AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರರಂಗಕ್ಕೆ ಕಾಲಿಟ್ಟು 64 ವರ್ಷಗಳ ಬಳಿಕ ಹೆಸರು ಬದಲಿಸಿದ ನಟ ಧರ್ಮೇಂದ್ರ

ಕೃತಿ ಸನೋನ್ ಹಾಗೂ ಶಾಹಿದ್ ಕಪೂರ್ ನಟನೆಯ ‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾದಲ್ಲಿ ಧರ್ಮೇಂದ್ರ ಅವರು ಬಣ್ಣ ಹಚ್ಚಿದ್ದಾರೆ. ಕಥಾ ನಾಯಕ ಶಾಹಿದ್ ಅವರ ತಾತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರರಂಗಕ್ಕೆ ಕಾಲಿಟ್ಟು 64 ವರ್ಷಗಳ ಬಳಿಕ ಹೆಸರು ಬದಲಿಸಿದ ನಟ ಧರ್ಮೇಂದ್ರ
ಧರ್ಮೇಂದ್ರ
ರಾಜೇಶ್ ದುಗ್ಗುಮನೆ
| Edited By: |

Updated on:Feb 14, 2024 | 3:00 PM

Share

ನಟ ಧರ್ಮೇಂದ್ರ (Dharmendra) ಅವರು ಬಾಲಿವುಡ್​ನ ಬೇಡಿಕೆಯ ಹೀರೋ ಆಗಿದ್ದರು. 60 ದಶಕದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟ ಅವರು ಈಗಲೂ ನಟನೆ ಮುಂದವರಿಸಿದ್ದಾರೆ. ಪೋಷಕ ಪಾತ್ರಗಳ ಮೂಲಕ ಅವರು ಈಗ ಗಮನ ಸೆಳೆಯುತ್ತಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟು 64 ವರ್ಷಗಳ ಬಳಿಕ ಅವರು ಹೆಸರು ಬದಲಿಸಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿರೋದು ಫೆಬ್ರವರಿ 9ರಂದು ರಿಲೀಸ್ ಆದ ‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ. ಈ ಚಿತ್ರದಲ್ಲಿ ಧರ್ಮೇಂದ್ರ ಅವರು ನಟಿಸಿದ್ದಾರೆ.

ಶಾಹಿದ್ ಕಪೂರ್ ಹಾಗೂ ಕೃತಿ ಸನೋನ್ ನಟನೆಯ ‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾದಲ್ಲಿ ಧರ್ಮೇಂದ್ರ ಅವರು ನಟಿಸಿದ್ದಾರೆ. ಕಥಾ ನಾಯಕ ಶಾಹಿದ್ ಅವರ ತಾತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವರ ಹೆಸರನ್ನು ಬೇರೆ ರೀತಿಯಲ್ಲಿ ತೋರಿಸಲಾಗಿದೆ.

ಈ ಮೊದಲು ಸಿನಿಮಾಗಳಲ್ಲಿ ಧರ್ಮೇಂದ್ರ ಎಂದಷ್ಟೇ ಬರುತ್ತಿತ್ತು. ಈಗ ಸಿನಿಮಾ ಪ್ರದರ್ಶನದ ವೇಳೆ ಧರ್ಮೇಂದ್ರ ಸಿಂಗ್ ಡಿಯೋಲ್ ಎಂದು ಹೆಸರು ತೋರಿಸಲಾಗಿದೆ. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಚಿತ್ರರಂಗಕ್ಕೆ ಕಾಲಿಟ್ಟು 64 ವರ್ಷಗಳ ಬಳಿಕ ಅವರು ಈ ರೀತಿ ಮಾಡಿದ್ದು ಅನೇಕರಿಗೆ ಅಚ್ಚರಿ ಮೂಡಿಸಿದೆ.

ಧರ್ಮೇಂದ್ರ ಅವರು ಜನಿಸಿದ್ದು 1935ರ ಡಿಸೆಂಬರ್ 8ರಂದು. ಅವರಿಗೆ ಈಗ 89 ವರ್ಷ ವಯಸ್ಸು. ಅವರು ಕೇವಾಲ್ ಕಿಶನ್ ಸಿಂಗ್ ಡಿಯೋಲ್ ಹಾಗೂ ಸತ್ವಂತ್ ಕೌರ್ ಮಗ. ಅವರ ತಂದೆ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ನಟನೆ ಮಾಡಬೇಕು ಎಂದು ಧರ್ಮೇಂದ್ರ ಅವರು ಮುಂಬೈಗೆ ಬಂದರು. ಅವರು ಚಿತ್ರರಂಗಕ್ಕೆ ಕಾಲಿಟ್ಟ ಬಳಿಕ ಮಧ್ಯದ ಹೆಸರು ಹಾಗೂ ಸರ್​ನೇಮ್​ನ ತೆಗೆದು ಹಾಕಿದರು. ಅವರ ಮಕ್ಕಳಾದ ಸನ್ನಿ ಹಾಗೂ ಬಾಬಿ ‘ಡಿಯೋಲ್​’ ಸರ್​ನೇಮ್​ನ ತಮ್ಮ ಹೆಸರಿನ ಮುಂದೆ ಸೇರಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಹನುಮಾನ್​’ ಸಿನಿಮಾದ ಹೀರೋ ತೇಜ ಸಜ್ಜಾ ಸಂಭಾವನೆಯಲ್ಲಿ ಏರಿಕೆ

ಧರ್ಮೇಂದ್ರ ಅವರು ಆಗಾಗ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ನಟಿಸಿದ್ದರು. ಕಥೆಯಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು. ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ನಟನೆಯ ಈ ಚಿತ್ರಕ್ಕೆ ಕರಣ್ ಜೋಹರ್ ನಿರ್ದೇಶನ ಇತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:48 am, Sat, 10 February 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು