾನ್ ತಂಡ ಮುಂದಾಗಿದೆ. ಶೂಟಿಂಗ್ ಯಾವ ರೀತಿಯಲ್ಲಿ ಸಾಗುತ್ತಿದೆ ಎಂಬುದನ್ನು ನೋಡಲು ಅವರು ಮುಂದಾಗಿದ್ದಾರೆ.

ಹೊಸ ರೀತಿಯ ದೃಶ್ಯ ವೈಭವ ನೀಡುವ ಆಲೋಚನೆ ಈ ತಂಡಕ್ಕೆ ಇದೆ. ಆಮಿರ್ ಖಾನ್ ಅವರು ಈ ಕಾರಣದಿಂದಲೇ ಜಪಾನ್​ಗೆ ತೆರಳುತ್ತಿದ್ದಾರೆ. ಅಲ್ಲಿ ಹೋಗಿ ಸಿನಿಮಾ ಕೆಲಸ ವೀಕ್ಷಿಸುವ ಆಲೋಚನೆ ಅವರಿಗೆ ಇದೆ. ಇಷ್ಟು ದಿನ ಮಗಳ ಮದುವೆ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದರು. ಈಗ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಆಮಿರ್ ಖಾನ್ ಮಗಳ ಮದುವೆಗೆ ಪ್ರಮುಖ ವ್ಯಕ್ತಿಯೇ ಗೈರು; ಮೂಡಿತು ಅನುಮಾನ

ಆಮಿರ್ ಖಾನ್ ಹಾಗೂ ಜುನೈದ್ ಖಾನ್ ಅವರು ಮದುವೆಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ