ನಟಿ ತಮನ್ನಾ (Tamannaah) ಅವರು ವೈಯಕ್ತಿಕ ವಿಚಾರಗಳನ್ನು ಸಾರ್ವಜನಿಕವಾಗಿ ಹೇಳಿಕೊಳ್ಳಲು ಹೆಚ್ಚು ಇಷ್ಟಪಡುವುದಿಲ್ಲ. ಲವ್ ಲೈಫ್ ವಿಚಾರದಲ್ಲಂತೂ ಗೌಪ್ಯತೆ ಕಾಪಾಡಿಕೊಳ್ಳಲು ಆದ್ಯತೆ ನೀಡುತ್ತಾರೆ. ಇತ್ತೀಚೆಗೆ ಅವರು ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಇದನ್ನು ತಮನ್ನಾ ಅಲ್ಲಗಳೆದಿದ್ದರು. ಆದರೆ, ಈಗ ಅವರ ಫ್ಯಾನ್ ಪೇಜ್ಗಳಲ್ಲಿ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಹಿಂದಿ ನಟ ವಿಜಯ್ ವರ್ಮಾಗೆ (Vijay Varma) ಅವರು ಕಿಸ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ವಿಚಾರ ಸಾಕಷ್ಟು ಅಚ್ಚರಿ ಮೂಡಿಸಿದೆ.
ಹೊಸ ವರ್ಷ ಆಚರಿಸಿಕೊಳ್ಳಲು ಅನೇಕ ಸೆಲೆಬ್ರಿಟಿಗಳು ಬೇರೆ ಬೇರೆ ಕಡೆಗಳಿಗೆ ತೆರಳಿದ್ದರು. ಅದೇ ರೀತಿ ತಮನ್ನಾ ಈ ವರ್ಷ ಗೋವಾದಲ್ಲಿ ಹೊಸ ವರ್ಷವನ್ನು ವೆಲ್ಕಮ್ ಮಾಡಿದ್ದಾರೆ. ತಮನ್ನಾ ಜತೆ ವಿಜಯ್ ವರ್ಮಾ ಕೂಡ ಇದ್ದರು ಎನ್ನಲಾಗಿದೆ. ಇಬ್ಬರೂ ಒಟ್ಟಾಗಿ ಸಮಯ ಕಳೆದ ಫೋಟೋಗಳು ವೈರಲ್ ಆಗಿವೆ. ಇದರ ಜತೆಗೆ ವಿಡಿಯೋ ಒಂದು ಸಾಕಷ್ಟು ಅಚ್ಚರಿ ಮೂಡಿಸಿದೆ.
ಈ ವಿಡಿಯೋದಲ್ಲಿ ತಮನ್ನಾ ಹಾಗೂ ವಿಜಯ್ ಒಟ್ಟಿಗೆ ನಿಂತಿದ್ದು, ಕಿಸ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ವಿಡಿಯೋದಲ್ಲಿ ಇದರ ಸ್ಪಷ್ಟ ಚಿತ್ರಣ ಇಲ್ಲ. ಫ್ಯಾನ್ಪೇಜ್ಗಳು ಮಾತ್ರ ಇದು ತಮನ್ನಾ ಹಾಗೂ ವಿಜಯ್ ವರ್ಮಾ ಎಂದೇ ಹೇಳುತ್ತಿವೆ. ಈ ವಿಡಿಯೋದ ಅಸಲಿ ವಿಚಾರ ಇನ್ನಷ್ಟೇ ತಿಳಿಯಬೇಕಿದೆ. ವಿಜಯ್ ಬಿಳಿ ಬಣ್ಣದ ಬಟ್ಟೆ ಧರಿಸಿದ್ದಾರೆ. ತಮನ್ನಾ ಅವರು ಪಿಂಕ್ ಬಣ್ಣದ ಡ್ರೆಸ್ ಹಾಕಿದ್ದಾರೆ.
ಇದನ್ನೂ ಓದಿ: Tamannaah Birthday: ‘ಮಿಲ್ಕಿ ಬ್ಯೂಟಿ’ ಎಂದು ಕರೆದರೆ ತಮನ್ನಾಗೆ ಬರುತ್ತೆ ಬಲು ಕೋಪ
ವಿಜಯ್ ವರ್ಮಾ ಅವರಿಗೆ ಬಾಲಿವುಡ್ನಲ್ಲಿ ಸಾಕಷ್ಟು ಬೇಡಿಕೆ ಇದೆ. 2016ರ ಸೂಪರ್ ಹಿಟ್ ಚಿತ್ರ ‘ಪಿಂಕ್’, ‘ಗಲ್ಲಿ ಬಾಯ್’ ಮೊದಲಾದ ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. ‘ಲಸ್ಟ್ ಸ್ಟೋರಿಸ್ 2’ನಲ್ಲಿ ಈ ಜೋಡಿ ಒಟ್ಟಾಗಿ ನಟಿಸಿದೆ ಎನ್ನಲಾಗಿದೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಹುಟ್ಟಿರಬಹುದು ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ. ಈಗ ವೈರಲ್ ಆಗಿರುವ ವಿಡಿಯೋಗೆ ಸಂಬಂಧಿಸಿ ತಮನ್ನಾ ಕಡೆಯಿಂದ ಸ್ಪಷ್ಟನೆ ಸಿಗಬೇಕಿದೆ. ತಮನ್ನಾ ಅವರು ಹಲವು ಪ್ರಾಜೆಕ್ಟ್ಗಳಲ್ಲಿ ಬ್ಯುಸಿ ಇದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ