Raj Kundra: ಶಿಲ್ಪಾ ಶೆಟ್ಟಿ ವರ್ತನೆಗೆ ತದ್ವಿರುದ್ಧವಾಗಿ ನಡೆದುಕೊಂಡ ರಾಜ್​ ಕುಂದ್ರಾ; ಅನುಮಾನ ಹುಟ್ಟಿಸಿದೆ ಈ ನಡೆ

Shilpa Shetty: ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಜಾಮೀನು ಪಡೆದು ಹೊರಬಂದ ಬಳಿಕ ಒಂದು ರೀತಿಯ ಅಜ್ಞಾತವಾಸದಲ್ಲಿ ಇದ್ದಾರೆ. ಯಾರ ಕಣ್ಣಿಗೂ ಕಾಣಿಸಿಕೊಳ್ಳುತ್ತಿಲ್ಲ. ಈಗ ಸೋಶಿಯಲ್​ ಮೀಡಿಯಾದಿಂದಲೂ ಕಣ್ಮರೆ ಆಗಿರುವುದು ಅನೇಕರಲ್ಲಿ ಸಂಶಯ ಹುಟ್ಟುಹಾಕಿದೆ.

Raj Kundra: ಶಿಲ್ಪಾ ಶೆಟ್ಟಿ ವರ್ತನೆಗೆ ತದ್ವಿರುದ್ಧವಾಗಿ ನಡೆದುಕೊಂಡ ರಾಜ್​ ಕುಂದ್ರಾ; ಅನುಮಾನ ಹುಟ್ಟಿಸಿದೆ ಈ ನಡೆ
ರಾಜ್​ ಕುಂದ್ರಾ, ಶಿಲ್ಪಾ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Nov 02, 2021 | 12:43 PM

ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಅವರ ಬದುಕು ಹಲವು ತಿರುವುಗಳನ್ನು ಪಡೆದುಕೊಂಡಿದೆ. ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ನಿರ್ಮಾಣ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿ ಜೈಲು ಸೇರಿದ ಬಳಿಕ ಅವರ ಇಡೀ ಕುಟುಂಬ ಮುಜುಗರ ಅನುಭವಿಸಬೇಕಾಯ್ತು. ಆದರೂ ಆ ಎಲ್ಲ ಕಳಂಕಗಳ ನಡುವೆಯೂ ಹಳೆಯ ಚಾರ್ಮ್​ಗೆ ಮರಳಿದ್ದಾರೆ ಶಿಲ್ಪಾ ಶೆಟ್ಟಿ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಿಕ್ಕಾಪಟ್ಟೆ ಆ್ಯಕ್ಟೀವ್​ ಆಗಿದ್ದಾರೆ. ಆದರೆ ಅವರಿಗೆ ತದ್ವಿರುದ್ಧವಾದಂತಹ ನಿರ್ಧಾರವನ್ನು ರಾಜ್​ ಕುಂದ್ರಾ ತೆಗೆದುಕೊಂಡಿದ್ದಾರೆ. ಅಂದರೆ, ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳನ್ನು ಅವರು ಡಿಲೀಟ್​ ಮಾಡಿದ್ದಾರೆ! ಇದು ಹಲವು ಅನುಮಾನಗಳಿಗೆ ಕಾರಣ ಆಗಿದೆ.

ಜುಲೈ 19ರಂದು ರಾಜ್​ ಕುಂದ್ರ ಅರೆಸ್ಟ್​ ಆಗಿದ್ದರು. ಅದಕ್ಕೂ ಮೊದಲು ಅವರು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಆ್ಯಕ್ಟೀವ್​ಆಗಿದ್ದರು. ಬಗೆಬಗೆಯ ಫೋಟೋ ಮತ್ತು ವಿಡಿಯೋಗಳನ್ನು ಅವರು ಶೇರ್​ ಮಾಡಿಕೊಳ್ಳುತ್ತಿದ್ದರು. ಆದರೆ ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ ಕೇಳಿಬಂದ ಬಳಿಕ ಸೋಶಿಯಲ್​ ಮೀಡಿಯಾದಲ್ಲಿ ರಾಜ್​ ಕುಂದ್ರಾ ಬಹುತೇಕ ಕಣ್ಮರೆ ಆಗಿಬಿಟ್ಟರು. ಜಾಮೀನು ಪಡೆದು ಹೊರಬಂದು ಹಲವು ದಿನಗಳು ಕಳೆದರೂ ಅವರ ಖಾತೆಯಲ್ಲಿ ಯಾವುದೇ ಹೊಸ ಪೋಸ್ಟ್​ ಕಾಣಿಸಿಕೊಂಡಿಲ್ಲ.

ಸೋಶಿಯಲ್​ ಮೀಡಿಯಾದಲ್ಲಿ ಶೇ.100ರಷ್ಟು ಸೈಲೆಂಟ್​ ಆಗಿದ್ದ ರಾಜ್​ ಕುಂದ್ರಾ ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ ಮತ್ತು ಟ್ವಿಟರ್​ ಖಾತೆಗಳನ್ನು ಅವರು ಡಿಲೀಟ್​ ಮಾಡಿದ್ದಾರೆ. ಈ ರೀತಿ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಮುನ್ನ ಅವರು ಯಾವುದೇ ಸೂಚನೆಯನ್ನೂ ನೀಡಿಲ್ಲ. ಗಂಡನ ಈ ವರ್ತನೆ ಬಗ್ಗೆ ಶಿಲ್ಪಾ ಶೆಟ್ಟಿ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಜಾಮೀನು ಪಡೆದು ಹೊರಬಂದ ಬಳಿಕ ರಾಜ್​ ಕುಂದ್ರಾ ಒಂದು ರೀತಿಯಲ್ಲಿ ಅಜ್ಞಾತವಾಸ ಮಾಡುತ್ತಿದ್ದಾರೆ. ಅವರು ಯಾರ ಕಣ್ಣಿಗೂ ಕಾಣಿಸಿಕೊಳ್ಳುತ್ತಿಲ್ಲ. ಈಗ ಸೋಶಿಯಲ್​ ಮೀಡಿಯಾದಿಂದಲೂ ಕಣ್ಮರೆ ಆಗಿರುವುದು ಅನೇಕರಲ್ಲಿ ಸಂಶಯ ಹುಟ್ಟುಹಾಕಿದೆ. ಅವರ ಮುಂದಿನ ನಡೆ ಏನಿರಬಹುದು ಎಂಬ ಪ್ರಶ್ನೆ ಮೂಡಿದೆ.

ನಟಿಯರನ್ನು, ಮಾಡೆಲ್​ಗಳನ್ನು, ಅಮಾಯಕ ಯುವತಿಯರನ್ನು ಬಳಸಿಕೊಂಡು ಅಶ್ಲೀಲ ಸಿನಿಮಾ ನಿರ್ಮಾಣ ಮಾಡುತ್ತಿದ್ದರು ಎಂಬ ಆರೋಪ ರಾಜ್​ ಕುಂದ್ರಾ ಅವರ ಮೇಲಿದೆ. ನಟಿ ಶೆರ್ಲಿನ್​ ಚೋಪ್ರಾ ಅವರು ರಾಜ್​ ಕುಂದ್ರಾ ಮೇಲೆ ಅನೇಕ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಇಬ್ಬರ ನಡುವೆ ಕಾನೂನು ಸಮರ ನಡೆಯುತ್ತಿದೆ.

ಇದನ್ನೂ ಓದಿ:

Shilpa Shetty: ಪತಿ ರಾಜ್​ ಕುಂದ್ರಾ ಚಿಂತೆ ಮರೆತು ಬಿಂದಾಸ್​ ಆಗಿ ಕುಣಿದು ಕುಪ್ಪಳಿಸಿದ ನಟಿ ಶಿಲ್ಪಾ ಶೆಟ್ಟಿ; ವಿಡಿಯೋ ವೈರಲ್​

ಶಿಲ್ಪಾ ಶೆಟ್ಟಿ ಮನೆಯಲ್ಲಿ ನವರಾತ್ರಿ ವೈಭವ; ಮಕ್ಕಳಿಗೆ ಕಲಿಸುತ್ತಿರುವ ಪಾಠ ಎಂಥದ್ದು?

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ