Pavithra Gowda: ‘ಇದಕ್ಕೆಲ್ಲ ನೀನೇ ಕಾರಣ’; ಪವಿತ್ರಾ ಗೌಡ ಮೇಲೆ ಹಲ್ಲೆ ಮಾಡಿದ ದರ್ಶನ್?

ದರ್ಶನ್ ಹಾಗೂ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ಪವಿತ್ರಾ ಗೌಡಗೆ ಕಿರುಕುಳ ನೀಡಿದ್ದರಿಂದಲೇ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಯಿತು ಎಂದು ವರದಿ ಆಗಿದೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸುತ್ತಿದ್ದ. ದರ್ಶನ್ ಅವರು ಪವಿತ್ರಾ ಮೇಲೂ ಹಲ್ಲೆ ಮಾಡಿದ್ದರು ಎಂದು ವರದಿ ಆಗಿದೆ.

Pavithra Gowda: ‘ಇದಕ್ಕೆಲ್ಲ ನೀನೇ ಕಾರಣ’; ಪವಿತ್ರಾ ಗೌಡ ಮೇಲೆ ಹಲ್ಲೆ ಮಾಡಿದ ದರ್ಶನ್?
ದರ್ಶನ್-ಪವಿತ್ರಾ
Follow us
Kiran HV
| Updated By: ರಾಜೇಶ್ ದುಗ್ಗುಮನೆ

Updated on: Jun 11, 2024 | 12:56 PM

ನಟ ದರ್ಶನ್ (Darshan) ಅವರು ಕೊಲೆ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ರೇಣುಕಾಸ್ವಾಮಿ ಎಂಬಾತನ ಕೊಲೆ ಕೇಸ್​ನಲ್ಲಿ ದರ್ಶನ್ ಕೈವಾಡ ಇದೆ ಎನ್ನಲಾಗಿದೆ. ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ. ಈ ಕಾರಣಕ್ಕೆ ಅವರ ಮೇಲೆ ಕೆಲವರು ಹಲ್ಲೆ ಮಾಡಿದ್ದಾರೆ. ಇದರಲ್ಲಿ ದರ್ಶನ್ ಕೈವಾಡ ಕೂಡ ಇದೆ ಎನ್ನಲಾಗಿದೆ. ಈ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಚಾರವೊಂದು ಬೆಳಕಿಗೆ ಬಂದಿದೆ. ಪವಿತ್ರಾ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು ಎನ್ನಲಾಗಿದೆ.

ದರ್ಶನ್ ಹಾಗೂ ಪವಿತ್ರಾ ಮಧ್ಯೆ ಆಪ್ತತೆ ಇದೆ. ಕಳೆದ 10 ವರ್ಷಗಳಿಂದ ಇವರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಬೇರೆ ಬೇರೆ ಕಡೆಗಳಲ್ಲಿ ಸುತ್ತಾಡಿದ ಫೋಟೋಗಳನ್ನು ಹಂಚಿಕೊಂಡಿದ್ದರು. ಪವಿತ್ರಾಗೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯ ಕೊಲೆ ಆಯಿತು ಎನ್ನಲಾಗಿದೆ. ಈ ಮಧ್ಯೆ ಹಲ್ಲೆ ವಿಚಾರ ಚರ್ಚೆ ಆಗಿದೆ.

ರೇಣುಕಾಸ್ವಾಮಿ ಕೊಲೆ ಬಳಿಕ ಪವಿತ್ರಾ ಮೇಲೆ ದರ್ಶನ್ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ‘ನಿನ್ನಿಂದ ಹೀಗೆಲ್ಲಾ ಆಯಿತು’ ಎಂದು ದರ್ಶನ್ ಕೂಗಾಡಿದ್ದರು ಎಂದು ವರದಿ ಆಗಿದೆ. ಹಲ್ಲೆಗೊಳಗಾದ ಪವಿತ್ರಾಗೆ ಬೆಂಗಳೂರಿನ ಆರ್​ಆರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸೋಮವಾರ (ಜೂನ್ 10) ಪವಿತ್ರಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಅಭಿಮಾನಿ? ದರ್ಶನ್-ವಿಜಯಲಕ್ಷ್ಮಿ ಮಧ್ಯೆ ಪವಿತ್ರಾ ಬಂದಿದ್ದಕ್ಕೆ ಇತ್ತು ಕೋಪ?

ದರ್ಶನ್ ಹಾಗೂ ದರ್ಶನ್ ಅವರ ಸಂಗಡಿಗರು ಈ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಈ ವಿಚಾರ ಸುಳ್ಳಾಗಿರಲಿ ಎಂದು ಅನೇಕರು ಕೇಳಿಕೊಳ್ಳುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಹೆಸರು ಇದ್ದಿದ್ದು ನಿಜವೇ ಆದಲ್ಲಿ ಆತನಿಗೆ ಶಿಕ್ಷೆ ಆಗಲಿ ಎಂದು ಅನೇಕರು ಆಗ್ರಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?