ಬಾಲಿವುಡ್ ತೊರೆಯುತ್ತಾರಾ ಆಮಿರ್ ಖಾನ್? ಕಣ್ಣೀರು ಹಾಕಿದ ನಟ

ಇತ್ತೀಚಿನ ವರ್ಷಗಳಲ್ಲಿ ಆಮಿರ್ ಖಾನ್​ಗೆ ಸಿಕ್ಕ ಸೋಲುಗಳು ತುಂಬಾನೇ ದೊಡ್ಡದು. ಸಾಲು ಸಾಲು ಸೋಲುಗಳಿಂದ ಅವರು ಕಂಗೆಟ್ಟು ಹೋಗಿದ್ದಾರೆ. ಸದ್ಯ ಅವರು ಸದ್ಯ ‘ಸಿತಾರೆ ಜಮೀನ್​ ಪರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರು ಚಿತ್ರರಂಗ ತೊರೆಯೋ ಬಗ್ಗೆ ಮಾತನಾಡಿದ್ದಾರೆ.

ಬಾಲಿವುಡ್ ತೊರೆಯುತ್ತಾರಾ ಆಮಿರ್ ಖಾನ್? ಕಣ್ಣೀರು ಹಾಕಿದ ನಟ
ಆಮಿರ್ ಖಾನ್
Follow us
 ಶ್ರೀಲಕ್ಷ್ಮೀ ಎಚ್
| Updated By: Digi Tech Desk

Updated on:Aug 21, 2024 | 10:06 AM

ಆಮಿರ್ ಖಾನ್ ಪ್ರತಿಭಾವಂತ ನಟ. ಅವರನ್ನು ಪರ್ಫೆಕ್ಷನಿಸ್ಟ್ ಎಂದು ಕರೆಯಲಾಗುತ್ತದೆ. ನಟಿ ರಿಯಾ ಚಕ್ರವರ್ತಿ ತಮ್ಮ ಪಾಡ್‌ಕಾಸ್ಟ್ ‘ಅಧ್ಯಾಯ  2ರಲ್ಲಿ ಆಮಿರ್ ಖಾನ್ ಅವರು ಮಾತನಾಡಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಈ ಸಂದರ್ಶನದಲ್ಲಿ ಆಮಿರ್ ಖಾನ್ ಅವರು ಬಾಲಿವುಡ್ ತೊರೆಯುವುದಾಗಿ ಹೇಳಿದ್ದಾರೆ. ರಿಯಾ ಚಕ್ರವರ್ತಿ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ತಮ್ಮ ಪಾಡ್‌ಕಾಸ್ಟ್‌ನ ಟ್ರೇಲರ್ ಅನ್ನು ಬಿಡುಗಡೆ ಮಾಡಿದ್ದಾರೆ.

ಆಮಿರ್ ಖಾನ್ ಅವರನ್ನು ರಿಯಾ ಚಕ್ರವರ್ತಿ ಸಂದರ್ಶನ ಮಾಡಿದ್ದಾರೆ. ಇದರಲ್ಲಿ ಆಮಿರ್ ಖಾನ್ ಹಲವು ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಟ್ರೇಲರ್ ಅನ್ನು ಹಂಚಿಕೊಂಡ ನಟಿ ರಿಯಾ ಚಕ್ರವರ್ತಿ ಅವರು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ‘ನನ್ನ ಪಾಡ್‌ಸ್ಟಾರ್‌ಗೆ ನಿಜವಾದ ಸ್ಟಾರ್ ಮತ್ತು ನಿಜವಾದ ಸ್ನೇಹಿತ ಆಮಿರ್ ಖಾನ್ ಅವರನ್ನು ಸ್ವಾಗತಿಸಲು ರೋಮಾಂಚನವಾಗಿದೆ. ಸ್ಟಾರ್‌ಡಮ್, ದುಃಖ ಮತ್ತು ಅದರೊಂದಿಗೆ ಬರುವ ಎಲ್ಲದರ ಅನುಭವವನ್ನು ತಿಳಿದುಕೊಳ್ಳುವುದು ಮುಖ್ಯವಾಗಿರುತ್ತದೆ. ಅಧ್ಯಾಯ 2 ಶುಕ್ರವಾರ ಆಗಸ್ಟ್ 23 ರಂದು ಬಿಡುಗಡೆಯಾಗಲಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

‘ನನಗೆ ಸಿನಿಮಾಗಳಿಂದ ದೂರ ಹೋಗಬೇಕು’ ಎಂದು ಆಮಿರ್ ಖಾನ್ ಹೇಳಿದ್ದಾರೆ. ಇದಕ್ಕೆ ರಿಯಾ ಚಕ್ರವರ್ತಿ ‘ಸುಳ್ಳು’ ಎಂದು ಹೇಳಿದ್ದಾರೆ. ಇಲ್ಲ ನಿಜ ಎಂದು ಆಮಿರ್ ಖಾನ್ ಹೇಳಿದ್ದಾರೆ. ‘ಲೈ ಡಿಟೆಕ್ಟರ್ ಟೆಸ್ಟ್ ಮಾಡಬೇಕು’ ಎಂದು ರಿಯಾ ಅವರು ಹೇಳಿದ್ದಾರೆ. ಆ ಬಳಿಕ ಅವರು ಒಂದು ವಿಚಾರಕ್ಕೆ ಕಣ್ಣೀರು ಹಾಕಿದ್ದಾರೆ. ಆಮಿರ್ ಖಾನ್ ಅವರ ಈ ಹೇಳಿಕೆ ಸಖತ್ ಚರ್ಚೆ ಹುಟ್ಟುಹಾಕಿದೆ.

ಇದನ್ನೂ ಓದಿ: ದಕ್ಷಿಣದ ಸ್ಟಾರ್ ನಿರ್ದೇಶಕನ ಜೊತೆ ಸಿನಿಮಾ ಮಾಡಲಿದ್ದಾರೆ ಆಮಿರ್ ಖಾನ್  

ಆಮಿರ್ ಖಾನ್ ಅವರು ಸಿನಿಮಾಗಳ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರ ನಟನೆಯ ‘ಥಗ್ಸ್ ಆಫ್ ಹಿಂದೂಸ್ತಾನ್’ ಹಾಗೂ ‘ಲಾಲ್ ಸಿಂಗ್ ಛಡ್ಡಾ’ ಸಿನಿಮಾಗಳು ರಿಲೀಸ್ ಆಗಿವೆ. ಈ ಎರಡೂ ಸಿನಿಮಾಗಳು ಹೇಳಿಕೊಳ್ಳುವಂತೆ ಯಶಸ್ಸು ಕಂಡಿಲ್ಲ. ಇದರಿಂದ ಆಮಿರ್ ಖಾನ್ ಅವರು ಬೇಸರಕ್ಕೆ ಒಳಗಾದರೇ ಎನ್ನುವ ಪ್ರಶ್ನೆ ಮೂಡಿದೆ. ಸದ್ಯ ಅವರು ‘ಸಿತಾರೇ ಜಮೀನ್ ಪರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆಮಿರ್ ಖಾನ್ ಅವರು ದಕ್ಷಿಣದ ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:30 am, Tue, 20 August 24

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ