AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾದಕ ವಸ್ತು ಪ್ರಕರಣ: ನಟ ಏಜಾಜ್ ಖಾನ್ ಪತ್ನಿ ಬಂಧನ

Actor Ajaz Khan: ನ್ನಡ, ತೆಲುಗು, ತಮಿಳು, ಹಿಂದಿಯ ಹಲವಾರು ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ಏಜಾಜ್ ಖಾನ್ ಜನಪ್ರಿಯ ನಟ. ಇದೀಗ ಅವರ ಪತ್ನಿಯನ್ನು ಮಾದಕ ವಸ್ತು ಪ್ರಕರಣದಲ್ಲಿ ಬಂಧಿಸಲಾಗಿದೆ.

ಮಾದಕ ವಸ್ತು ಪ್ರಕರಣ: ನಟ ಏಜಾಜ್ ಖಾನ್ ಪತ್ನಿ ಬಂಧನ
Ajaz Khan
ಮಂಜುನಾಥ ಸಿ.
|

Updated on:Dec 01, 2024 | 3:41 PM

Share

ಹಿಂದಿ, ಕನ್ನಡ, ತೆಲುಗು, ತಮಿಳು ಹಲವು ಭಾಷೆಗಳ ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ನಟಿಸಿರುವ ಖ್ಯಾತ ಬಾಲಿವುಡ್ ನಟ ಏಜಾಜ್ ಖಾನ್ ಇತ್ತೀಚೆಗಷ್ಟೆ ಸುದ್ದಿಯಲ್ಲಿದ್ದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅವರಿಗೆ 156 ಮತಗಳಷ್ಟೆ ಬಿದ್ದಿದ್ದವು, ಆದರೆ ಅವರ ಇನ್​ಸ್ಟಾಗ್ರಾಂನಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋವರ್​ಗಳಿದ್ದಾರೆ. ಇದೀಗ ಏಜಾಜ್ ಖಾನ್​ ಮತ್ತೆ ಸುದ್ದಿಯಲ್ಲಿದ್ದಾರೆ. ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

ಏಜಾಜ್ ಖಾನ್ ಪತ್ನಿ ಫಲನ್ ಗುಲಿವಾಲ ಅವರನ್ನು ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈನ ಅವರ ಜೋಗೇಶ್ವರಿ ನಿವಾಸದಲ್ಲಿಯೇ ಫಲನ್ ಗುಲಿವಾಲ ಅವರನ್ನು ಬಂಧಿಸಲಾಗಿದೆ. ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಫಲನ್ ಬಂಧನ ಆಗಿದೆ.

ಕೆಲ ದಿನದ ಹಿಂದಷ್ಟೆ ಖಾನ್​ರ ಕಚೇರಿಯಲ್ಲಿ ಕೆಲಸ ಮಾಡುವ ಸೂರಜ್ ಗೌಡ ಎಂಬಾತನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಪ್ರಶ್ನೆ ಮಾಡಿದ್ದರು. ಖಾನ್​ ಬಳಿ ಕೆಲಸ ಮಾಡುವ ಸೂರಜ್, ಕೆಲ ದಿನಗಳ ಹಿಂದೆ ಯೂರೋಪ್ ದೇಶದಿಂದ 100 ಗ್ರಾಂ ಮಾದಕ ವಸ್ತುವನ್ನು ಪಾರ್ಸಲ್ ಮೂಲಕ ತರಿಸಿಕೊಂಡಿದ್ದರಂತೆ. ಸೂರಜ್ ಗೌಡ ವಿಚಾರಣೆಯಿಂದ ಈ ಪ್ರಕರಣದಲ್ಲಿ ಏಜಾಜ್ ಖಾನ್ ಪತ್ನಿ ಫಲನ್ ಸಹ ಪಾಲಿರುವುದು ತಿಳಿದು ಬಂದು ಆಕೆಯನ್ನು ಸಹ ಇದೀಗ ಬಂಧಿಸಲಾಗಿದೆ.

ಇದನ್ನೂ ಓದಿ:56 ಲಕ್ಷ ಹಿಂಬಾಲಕರಿದ್ದರೂ, ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ನಟ

ಏಜಾಜ್ ಖಾನ್​ರ ಜೋಗೇಶ್ವರಿ ಅಪಾರ್ಟ್​ಮೆಂಟ್​ ಮೇಲೆ ದಾಳಿ ನಡೆಸಿದ ಕಸ್ಟಮ್ಸ್ ಅಧಿಕಾರಿಗಳಿಗೆ 150 ಗ್ರಾಂನಷ್ಟು ಗಾಂಜಾ ಮತ್ತು ಇತರೆ ಕೆಲವು ಮಾದಕ ವಸ್ತುಗಳು ದೊರೆತಿದ್ದವು. ಕಸ್ಟಮ್ಸ್ ಅಧಿಕಾರಿಗಳು ಫಲನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಏಜಾಜ್ ಖಾನ್ ಅನ್ನೂ ಸಹ ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲಿದ್ದಾರೆ ಕಸ್ಟಮ್ಸ್ ಅಧಿಕಾರಿಗಳು.

ಏಜಾಜ್ ಖಾನ್​ ಬಾಲಿವುಡ್​ನ ಜನಪ್ರಿಯ ನಟ. ಕನ್ನಡ, ತೆಲುಗು, ತಮಿಳು, ಹಿಂದಿಯ ಹಲವಾರು ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ಏಜಾಜ್ ಖಾನ್ ನಟಿಸಿದ್ದಾರೆ. ಅಂದಹಾಗೆ ಏಜಾಜ್ ಖಾನ್ ಸಹ ಈ ಹಿಂದೆ ಮಾದಕ ವಸ್ತು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದರು. ಇದೀಗ ಅವರ ಪತ್ನಿ ಮಾದಕ ವಸ್ತು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Sun, 1 December 24

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ