ನಟ ಧರ್ಮೇಂದ್ರ (Dharmendra) ಅವರು ಬಾಲಿವುಡ್ನ ಬೇಡಿಕೆಯ ಹೀರೋ ಆಗಿದ್ದರು. 60 ದಶಕದಲ್ಲೇ ಚಿತ್ರರಂಗಕ್ಕೆ ಕಾಲಿಟ್ಟ ಅವರು ಈಗಲೂ ನಟನೆ ಮುಂದವರಿಸಿದ್ದಾರೆ. ಪೋಷಕ ಪಾತ್ರಗಳ ಮೂಲಕ ಅವರು ಈಗ ಗಮನ ಸೆಳೆಯುತ್ತಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟು 64 ವರ್ಷಗಳ ಬಳಿಕ ಅವರು ಹೆಸರು ಬದಲಿಸಿಕೊಂಡರೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿರೋದು ಫೆಬ್ರವರಿ 9ರಂದು ರಿಲೀಸ್ ಆದ ‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ. ಈ ಚಿತ್ರದಲ್ಲಿ ಧರ್ಮೇಂದ್ರ ಅವರು ನಟಿಸಿದ್ದಾರೆ.
ಶಾಹಿದ್ ಕಪೂರ್ ಹಾಗೂ ಕೃತಿ ಸನೋನ್ ನಟನೆಯ ‘ತೇರಿ ಬಾತೋ ಮೆ ಐಸಾ ಉಲ್ಜಾ ಜಿಯಾ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾದಲ್ಲಿ ಧರ್ಮೇಂದ್ರ ಅವರು ನಟಿಸಿದ್ದಾರೆ. ಕಥಾ ನಾಯಕ ಶಾಹಿದ್ ಅವರ ತಾತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಅವರ ಹೆಸರನ್ನು ಬೇರೆ ರೀತಿಯಲ್ಲಿ ತೋರಿಸಲಾಗಿದೆ.
ಈ ಮೊದಲು ಸಿನಿಮಾಗಳಲ್ಲಿ ಧರ್ಮೇಂದ್ರ ಎಂದಷ್ಟೇ ಬರುತ್ತಿತ್ತು. ಈಗ ಸಿನಿಮಾ ಪ್ರದರ್ಶನದ ವೇಳೆ ಧರ್ಮೇಂದ್ರ ಸಿಂಗ್ ಡಿಯೋಲ್ ಎಂದು ಹೆಸರು ತೋರಿಸಲಾಗಿದೆ. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಚಿತ್ರರಂಗಕ್ಕೆ ಕಾಲಿಟ್ಟು 64 ವರ್ಷಗಳ ಬಳಿಕ ಅವರು ಈ ರೀತಿ ಮಾಡಿದ್ದು ಅನೇಕರಿಗೆ ಅಚ್ಚರಿ ಮೂಡಿಸಿದೆ.
ಧರ್ಮೇಂದ್ರ ಅವರು ಜನಿಸಿದ್ದು 1935ರ ಡಿಸೆಂಬರ್ 8ರಂದು. ಅವರಿಗೆ ಈಗ 89 ವರ್ಷ ವಯಸ್ಸು. ಅವರು ಕೇವಾಲ್ ಕಿಶನ್ ಸಿಂಗ್ ಡಿಯೋಲ್ ಹಾಗೂ ಸತ್ವಂತ್ ಕೌರ್ ಮಗ. ಅವರ ತಂದೆ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ನಟನೆ ಮಾಡಬೇಕು ಎಂದು ಧರ್ಮೇಂದ್ರ ಅವರು ಮುಂಬೈಗೆ ಬಂದರು. ಅವರು ಚಿತ್ರರಂಗಕ್ಕೆ ಕಾಲಿಟ್ಟ ಬಳಿಕ ಮಧ್ಯದ ಹೆಸರು ಹಾಗೂ ಸರ್ನೇಮ್ನ ತೆಗೆದು ಹಾಕಿದರು. ಅವರ ಮಕ್ಕಳಾದ ಸನ್ನಿ ಹಾಗೂ ಬಾಬಿ ‘ಡಿಯೋಲ್’ ಸರ್ನೇಮ್ನ ತಮ್ಮ ಹೆಸರಿನ ಮುಂದೆ ಸೇರಿಸಿಕೊಂಡಿದ್ದಾರೆ.
ಇದನ್ನೂ ಓದಿ: ‘ಹನುಮಾನ್’ ಸಿನಿಮಾದ ಹೀರೋ ತೇಜ ಸಜ್ಜಾ ಸಂಭಾವನೆಯಲ್ಲಿ ಏರಿಕೆ
ಧರ್ಮೇಂದ್ರ ಅವರು ಆಗಾಗ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ನಟಿಸಿದ್ದರು. ಕಥೆಯಲ್ಲಿ ಅವರ ಪಾತ್ರ ಪ್ರಮುಖವಾಗಿತ್ತು. ರಣವೀರ್ ಸಿಂಗ್ ಹಾಗೂ ಆಲಿಯಾ ಭಟ್ ನಟನೆಯ ಈ ಚಿತ್ರಕ್ಕೆ ಕರಣ್ ಜೋಹರ್ ನಿರ್ದೇಶನ ಇತ್ತು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:48 am, Sat, 10 February 24