‘ಕೃಷ್ಣನ ಆಶೀರ್ವಾದ ಸಿಕ್ಕರೆ..’; ಚುನಾವಣೆ ಸ್ಪರ್ಧೆ ಬಗ್ಗೆ ಮೊದಲೇ ಸೂಚನೆ ಕೊಟ್ಟಿದ್ದ ಕಂಗನಾ ರಣಾವತ್

|

Updated on: Mar 25, 2024 | 7:08 AM

ಕಂಗನಾ ರಣಾವತ್ ಅವರು ಮೊದಲಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತಾ ಬಂದವರು. ಅವರು ಬಿಜೆಪಿಯ ಕಡೆಗೆ ಹಾಗೂ ಮೋದಿ ಸರ್ಕಾರದತ್ತ ಹೆಚ್ಚು ಒಲವು ಹೊಂದಿದ್ದರು. ಕಂಗನಾ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಖಾತ್ರಿ ಇತ್ತು.

‘ಕೃಷ್ಣನ ಆಶೀರ್ವಾದ ಸಿಕ್ಕರೆ..’; ಚುನಾವಣೆ ಸ್ಪರ್ಧೆ ಬಗ್ಗೆ ಮೊದಲೇ ಸೂಚನೆ ಕೊಟ್ಟಿದ್ದ ಕಂಗನಾ ರಣಾವತ್
ಕಂಗನಾ
Follow us on

ನಟಿ ಕಂಗನಾ ರಣಾವತ್ (Kangana Ranaut) ಅವರು ರಾಜಕೀಯದ ಬಗ್ಗೆ ಮೊದಲಿನಿಂದಲೂ ಒಲವು ಹೊಂದಿದ್ದಾರೆ. ಅವರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಅಭಿಮಾನಿಗಳಿಗೆ ಮೊದಲೇ ಅನುಮಾನ ಇತ್ತು. ಈ ಅನುಮಾನ ಈಗ ನಿಜವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಅವರು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಬಿಜೆಪಿ ಪರವಾಗಿ ಸ್ಪರ್ಧಿಸಲಿದ್ದಾರೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಇತ್ತೀಚೆಗೆ ಟಿವಿ9 ನೆಟ್ವರ್ಕ್ ನಡೆಸಿದ ಕಾರ್ಯಕ್ರಮದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. ‘ಚುನಾವಣೆಗೆ ಸೇರಲು ಇದು ಸರಿಯಾದ ಸಮಯ’ ಎಂದು ಅವರು ಹೇಳಿದ್ದರು.

ಕಂಗನಾ ರಣಾವತ್ ಅವರು ಮೊದಲಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತಾ ಬಂದವರು. ಅವರು ಬಿಜೆಪಿಯ ಕಡೆಗೆ ಹಾಗೂ ಮೋದಿ ಸರ್ಕಾರದತ್ತ ಹೆಚ್ಚು ಒಲವು ಹೊಂದಿದ್ದರು. ಕಂಗನಾ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಬಗ್ಗೆ ಅಭಿಮಾನಿಗಳಿಗೆ ಖಾತ್ರಿ ಇತ್ತು. ಆದರೆ, ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇರುವಾಗಲೇ ಅವರು ರಾಜಕೀಯಕ್ಕೆ ಕಾಲಿಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

ಕಂಗನಾ ಟ್ವೀಟ್


ಕಂಗನಾ ಅವರು ಇತ್ತೀಚೆಗೆ ರಾಜಕೀಯದ ಬಗ್ಗೆ ಮಾತನಾಡಿದ್ದರು. ‘ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಉದ್ದೇಶ ಇದೆ. ಆದರೆ, ಈಗ ನಾನು ನಟಿ. ನಟನೆಗೆ ನನ್ನ ಮೊದಲ ಆದ್ಯತೆ. ಒಂದೊಮ್ಮೆ ಕೃಷ್ಣನ ಆಶೀರ್ವಾದ ಸಿಕ್ಕರೆ ನಾನು ಫೈಟ್ ಮಾಡುತ್ತೇನೆ’ ಎಂದು ಅವರು ಹೇಳಿದ್ದರು. ಅವರ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಈ ಬೆನ್ನಲ್ಲೇ ಅವರಿಗೆ ಟಿಕೆಟ್ ಸಿಕ್ಕಿದೆ. ಒಂದೊಮ್ಮೆ ಅವರು ರಾಜಕೀಯದಲ್ಲಿ ಯಶಸ್ಸು ಕಂಡರೆ ನಟನೆಯನ್ನು ತೊರೆಯುತ್ತಾರೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

ಕಂಗನಾ ರಣಾವತ್ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರ ಖ್ಯಾತಿ ಹೆಚ್ಚಿದೆ. ಸದ್ಯ ಅವರು ‘ಎಮರ್ಜೆನ್ಸಿ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವು 1975ರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೇರಿದ್ದ ತುರ್ತುಪರಿಸ್ಥಿತಿಯ ಕುರಿತು ಇದೆ. ಈ ಚಿತ್ರದಲ್ಲಿ ಅವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ