AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನಿನ್ನೂ ವಿವಾಹಿತ’; ವಿಚ್ಛೇದನ ವದಂತಿ ಬಗ್ಗೆ ಕೊನೆಗೂ ಮೌನ ಮುರಿದ ಅಭಿಷೇಕ್​ ಬಚ್ಚನ್

Abhishek Bachchan on Divorce: ಕಳೆದ ಕೆಲವು ದಿನಗಳಿಂದ ಬಚ್ಚನ್ ಕುಟುಂಬದಲ್ಲಿ ವಿಚ್ಛೇದನದ ಮಾತುಗಳು ಜೋರಾಗಿದೆ. ಆದರೆ ಕುಟುಂಬದ ಯಾವುದೇ ಸದಸ್ಯರು ಇನ್ನೂ ಅಧಿಕೃತವಾಗಿ ಈ ಬಗ್ಗೆ ಹೇಳಿಕೆ ನೀಡಿಲ್ಲ. ಈಗ ಅಭಿಷೇಕ್ ಬಚ್ಚನ್ ಅವರು ಈ ವಿವಾದಗಳ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ.

‘ನಾನಿನ್ನೂ ವಿವಾಹಿತ’; ವಿಚ್ಛೇದನ ವದಂತಿ ಬಗ್ಗೆ ಕೊನೆಗೂ ಮೌನ ಮುರಿದ ಅಭಿಷೇಕ್​ ಬಚ್ಚನ್
ಅಭಿಷೇಕ್-ಐಶ್ವರ್ಯಾ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Aug 12, 2024 | 11:39 AM

Share

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ವಿಚ್ಛೇದನ ವದಂತಿ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈಗಾಗಲೇ ಇವರು ಬೇರೆ ಬೇರೆ ಆಗಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಿರುವಾಗಲೇ ಅಭಿಷೇಕ್ ಬಚ್ಚನ್ ಅವರು ನೀಡಿದ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ‘ನಾನಿನ್ನೂ ವಿವಾಹಿತ’ ಎಂದು ಅವರು ಹೇಳಿಕೆ ನೀಡಿದ್ದಾರೆ. ಇದರಿಂದ ಅಭಿಷೇಕ್ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ಇತ್ತೀಚೆಗೆ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಅನಂತ್ ಅಂಬಾನಿ ಮದುವೆಗೂ ಇವರು ಪ್ರತ್ಯೇಕವಾಗಿ ಬಂದಿದ್ದು ಚರ್ಚೆ ಹುಟ್ಟುಹಾಕಿತು. ಆ ಬಳಿಕ ಡಿವೋರ್ಸ್​ಗೆ ಸಂಬಂಧಿಸಿದ ಪೋಸ್ಟ್ ಲೈಕ್ ಮಾಡಿ ಅವರು ಸುದ್ದಿ ಆದರು. ಅಭಿಷೇಕ್ ಬಚ್ಚನ್ ಅವರು ಮಾಧ್ಯಮಗಳ ಕೈಗೆ ಸಿಗುತ್ತಿಲ್ಲ. ಪ್ರೆಸ್​​ಮೀಟ್​ಗಳಲ್ಲಿ ಭಾಗಿ ಆಗುತ್ತಿಲ್ಲ. ಹೀಗಿರುವಾಗಲೇ ಅವರು ವಿದೇಶಿ ಮಾಧ್ಯಮ ಒಂದಕ್ಕೆ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

‘ವದಂತಿಗಳ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ. ನೀವೆಲ್ಲರೂ ಬೇರೆ ರೀತಿಯಲ್ಲೇ ಸುದ್ದಿ ಪ್ರಕಟಿಸಿದ್ದೀರಿ. ನೀವು ಏನ್ನಾದರೂ ಒಂದು ಸುದ್ದಿ ಪ್ರಕಟಿಸಬೇಕು. ಅದು ನನಗೆ ಅರ್ಥವಾಗುತ್ತದೆ. ನಾವು ಸೆಲೆಬ್ರಿಟಿಗಳು ಅದನ್ನು ತೆಗೆದುಕೊಳ್ಳಬೇಕು’ ಎಂದು ಅಭಿಷೇಕ್ ಹೇಳಿರೋದಾಗಿ ವರದಿ ಆಗಿದೆ. ‘ನಾನಿನ್ನೂ ವಿವಾಹಿತ’ ಎಂದು ಅವರು ಹೇಳಿದ್ದಾರಂತೆ.

ಅಭಿಷೇಕ್ ಹಾಗೂ ಐಶ್ವರ್ಯಾ ಸಂಬಂಧಕ್ಕೆ 17 ವರ್ಷ. ಈ ದಂಪತಿಗೆ ಆರಾಧ್ಯಾ ಹೆಸರಿನ ಮಗಳು ಇದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಈ ದಂಪತಿ ಒಟ್ಟಾಗಿ ಫೋಟೋ ಶೇರ್ ಮಾಡಿಕೊಳ್ಳೋದು ಕಡಿಮೆ ಆಗಿದೆ. ಜನ್ಮದಿನ ಹಾಗೂ ವಿವಾಹ ವಾರ್ಷಿಕೋತ್ಸವ ಸಂದರ್ಭಗಳಲ್ಲಿ ಮಾತ್ರ ಇವರು ಫೋಟೋ ಅಪ್​ಲೋಡ್ ಮಾಡುತ್ತಾರೆ.

ಇದನ್ನೂ ಓದಿ: ಐಶ್ವರ್ಯಾ ಹಾಗೂ ಅಭಿಷೇಕ್ ವಿಚ್ಛೇದನ ಪಡೆಯದೆ ಇರಲು ಇದುವೇ ಕಾರಣ

ಅಭಿಷೇಕ್ ಹಾಗೂ ಐಶ್ವರ್ಯಾ ಮಧ್ಯೆ ಎಲ್ಲವೂ ಸರಿ ಇದೆ ಎಂದು ಕೆಲವರು ಹೇಳುತ್ತಾರೆ. ಇನ್ನೂ ಕೆಲವರು ಈ ವಿಚಾರವನ್ನು ಒಪ್ಪುವುದಿಲ್ಲ. ಈ ದಂಪತಿ ಮಧ್ಯೆ ಕಿರಿಕ್ ಉಂಟಾಗಲು ಅಮಿತಾಭ್ ಬಚ್ಚನ್ ವರ್ತನೆ ಕಾರಣ ಎನ್ನುವ ಮಾತುಗಳೂ ಇವೆ. ಆದರೆ, ಈ ವಿಚಾರ ಇನ್ನೂ ಅಧಿಕೃತ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:46 am, Mon, 12 August 24

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ