Adah Sharma: ‘ಬುರ್ಖಾ ಧರಿಸಿದ ಬಳಿಕ ಯಶಸ್ಸು ಸಿಕ್ತು’; ಗ್ಲಾಮರಸ್ ಅದಾ ಶರ್ಮಾ ಬಗ್ಗೆ ಟೀಕೆ

ಅದಾ ಶರ್ಮಾ ಸದಾ ಬೋಲ್ಡ್ ಫೋಟೋ ಹಂಚಿಕೊಳ್ಳುತ್ತಾರೆ. ಅವರ ಇನ್​ಸ್ಟಾಗ್ರಾಮ್ ಖಾತೆ ತೆರೆದರೆ ಈ ರೀತಿಯ ಹಲವು ಫೋಟೋಗಳು ಸಿಗುತ್ತವೆ.

Adah Sharma: ‘ಬುರ್ಖಾ ಧರಿಸಿದ ಬಳಿಕ ಯಶಸ್ಸು ಸಿಕ್ತು’; ಗ್ಲಾಮರಸ್ ಅದಾ ಶರ್ಮಾ ಬಗ್ಗೆ ಟೀಕೆ
ಅದಾ ಶರ್ಮಾ
Follow us
|

Updated on: May 15, 2023 | 6:39 AM

ನಟಿ ಅದಾ ಶರ್ಮಾ (Adah Sharma) ಅವರು ಚಿತ್ರರಂಗದಲ್ಲಿ ತೊಡಗಿಕೊಂಡು ಹಲವು ವರ್ಷಗಳು ಕಳೆದಿವೆ. ಅವರು ಇಲ್ಲಿಯವರೆಗೆ ವಿವಿಧ ರೀತಿಯ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಅವರು ‘ದಿ ಕೇರಳ ಸ್ಟೋರಿ’ ಚಿತ್ರಕ್ಕಾಗಿ (The Kerala Story Movie) ಬೇರೆಯದೇ ಅವತಾರ ತಾಳಿದ್ದಾರೆ. ಈ ಸಿನಿಮಾ ಯಶಸ್ಸು ಕಂಡಿದೆ. ನಿತ್ಯ ಈ ಚಿತ್ರ ಕೋಟಿ ಕೋಟಿ ಗಳಿಕೆ ಮಾಡುತ್ತಿದೆ. ಅದಾ ಶರ್ಮಾ ವೃತ್ತಿ ಬದುಕಿನಲ್ಲೇ ಇದು ದೊಡ್ಡ ಯಶಸ್ಸು. ಅದಾ ಶರ್ಮಾ ಅವರ ಈ ಯಶಸ್ಸಿನ ಬಗ್ಗೆ ಅನೇಕರು ಟೀಕೆ ಮಾಡಿದ್ದಾರೆ. ಆದರೆ, ಅವರು ಇದಕ್ಕೆ ಪ್ರತಿಕ್ರಿಯಿಸೋ ಗೋಜಿಗೆ ಹೋಗಿಲ್ಲ.

ನಟಿಯರು ತೆರೆಮೇಲೆ ಕಾಣಿಸಿಕೊಳ್ಳುವುದಕ್ಕೂ, ನಿಜ ಜೀವನದಲ್ಲಿ ಇರುವುದಕ್ಕೂ ಸಾಕಷ್ಟು ವ್ಯತ್ಯಾಸ ಇರುತ್ತದೆ. ತೆರೆಮೇಲೆ ಟ್ರೆಡಿಷನಲ್ ಲುಕ್​ನಲ್ಲಿ ಕಾಣಿಸಿಕೊಳ್ಳುವ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಹಾಟ್ ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಇದನ್ನೆಲ್ಲ ಸಹಿಸೋಕೆ ಅಭಿಮಾನಿಗಳಿಗೆ ಸಾಧ್ಯವಾಗುವುದಿಲ್ಲ. ಅದಾ ಶರ್ಮಾ ವಿಚಾರದಲ್ಲೂ ಹೀಗೆಯೇ ಆಗಿದೆ. ಅವರು ಸಿಕ್ಕಾಪಟ್ಟೆ ಟೀಕೆ ಎದುರಿಸಿದ್ದಾರೆ.

ಅದಾ ಶರ್ಮಾ ಸದಾ ಬೋಲ್ಡ್ ಫೋಟೋ ಹಂಚಿಕೊಳ್ಳುತ್ತಾರೆ. ಅವರ ಇನ್​ಸ್ಟಾಗ್ರಾಮ್ ಖಾತೆ ತೆರೆದರೆ ಈ ರೀತಿಯ ಹಲವು ಫೋಟೋಗಳು ಸಿಗುತ್ತವೆ. ಸಿನಿಮಾದಲ್ಲೂ ಅವರು ಪಕ್ಕದ ಮನೆಯ ಹುಡುಗಿ ಪಾತ್ರ ಮಾಡಿದ್ದೇ ಹೆಚ್ಚು. ಆ ಪಾತ್ರಗಳನ್ನು ಮಾಡಿ ಗೆಲುವು ಪಡೆದಿರಲಿಲ್ಲ. ಆದರೆ, ‘ದಿ ಕೇರಳ ಸ್ಟೋರಿ’ ಅದಾ ವೃತ್ತಿ ಜೀವನವನ್ನೇ ಬದಲಾಯಿಸಿತು. ಹೀಗಾಗಿ, ಅನೇಕರು ನಟಿಯನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: Adah Sharma: ಬ್ಲೂ ವೇಲ್​ ಕುರಿತ ಸಿನಿಮಾದಲ್ಲಿ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ; ಈ ಚಿತ್ರದ ಕಥೆ ಏನು?

‘ಅದಾ ಶರ್ಮಾ ಎಷ್ಟೇ ಗ್ಲಾಮರಸ್ ಆಗಿ ಕಾಣಿಸಿಕೊಂಡರೂ ಜನರು ಅವರನ್ನು ಗೆಲ್ಲಿಸಲಿಲ್ಲ. ಬುರ್ಖಾ ಹಾಕಿದ ಬಳಿಕ ಅವರಿಗೆ ಯಶಸ್ಸು ಸಿಕ್ಕಿದೆ’ ಎನ್ನುವ ಮಾತುಗಳು ಕೇಳಿ ಬಂದಿವೆ. ಆದರೆ, ಈ ಮಾತಿಗೆಲ್ಲ ಅದಾ ಶರ್ಮಾ ಕಿವಿಕೊಟ್ಟಿಲ್ಲ. ಅವರು ಈ ಯಶಸ್ಸನ್ನು ಎಂಜಾಯ್ ಮಾಡುತ್ತಿದ್ದಾರೆ.

ಸದ್ಯ ‘ದಿ ಕೇರಳ ಸ್ಟೋರಿ’ ಕಲೆಕ್ಷನ್ 113 ಕೋಟಿ ರೂಪಾಯಿ ದಾಟಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಮತ್ತಷ್ಟು ಅಬ್ಬರದ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಅದಾ ಶರ್ಮಾ ಅವರನ್ನು ಹುಡುಕಿಕೊಂಡು ಅನೇಕ ಆಫರ್​ಗಳು ಬರುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್