AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್ ಬೌನ್ಸ್ ಕೇಸ್; ಜಾಮೀನು ಪಡೆದು ನಿಟ್ಟುಸಿರು ಬಿಟ್ಟ ರಾಜ್​ಪಾಲ್ ಯಾದವ್

ಕಳೆದ ಕೆಲವು ದಿನಗಳಿಂದ ಜೈಲಿನಲ್ಲಿದ್ದ ನಟ ರಾಜ್​ಪಾಲ್​ ಯಾದವ್ ಅವರು ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಇಂದು (ಫೆ.16) ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದೆ. ಮಾ.18ರ ತನಕ ಜಾಮೀನು ಮಂಜೂರಾಗಿದೆ. ಜಾಮೀನು ಪಡೆದು ಹೊರಬಂದ ಬಳಿಕ ಇಡೀ ಪ್ರಕರಣದ ಬಗ್ಗೆ ಅವರು ಸುದ್ದಿಗೋಷ್ಠಿ ನಡೆಸುವ ನಿರೀಕ್ಷೆ ಇದೆ.

ಚೆಕ್ ಬೌನ್ಸ್ ಕೇಸ್; ಜಾಮೀನು ಪಡೆದು ನಿಟ್ಟುಸಿರು ಬಿಟ್ಟ ರಾಜ್​ಪಾಲ್ ಯಾದವ್
Rajpal Yadav
ಮದನ್​ ಕುಮಾರ್​
|

Updated on: Feb 16, 2026 | 4:57 PM

Share

ಹಿಂದಿ ಚಿತ್ರರಂಗದ ಖ್ಯಾತ ನಟ ರಾಜ್​ಪಾಲ್ ಯಾದವ್ (Rajpal Yadav) ಅವರು ತಿಹಾರ್ ಜೈಲು ಸೇರಿದ್ದರು. 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ಜೈಲಿಗೆ ಕಳಿಸಲಾಗಿತ್ತು. ಈಗ ಅವರು ಜಾಮೀನು ಪಡೆದುಕೊಂಡಿದ್ದಾರೆ. ಇಂದು (ಫೆಬ್ರವರಿ 16) ರಾಜ್​ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು (Bail) ನೀಡಿದೆ. ಮಧ್ಯಾಹ್ನ 3 ಗಂಟೆ ಒಳಗೆ 1.3 ಕೋಟಿ ರೂಪಾಯಿ ಹಣವನ್ನು ಪಾವತಿ ಮಾಡುವಂತೆ ಸೂಚಿಸಲಾಗಿತ್ತು. ಹಣ ಹೊಂದಿಸಿದ ಬಳಿಕ ಅವರಿಗೆ ಜಾಮೀನು ನೀಡಲಾಯಿತು.

ಸಂಬಂಧಿಕರ ಮದುವೆ ಇದೆ ಎಂಬ ಕಾರಣವನ್ನು ನೀಡಿ ರಾಜ್​ಪಾಲ್ ಯಾದವ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಸೋಮವಾರಕ್ಕೆ (ಫೆ.16) ಅವರ ಅರ್ಜಿ ವಿಚಾರಣೆ ಮುಂದೂಡಿಕೆ ಆಗಿತ್ತು. ಇಂದು (ಫೆ.16) ವಿಚಾರಣೆ ನಡೆಸಿದ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇದರಿಂದಾಗಿ ರಾಜ್​ಪಾಲ್ ಯಾದವ್ ಮತ್ತು ಅವರ ಕುಟುಂಬದವರು ನಿಟ್ಟುಸಿರು ಬಿಟ್ಟಿದ್ದಾರೆ.

ಮಾರ್ಚ್ 18ರ ತನಕ ರಾಜ್​ಪಾಲ್ ಯಾದವ್ ಅವರು ಜೈಲಿನಿಂದ ಹೊರಗೆ ಇರಲಿದ್ದಾರೆ. ಅಂದು ಮತ್ತೆ ಈ ಪ್ರಕರಣದ ವಿಚಾರಣೆ ನಡೆಯಲಿದೆ. ಸಿನಿಮಾ ನಿರ್ಮಾಣ ಮಾಡುವ ಸಲುವಾಗಿ ಅವರು ಹಲವು ವರ್ಷಗಳ ಹಿಂದೆ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದರು. ಸಿನಿಮಾ ಸೋತ ಬಳಿಕ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಅಲ್ಲದೇ, ಹಲವು ಬಾರಿ ಚೆಕ್ ಬೌನ್ಸ್ ಆಗಿದ್ದರಿಂದ ಪ್ರಕರಣ ದಾಖಲಿಸಲಾಗಿತ್ತು.

ರಾಜ್​ಪಾಲ್ ಯಾದವ್ ಅವರಿಗೆ ಈ ಮೊದಲು ಅನೇಕ ಬಾರಿ ಕಾಲಾವಕಾಶ ನೀಡಲಾಗಿತ್ತು. ಆದರೆ ಪ್ರತಿ ಬಾರಿಯೂ ಅವರು ಹಣ ಹಿಂದಿರುಗಿಸಲು ಹಿಂದೇಟು ಹಾಕುತ್ತಿದ್ದರು. ಅದರಿಂದಾಗಿ ಕೆಲವೇ ದಿನಗಳ ಹಿಂದೆ ಅವರಿಗೆ ಜೈಲು ಶಿಕ್ಷೆ ನೀಡಲಾಯಿತು. ಆ ಬಳಿಕ ರಾಜ್​ಪಾಲ್​ ಯಾದವ್ ಅವರು ತಿಹಾರ್ ಜೈಲು ಅಧಿಕಾರಿಗಳಿಗೆ ಶರಣಾಗಿದ್ದರು.

ಇದನ್ನೂ ಓದಿ: ಇಂದಿನ ಹಲವು ಸ್ಟಾರ್​​ಗಳಿಗೆ ಅಂದು ಊಟ ಹಾಕಿ ಸಾಕಿದ್ದರು ರಾಜ್​ಪಾಲ್ ಯಾದವ್: ಈಗ ನೆರವಿಗೆ ಯಾರೂ ಇಲ್ಲ?

ರಾಜ್​ಪಾಲ್ ಯಾದವ್ ಅವರು ಬಹುಬೇಡಿಕೆಯ ಹಾಸ್ಯ ನಟ. ‘ಚುಪ್ ಚುಪ್​ ಕೆ’, ‘ಭೂಲ್ ಭುಲಯ್ಯ’ ಮುಂತಾದ ಸಿನಿಮಾಗಳ ಮೂಲಕ ಅವರು ಜನರನ್ನು ನಗಿಸಿದ್ದಾರೆ. ಸಾಲದ ಸುಳಿಯಿಂದಾಗಿ ಅವರು ಜೈಲುವಾಸ ಅನುಭವಿಸುವಂತಾಯಿತು. ಅವರು ಜೈಲು ಸೇರಿದ ಬಳಿಕ ಸೋನು ಸೂದ್ ಸೇರಿದಂತೆ ಹಲವರು ಅವರ ನೆರವಿಗೆ ಧಾವಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್