Abhishek Bachchan: ಚಿತ್ರೀಕರಣದ ವೇಳೆ ಖ್ಯಾತ ನಟ ಅಭಿಷೇಕ್ ಬಚ್ಚನ್​ಗೆ ಗಾಯ, ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರಿಗೆ ಚಿತ್ರೀಕರಣದ ವೇಳೆ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ. ಈ ಕುರಿತ ಸಂಪೂರ್ಣ ವರದಿ ಇಲ್ಲಿದೆ.

Abhishek Bachchan: ಚಿತ್ರೀಕರಣದ ವೇಳೆ ಖ್ಯಾತ ನಟ ಅಭಿಷೇಕ್ ಬಚ್ಚನ್​ಗೆ ಗಾಯ, ಆಸ್ಪತ್ರೆಗೆ ದಾಖಲು
ಅಭಿಷೇಕ್ ಬಚ್ಚನ್
Follow us
TV9 Web
| Updated By: shivaprasad.hs

Updated on: Aug 24, 2021 | 2:57 PM

ಇತ್ತೀಚೆಗೆ ಚಿತ್ರೀಕರಣದ ವೇಳೆ ಅವಘಡಗಳು ಸಂಭವಿಸುತ್ತಿರುವುದು ಹೆಚ್ಚಾಗಿದೆ. ಸ್ಯಾಂಡಲ್​ವುಡ್​ನಲ್ಲಿ ಎರಡು ಪ್ರಕರಣಗಳು ಇತ್ತೀಚೆಗಷ್ಟೇ ವರದಿಯಾಗಿದ್ದವು. ‘ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣದ ವೇಳೆ ಫೈಟರ್ ವಿವೇಕ್ ಮೃತಪಟ್ಟಿದ್ದರು ಹಾಗೂ ಮತ್ತೋರ್ವರು ಗಾಯಗೊಂಡಿದ್ದರು. ಶ್ರೀ ಮುರುಳಿ ನಟನೆಯ ಮದಗಜ ಚಿತ್ರದ ಚಿತ್ರೀಕರಣದಲ್ಲೂ ಅವಘಡವೊಂದು ಜರುಗಿತ್ತು. ಇದೀಗ ಬಾಲಿವುಡ್ ಅಂಗಳದಲ್ಲಿ ನಾಯಕ ನಟನಿಗೆ ಚಿತ್ರೀಕರಣದ ವೇಳೆ ಗಾಯಗೊಂಡು ಆಸ್ಪತ್ರೆ ಸೇರಿದ ವರ್ತಮಾನ ಬಂದಿದೆ.

ಬಾಲಿವುಡ್​ನ ಖ್ಯಾತ ನಟ ಅಭಿಷೇಕ್ ಬಚ್ಚನ್ ಚಿತ್ರೀಕರಣದ ವೇಳೆ ಗಾಯಗೊಂಡು, ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆದಿದ್ದಾರೆ. ಬಾಲಿವುಡ್​​ ಬಿಗ್​ಬಿ, ತಂದೆ ಅಮಿತಾಭ್ ಬಚ್ಚನ್ ಹಾಗೂ ಸಹೋದರಿ ಶ್ವೇತಾ ಬಚ್ಚನ್ ಆಸ್ಪತ್ರೆಗೆ ಭೇಟಿ ನೀಡಿ ಅಭಿಷೇಕ್​ರನ್ನು ವಿಚಾರಿಸಿದ್ದಾರೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ಅಭಿಷೇಕ್ ಅವರನ್ನು ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಅವರಿಗೆ ಆಗಿರುವ ಗಾಯವು ಸಣ್ಣ ಪ್ರಮಾಣದ್ದು, ಚಿತ್ರೀಕರಣದ ಸೆಟ್​ನಲ್ಲಿ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.​

ಅಭಿಷೇಕ್ ಈಗ ಹೇಗಿದ್ದಾರೆ?

ನಟ ಅಭಿಷೇಕ್ ಬಚ್ಚನ್ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಕುರಿತು ಇಂಡಿಯನ್ ಎಕ್ಸ್​ಪ್ರೆಸ್ ವರದಿ ಮಾಡಿದ್ದು, ಆಸ್ಪತ್ರೆಯ ಹೇಳಿಕೆಯನ್ನು ಉಲ್ಲೇಖಿಸಿದೆ. ‘‘ಅಭಿಷೇಕ್ ಬಚ್ಚನ್ ಅವರಿಗೆ ಗಾಯವಾಗಿದ್ದು ಹೌದು. ಆದರೆ ಅದು ಸಣ್ಣ ಪ್ರಮಾಣದ ಗಾಯವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ. ಅಭಿಷೇಕ್ ಸುಧಾರಿಸಿಕೊಂಡ ಕಾರಣ, ಅವರನ್ನು ಡಿಸ್ಚಾರ್ಜ್ ಆಗಿದ್ದು, ಮನೆ ತಲುಪಿದ್ದಾರೆ ಎಂದು ಆಸ್ಪತ್ರೆಯ ಸಿಇಒ ಮಾಹಿತಿ ನೀಡಿದ್ದಾರೆ.

ಕಳೆದ ವಾರವಷ್ಟೇ ಅಭಿಷೇಕ್ ಬಚ್ಚನ್ ಪತ್ನಿ ಐಶ್ವರ್ಯಾ ರೈ ಬಚ್ಚನ್ ಹಾಗೂ ಮಗಳು ಆರಾಧ್ಯಾಳೊಂದಿಗೆ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಐಶ್ವರ್ಯಾ ರೈ, ತಮ್ಮ ಮುಂದಿನ ಚಿತ್ರ ‘ಪೊನ್ನಿಯಿನ್ ಸೆಲ್ವನ್’ ಚಿತ್ರದ ನಿರ್ದೇಶನಕ್ಕಾಗಿ ಮಧ್ಯಪ್ರದೇಶಕ್ಕೆ ತೆರಳುತ್ತಿದ್ದರು. ಆ ಚಿತ್ರವನ್ನು ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶಿಸುತ್ತಿದ್ದಾರೆ. ಅಭಿಷೇಕ್ ಬಚ್ಚನ್ ‘ಬಾಬ್ ಬಿಸ್ವಾಸ್’ ಹಾಗೂ ‘ದಸ್ವಿ’ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

Rachita Ram: ಫೈಟರ್ ವಿವೇಕ್ ಸಾವಿಗೆ ಸಂಬಂಧಪಟ್ಟಂತೆ ಇಂದು ಬಿಡದಿ ಪೊಲೀಸ್ ಠಾಣೆಗೆ ಹಾಜರಾಗಲಿರುವ ರಚಿತಾ ರಾಮ್

Bell Bottom: ಬಾಕ್ಸಾಫೀಸ್​ನಲ್ಲಿ ಅಕ್ಷಯ್ ನಟನೆಯ ‘ಬೆಲ್​ಬಾಟಂ’ ಹೊಸ ದಾಖಲೆ; ಮೊದಲ ವೀಕೆಂಡ್ ನಂತರ ಚಿತ್ರ ಗಳಿಸಿದ್ದೆಷ್ಟು?

(Abhishek Bachchan injured in a set and discharged from hospital)

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ