AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಾಯಿ ಕಿಮ್ ಫರ್ನಾಂಡಿಸ್ ನಿಧನ

ಜಾಕ್ವೆಲಿನ್ ಫರ್ನಾಂಡಿಸ್ ತಾಯಿ ಕಿಮ್ ಫರ್ನಾಂಡಿಸ್ ಇಂದು (ಏ.6) ನಿಧನರಾಗಿದ್ದಾರೆ. ಅವರಿಗೆ ಸ್ಟ್ರೋಕ್ ಆದ ನಂತರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗಿಲ್ಲ. ಅವರ ಆತ್ಮಕ್ಕೆ ಎಲ್ಲರೂ ಶಾಂತಿ ಕೋರಿದ್ದಾರೆ. ಜಾಕ್ವೆಲಿನ್ ಫರ್ನಾಂಡಿಸ್ ವೃತ್ತಿಜೀವನಕ್ಕೆ ಕಿಮ್ ಅವರು ಬೆಂಬಲವಾಗಿದ್ದರು.

ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಾಯಿ ಕಿಮ್ ಫರ್ನಾಂಡಿಸ್ ನಿಧನ
Kim Fernandez, Jacqueline Fernandez
ಮದನ್​ ಕುಮಾರ್​
|

Updated on: Apr 06, 2025 | 3:49 PM

Share

ಬಾಲಿವುಡ್​ನ ಜನಪ್ರಿಯ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ತಾಯಿ (Jacqueline Fernandez Mother) ಕಿಮ್ ಫರ್ನಾಂಡಿಸ್ ಅವರು ಕೊನೆಯುಸಿರು ಎಳೆದಿದ್ದಾರೆ. ಭಾನುವಾರ (ಏಪ್ರಿಲ್ 6) ಅವರು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಿಮ್ ಫರ್ನಾಂಡಿಸ್ ಮರಣದ ಸುದ್ದಿಯನ್ನು ಜಾಕ್ವೆಲಿನ್ (Jacqueline Fernandez) ಅವರ ಆಪ್ತ ಮೂಲಗಳು ಖಚಿತಪಡಿಸಿವೆ. ಕೆಲವು ದಿನಗಳ ಹಿಂದೆ ಕಿಮ್ ಫರ್ನಾಂಡಿಸ್ (Kim Fernandez) ಅವರಿಗೆ ಹೀಟ್ ಸ್ಟ್ರೋಕ್ ಆಗಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಹಾಕಿದ್ದರೂ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ ತ್ಯಜಿಸಿದ್ದಾರೆ.

ತಾಯಿಗೆ ಅನಾರೋಗ್ಯ ಉಂಟಾದಾಗಿನಿಂದ ಜಾಕ್ವೆಲಿನ್ ಫರ್ನಾಂಡಿಸ್ ಅವರು ತಮ್ಮ ಕೆಲಸಗಳಿಗೆ ಬ್ರೇಕ್​ ನೀಡಿದ್ದರು. ಲೀಲಾವತಿ ಆಸ್ಪತ್ರೆಗೆ ಆಗಾಗ ಭೇಟಿ ನೀಡಿ, ತಾಯಿಯನ್ನು ನೋಡಿಕೊಳ್ಳುತ್ತಿದ್ದಾರೆ. ಜಾಕ್ವೆಲಿನ್ ತಂದೆ ಎಲ್ರಾಯ್ ಫರ್ನಾಂಡಿಸ್ ಅವರು ಕೂಡ ಆಸ್ಪತ್ರೆಯಲ್ಲಿದ್ದುಕೊಂಡು ಪತ್ನಿಯ ಆರೈಕೆ ಮಾಡುತ್ತಿದ್ದರು. ಆದರೂ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಜಾಕ್ವೆಲಿನ್ ಫರ್ನಾಂಡಿಸ್ ಅವರು ತುಂಬ ಬ್ಯುಸಿ ನಟಿ. ಸಿನಿಮಾ, ಮಾಡೆಲಿಂಗ್, ಜಾಹೀರಾತು, ಫೋಟೋಶೂಟ್ ಮುಂತಾದ ಕೆಲಸಗಳಲ್ಲಿ ಅವರು ಸದಾ ತೊಡಗಿಕೊಂಡಿರುತ್ತಾರೆ. ಆದರೆ ತಾಯಿಗೆ ಹುಷಾರಿಲ್ಲ ಎಂಬ ಕಾರಣಕ್ಕೆ ಅವರು ಎಲ್ಲ ಕೆಲಸಗಳಿಗೆ ಬ್ರೇಕ್ ನೀಡಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಈ ಮೊದಲೇ ಒಪ್ಪಿಕೊಂಡಿದ್ದ ಕಾರ್ಯಕ್ರಮಗಳನ್ನು ಕೂಡ ಕ್ಯಾನ್ಸಲ್ ಮಾಡುವುದು ಅನಿವಾರ್ಯ ಆಯಿತು.

ಇದನ್ನೂ ಓದಿ
Image
ಜಾಕ್ವೆಲಿನ್ ಫರ್ನಾಂಡಿಸ್ ಹಿನ್ನೆಲೆ ಎಷ್ಟು ಕಾಂಪ್ಲಿಕೇಟ್ ಆಗಿದೆ ನೋಡಿ
Image
‘ವಂಚನೆ ಹಣದಲ್ಲಿ ಗಿಫ್ಟ್ ಕೊಟ್ಟ ಅಂತ ನನಗೆ ಗೊತ್ತಿರಲಿಲ್ಲ’: ಜಾಕ್ವೆಲಿನ್
Image
ಜಾಕ್ವೆಲಿನ್​ಗೆ ಬಿಟ್ಟು ಬಿಡದೇ ಕಾಡುತ್ತಿರುವ ಸುಕೇಶ್; ಮತ್ತೊಂದು ಪ್ರೇಮಪತ್ರ
Image
ಸದ್ದಿಲ್ಲದೆ ಹಾಲಿವುಡ್​ಗೆ ಹಾರಿದ ಜಾಕ್ವೆಲಿನ್ ಫರ್ನಾಂಡೀಸ್

ಕಳೆದ ತಿಂಗಳು ಐಪಿಎಲ್ ಸಮಾರಂಭದಲ್ಲಿ ಕೂಡ ಜಾಕ್ವೆಲಿನ್ ಫರ್ನಾಂಡಿಸ್ ಅವರು ಭಾಗಿಯಾಗಬೇಕಿತ್ತು. ಆದರೆ ತಾಯಿ ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಅವರು ಆ ಇವೆಂಟ್​ನಲ್ಲಿ ಭಾಗಿಯಾಗಲಿಲ್ಲ. ಈ ಮೊದಲು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜಾಕ್ವೆಲಿನ್ ಅವರು ತಾಯಿಯ ಬಗ್ಗೆ ಮಾತನಾಡಿದ್ದರು. ‘ನನ್ನ ತಾಯಿ ನನಗೆ ಸ್ಫೂರ್ತಿ. ನನಗೆ ಯಾವಾಗಲೂ ಅವರು ಬೆಂಬಲ ನೀಡುತ್ತಾರೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಾಕ್ವೆಲಿನ್​ಗೆ ಬಿಟ್ಟು ಬಿಡದೇ ಕಾಡುತ್ತಿರುವ ಸುಕೇಶ್; ಜೈಲಿನಿಂದ ಮತ್ತೊಂದು ಪ್ರೇಮಪತ್ರ

ಕಿಮ್ ಫರ್ನಾಂಡಿಸ್ ಅವರ ಅಂತ್ಯಕ್ರಿಯೆ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್​ದಾರೆ. ಈ ಕಷ್ಟದ ಸಂದರ್ಭದಲ್ಲಿ ಚಿತ್ರರಂಗದ ಸ್ನೇಹಿತರು ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಧೈರ್ಯ ತುಂಬುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು