AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಹೇಳಿ ಸಿಕ್ಕಿಬಿದ್ದ ಆಮಿರ್ ಖಾನ್; ಟ್ರೋಲ್ ಆದ ಬಾಲಿವುಡ್ ನಟ

ಪರ್ಫೆಕ್ಷನಿಸ್ಟ್ ಆಮಿರ್ ಖಾನ್ 'ಸಿತಾರೆ ಜಮೀನ್ ಪರ್' ಚಿತ್ರದ OTT ಬಿಡುಗಡೆ ಬಗ್ಗೆ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾರೆ. ಈ ಹಿಂದೆ, ಚಿತ್ರವನ್ನು ಕೇವಲ ಯೂಟ್ಯೂಬ್‌ನಲ್ಲಿ 100 ಕ್ಕೆ ಬಿಡುಗಡೆ ಮಾಡಿ, OTT ಗೆ ಮಾರಿಲ್ಲ ಎಂದಿದ್ದರು. ಆದರೆ, ಈಗ ಸಿನಿಮಾ ಸೋನಿ ಲಿವ್‌ನಲ್ಲಿ ಬಿಡುಗಡೆಯಾಗಲಿರುವುದರಿಂದ, ಅವರನ್ನು ಪ್ರೇಕ್ಷಕರಿಗೆ ಸುಳ್ಳು ಹೇಳಿದ ಆರೋಪದಡಿ ಟ್ರೋಲ್ ಮಾಡಲಾಗುತ್ತಿದೆ. ಆಮಿರ್ ನಡೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸುಳ್ಳು ಹೇಳಿ ಸಿಕ್ಕಿಬಿದ್ದ ಆಮಿರ್ ಖಾನ್; ಟ್ರೋಲ್ ಆದ ಬಾಲಿವುಡ್ ನಟ
ಆಮಿರ್ ಖಾನ್
ರಾಜೇಶ್ ದುಗ್ಗುಮನೆ
|

Updated on: Mar 10, 2026 | 3:17 PM

Share

ಬಾಲಿವುಡ್ ಆಮಿರ್ ಖಾನ್ (Aamir Khan) ಅವರು ಪರ್ಫೆಕ್ಷನಿಸ್ಟ್ ಎನಿಸಿಕೊಂಡಿದ್ದಾರೆ. ಅವರು ಪ್ರೇಕ್ಷಕರನ್ನು ಸಾಕಷ್ಟು ಗೌರವಿಸುತ್ತಾರೆ. ಈಗ ಅವರು ಸುಳ್ಳು ಹೇಳಿ ಸಿಕ್ಕಿ ಬಿದ್ದಿದ್ದಾರೆ. ‘ಸಿತಾರೆ ಜಮೀನ್​​ಪರ್’ ಸಿನಿಮಾ ಈ ಮೊದಲು ಥಿಯೇಟರ್​​ನಲ್ಲಿ ರಿಲೀಸ್ ಆಯಿತು. ಆ ಬಳಿಕ ಯೂಟ್ಯೂಬ್​​​ನಲ್ಲಿ ರಿಲೀಸ್ ಆಯಿತು. ಈ ವೇಳೆ ಆಮಿರ್ ಖಾನ್ ಹೇಳಿದ ಸುಳ್ಳು ಈಗ ಹೊರ ಬಿದ್ದಿದೆ. ಅವರನ್ನು ಸಾಕಷ್ಟು ಟ್ರೋಲ್ ಮಾಡುತ್ತಾ ಇದ್ದಾರೆ.

ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಒಟಿಟಿಗೆ ಮಾರಾಟ ಮಾಡಲಿರಲಿಲ್ಲ. ಚಿತ್ರಮಂದಿರಗಳಲ್ಲಿ ಭಾರಿ ಹಿಟ್ ಆದ ಈ ಚಿತ್ರ ಯೂಟ್ಯೂಬ್​​​ನಲ್ಲಿ ಬಿಡುಗಡೆ ಮಾಡಲಾಯಿತು. ಯೂಟ್ಯೂಬ್​​​ನಲ್ಲಿ ಯಾರು ಬೇಕಾದರೂ ಕೇವಲ 100 ರೂಪಾಯಿ ನೀಡಿ ಸಿನಿಮಾ ನೋಡಬಹುದಿತ್ತು. ಒಮ್ಮೆ ಪಾವತಿಸಿದರೆ 48 ಗಂಟೆಗಳವರೆಗೆ ಈ ಚಿತ್ರ ನೋಡುವ ಅವಕಾಶ ಇತ್ತು. ಹೆಚ್ಚು ಜನರಿಗೆ ತಲುಪಬೇಕು ಎಂಬ ಕಾರಣಕ್ಕೆ ನಾವು ಈ ರೀತಿ ಮಾಡಿದ್ದೆವು ಎಂದು ಅವರು ಹೇಳಿದ್ದರು.

ಆ ಸಮಯದಲ್ಲಿ ಆಮಿರ್ ಖಾನ್ ಮಾತನಾಡಿದ್ದು ಕೇಳಿ, ಸಿನಿಮಾ ಒಟಿಟಿಗೆ ಬರೋದಿಲ್ಲ, ಅವರಿಗೆ ಜನರ ಬಗ್ಗೆ ಸಾಕಷ್ಟು ಪ್ರೀತಿ ಇದೆ ಎಂದೆಲ್ಲ ಜನರು ಅಂದುಕೊಂಡಿದ್ದರು. ಆದರೆ, ಇದು ಇದು ಸುಳ್ಳು ಎಂಬುದು ಈಗ ಗೊತ್ತಾಗಿದೆ. ಏಕೆಂದರೆ, ಸೋನಿ ಲಿವ್​​​ ಅಲ್ಲಿ ಈ ಸಿನಿಮಾ ಪ್ರಸಾರ ಕಾಣಲಿದೆ. ದಿನಾಂಕ ಇನ್ನೂ ಫೈನಲ್ ಆಗಿಲ್ಲ.

ಇದನ್ನೂ ಓದಿ: ‘ಧುರಂದರ್’ ಗೆಲುವಿನ ಬಗ್ಗೆ ಆಮಿರ್ ಖಾನ್​​ಗೆ ಇಲ್ಲ ಪೂರ್ಣ ಸಂತೋಷ

ಸದ್ಯ ಆಮಿರ್ ಖಾನ್ ಅವರನ್ನು ಎಲ್ಲರೂ ಟ್ರೋಲ್ ಮಾಡುತ್ತಿದ್ದಾರೆ. ಅವರು ನಡೆದುಕೊಂಡ ರೀತಿ ಸರಿ ಅಲ್ಲ ಎಂದು ಅನೇಕರು ಹೇಳಿದ್ದಾರೆ. ದುಡ್ಡಿಗಾಗಿ ಅವರು ಸುಳ್ಳು ಹೇಳಿದ್ದಾರೆ ಎಂದೆಲ್ಲ ಅವರು ಆರೋಪಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ