AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಹೆಣ್ಣು ಮಗುವಿನ ತಾಯಿಯಾದ ದೀಪಿಕಾ ಪಡುಕೋಣೆ

ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರಿಗೆ 2024ರಲ್ಲಿ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ‘ದುವಾ’ ಎಂದು ಅವರು ಹೆಸರಿಟ್ಟಿದ್ದರು. ಇದೀಗ ಮತ್ತೊಮ್ಮೆ ದೀಪಿಕಾ ಅವರಿಗೆ ಹೆಣ್ಣು ಮಗು ಜನಿಸಿದೆ. ತಮಗೆ ಮಗು ಜನಿಸಿರುವ ಬಗ್ಗೆ ದೀಪಿಕಾ ಮತ್ತು ರಣ್ವೀರ್ ಸಿಂಗ್ ಪಡುಕೋಣೆ ಕೆಲವೇ ಸಮಯದ ಹಿಂದೆ ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ‘ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಮತ್ತೊಮ್ಮೆ ಹೆಣ್ಣು ಮಗುವಿನ ತಾಯಿಯಾದ ದೀಪಿಕಾ ಪಡುಕೋಣೆ
Ranveer Singh, Dua, Deepika PadukoneImage Credit source: Instagram/ranveersingh
ಮಂಜುನಾಥ ಸಿ.
|

Updated on:Sep 19, 2026 | 9:14 PM

Share

ಬಾಲಿವುಡ್ ಸ್ಟಾರ್ ನಟಿ, ಕನ್ನಡತಿ ನಟಿ ದೀಪಿಕಾ ಪಡುಕೋಣೆ ಅವರಿಗೆ ಹೆಣ್ಣು ಮಗು ಜನಿಸಿದೆ. ಇದು ಅವರ ಎರಡನೇ ಮಗುವಾಗಿದ್ದು, ಮೊದಲನೇಯ ಮಗುವೂ ಸಹ ಹೆಣ್ಣು ಮಗುವೇ ಆಗಿತ್ತು. ರಣ್ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ದಂಪತಿಯ ಎರಡನೇ ಮಗು ಇದಾಗಿದ್ದು, ಇಂದು (ಸೆಪ್ಟೆಂಬರ್ 19) ಮುಂಬೈನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಮಗು ಜನಿಸಿದೆ. ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರುಗಳು ಇತ್ತೀಚೆಗಷ್ಟೆ ಮುಂಬೈನ ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಅದಾದ ಕೆಲವೇ ದಿನಗಳಲ್ಲಿ ಇದೀಗ ದೀಪಿಕಾ ಪಡುಕೋಣೆ ಮತ್ತೊಮ್ಮೆ ತಾಯಿ ಆಗಿದ್ದಾರೆ.

ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರಿಗೆ 2024ರಲ್ಲಿ ಹೆಣ್ಣು ಮಗು ಜನಿಸಿತ್ತು. ಮಗುವಿಗೆ ‘ದುವಾ’ ಎಂದು ಅವರು ಹೆಸರಿಟ್ಟಿದ್ದರು. ಇದೀಗ ಮತ್ತೊಮ್ಮೆ ದೀಪಿಕಾ ಅವರಿಗೆ ಹೆಣ್ಣು ಮಗು ಜನಿಸಿದೆ. ತಮಗೆ ಮಗು ಜನಿಸಿರುವ ಬಗ್ಗೆ ದೀಪಿಕಾ ಮತ್ತು ರಣ್ವೀರ್ ಸಿಂಗ್ ಪಡುಕೋಣೆ ಕೆಲವೇ ಸಮಯದ ಹಿಂದೆ ಇನ್​​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ‘ಹೆಣ್ಣು ಮಗುವನ್ನು ಸ್ವಾಗತಿಸಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ದೀಪಿಕಾ ಪಡುಕೋಣೆ-ರಣ್ವೀರ್ ಸಿಂಗ್ ಇನ್​​ಸ್ಟಾಗ್ರಾಂ ಪೋಸ್ಟ್

ದೀಪಿಕಾ ಪಡುಕೋಣೆ ಮತ್ತು ರಣ್ವೀರ್ ಸಿಂಗ್ ಅವರುಗಳು 2018 ರಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದರು. ವಿವಾಹವಾದ ಆರು ವರ್ಷಗಳ ಬಳಿಕ ಅಂದರೆ 2024ರಲ್ಲಿ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಇದೇ ವರ್ಷ ಏಪ್ರಿಲ್ ತಿಂಗಳಲ್ಲಿ ದೀಪಿಕಾ ಪಡುಕೋಣೆ ಮತ್ತೆ ಗರ್ಭಿಣಿ ಆಗಿರುವ ವಿಷಯ ಘೋಷಿಸಿದ್ದರು. ಇದೀಗ ದೀಪಿಕಾ ಮತ್ತೆ ತಾಯಿ ಆಗಿದ್ದಾರೆ.

ದೀಪಿಕಾ ಹಾಗೂ ರಣ್ವೀರ್ ಅವರ ಇನ್​​ಸ್ಟಾಗ್ರಾಂ ಪೋಸ್ಟ್​​ಗೆ ಹಲವಾರು ಮಂದಿ ಪ್ರತಿಕ್ರಿಯೆ ನೀಡಿದ್ದು, ದಂಪತಿಗಳಿಗೆ ಶುಭ ಕೋರಿದ್ದಾರೆ. ‘ಧುರಂಧರ್’ ನಟಿ ಸಾರಾ ಅರ್ಜುನ್, ಕೃತಿ ಕರಬಂಧ, ಕೃತಿ ಸನೋನ್, ಸೋನಂ ಕಪೂರ್, ನೇಹಾ ಧೂಪಿಯಾ, ಶ್ವೇತಾ ಚೆಂಗಪ್ಪ, ಅದಿತಿ ಪ್ರಭುದೇವ ಇನ್ನೂ ಹಲವಾರು ಮಂದಿ ದಂಪತಿಗಳ ಪೋಸ್ಟ್​​ಗೆ ಕಮೆಂಟ್ ಹಾಕಿದ್ದು, ಶುಭ ಹಾರೈಸಿದ್ದಾರೆ.

ದೀಪಿಕಾ ಪಡುಕೋಣೆ ಅವರು 2024ರಲ್ಲಿ ತಾಯಿ ಆದ ಬಳಿಕವೂ ನಟನೆ ಮುಂದುವರೆಸಿದ್ದಾರೆ. ಆದರೆ ತಾಯಿ ಆದ ಬಳಿಕ ಸಾಕಷ್ಟು ನಿಯಮಗಳನ್ನು ಹೇರಿಕೊಂಡಿದ್ದಾರೆ. ಶೂಟಿಂಗ್ ಸಮಯ, ಶೂಟಿಂಗ್ ಸೆಟ್​​ನಲ್ಲಿ ಸೌಲಭ್ಯಗಳು ಇನ್ನಿತರೆ ವಿಚಾರಗಳಲ್ಲಿ ನಿಷ್ಠುರರಾಗಿದ್ದಾರೆ. ಇದೇ ಕಾರಣಕ್ಕೆ ಕೆಲವು ಸಿನಿಮಾಗಳನ್ನು ಸಹ ಅವರು ಕೈಬಿಟ್ಟಿದ್ದರು. ಇದೀಗ ಮತ್ತೊಂದು ಮಗು ಆಗಿದ್ದು, ದೀಪಿಕಾ ಹಾಗೂ ರಣ್ವೀರ್ ಮೇಲೆ ಜವಾಬ್ದಾರಿ ಇನ್ನೂ ಹೆಚ್ಚಾದಂತಾಗಿದೆ.

Published On - 7:36 pm, Sat, 19 September 26

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ