AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋರಾ ಫತೇಹಿ ಕಾರು ಅಪಘಾತ: ಈಗ ಹೇಗಿದೆ ನಟಿಯ ಪರಿಸ್ಥಿತಿ?

ಅಪಘಾತಕ್ಕೆ ಒಳಗಾಗಿರುವ ನಟಿ ನೋರಾ ಫತೇಹಿ ಅವರ ಕಾರಿನ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮುಂಬೈನಲ್ಲಿ ಈ ಅಪಘಾತ ಸಂಭವಿಸಿದೆ. ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬರು ಕಾರು ಓಡಿಸಿದ್ದರಿಂದ ಈ ಅವಘಡ ಉಂಟಾಗಿದೆ. ನೋರಾ ಫತೇಹಿ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ನೋರಾ ಫತೇಹಿ ಕಾರು ಅಪಘಾತ: ಈಗ ಹೇಗಿದೆ ನಟಿಯ ಪರಿಸ್ಥಿತಿ?
Nora Fatehi Car Accident
ಮದನ್​ ಕುಮಾರ್​
|

Updated on: Dec 21, 2025 | 1:14 PM

Share

ಖ್ಯಾತ ನಟಿ ನೋರಾ ಫತೇಹಿ (Nora Fatehi) ಅವರ ಅಭಿಮಾನಿಗಳಿಗೆ ಇದು ಕಹಿ ಸುದ್ದಿ. ಮುಂಬೈನಲ್ಲಿ ನೋರಾ ಚಲಿಸುತ್ತಿದ್ದ ಕಾರು ಅಪಘಾತಕ್ಕೆ (Car Accident) ಒಳಗಾಗಿದೆ. ಕುಡಿದು ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬನು ನೋರಾ ಅವರ ಕಾರಿಗೆ ಬಂದು ಡಿಕ್ಕಿ ಹೊಡೆದಿದ್ದಾನೆ. ಹಾಡುಹಗಲು 3 ಗಂಟೆಗೆ ಈ ಘಟನೆ ನಡೆದಿದೆ. ಇದರಿಂದಾಗಿ ನೋರಾ ಫತೇಹಿ ಅವರಿಗೆ ಚಿಕ್ಕ-ಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಅವರು ಸುರಕ್ಷಿತವಾಗಿದ್ದಾರೆ. ಆದರೆ ಅವರು ಈ ಘಟನೆಯಿಂದ ಆತಂತಕ್ಕೆ ಒಳಗಾಗಿದ್ದಾರೆ. ಕುಡಿದು ವಾಹನ ಚಾಲನೆ ಮಾಡಬೇಡಿ ಎಂದು ತಮ್ಮ ಅಭಿಮಾನಿಗಳಿಗೆ ನೋರಾ ಫತೇಹಿ ಬುದ್ಧಿಮಾತು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ನೋರಾ ಫತೇಹಿ ಅವರು ಪ್ರಯಾಣ ಮಾಡುತ್ತಿದ್ದರು. ಆಗ ಇನ್ನೊಂದು ಕಾರು ಬಂದು ಡಿಕ್ಕಿ ಹೊಡಿದಿದೆ. ಕೂಡಲೇ ನೋರಾ ಫತೇಹಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ವೈದ್ಯರು ಕೂಡಲೇ ಸಿ.ಟಿ. ಸ್ಕ್ಯಾನ್ ಮಾಡಿದರು. ಇಂಟರನಲ್​ ಬ್ಲೀಡಿಂಗ್ ಆಗಿರಬಹುದೇ ಎಂಬುದನ್ನು ಪರೀಕ್ಷಿಸಿದರು.

ನೋರಾ ಫತೇಹಿ ಅವರಿಗೆ ಯಾವುದೇ ರೀತಿಯಲ್ಲಿ ಗಂಭೀರ ಗಾಯಗಳು ಆಗಿಲ್ಲ ಎಂಬುದು ವೈದ್ಯರ ತಪಾಸಣೆಯಿಂದ ತಿಳಿದುಬಂತು. ಪ್ರಥಮ ಚಿಕಿತ್ಸೆ ಪಡೆದು ಸುಧಾರಿಸಿಕೊಂಡ ಬಳಿಕ ಅವರು ಈ ಮೊದಲೇ ಒಪ್ಪಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ನೋರಾ ಫತೇಹಿ ಅವರಿಗೆ ಅಪಘಾತ ಆಗಿದೆ ಎಂಬ ಸುದ್ದಿ ತಿಳಿದು ಅವರ ಅಭಿಮಾನಿಗಳಿಗೆ ಆತಂಕ ಆಗಿತ್ತು. ಈಗ ಸ್ವತಃ ನೋರಾ ಫತೇಹಿ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

‘ನಾನು ಈಗ ಚೆನ್ನಾಗಿದ್ದೇನೆ, ಬದುಕಿದ್ದೇನೆ’ ಎಂದು ಹೇಳುವ ಮೂಲಕ ಅಭಿಮಾನಿಗಳ ಆತಂಕವನ್ನು ನೋರಾ ಫತೇಹಿ ಅವರು ದೂರು ಮಾಡಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವವರ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದರೂ ಕೂಡ ನೇರಾ ಫತೇಹಿ ಅವರು ಕೆಲಸಕ್ಕೆ ಮರಳಿದ್ದಾರೆ.

ಇದನ್ನೂ ಓದಿ: ನೋರಾ ಫತೇಹಿ ಇಂಗ್ಲೀಷ್ ಹಾಡಿನ ಚಿತ್ರೀಕರಣ: ವಿಡಿಯೋ ನೋಡಿ

ಹಲವು ಪ್ರಾಜೆಕ್ಟ್​​ಗಳಲ್ಲಿ ನೋರಾ ಫತೇಹಿ ಅವರು ಬ್ಯುಸಿ ಆಗಿದ್ದಾರೆ. ನಟಿಯಾಗಿ ಮಾತ್ರವಲ್ಲದೇ ಡ್ಯಾನ್ಸರ್ ಆಗಿ ಅವರು ಹೆಚ್ಚು ಫೇಮಸ್ ಆಗಿದ್ದಾರೆ. ವಿದೇಶಿ ಮ್ಯೂಸಿಕ್ ಸೆಲೆಬ್ರಿಟಿಗಳ ಜೊತೆ ಕೂಡ ಅವರು ಕೈಜೋಡಿಸಿದ್ದಾರೆ. ಹಲವಾರು ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೆನಡಾ ಮೂಲದ ಅವರಿಗೆ ಈಗ 33 ವರ್ಷ ವಯಸ್ಸು. 80 ಕೋಟಿ ರೂಪಾಯಿಗೂ ಅಧಿಕ ಆಸ್ತಿ ಹೊಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.