The Kerala Story: ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ನಲ್ಲಿ ದಿಢೀರ್​ ಏರಿಕೆ; 113 ಕೋಟಿ ರೂಪಾಯಿ ತಲುಪಿದ ಒಟ್ಟು ಗಳಿಕೆ

The Kerala Story Box Office Collection: ಇನ್ನೂ ಒಂದಷ್ಟು ದಿನಗಳ ಕಾಲ ‘ದಿ ಕೇರಳ ಸ್ಟೋರಿ’ ಸಿನಿಮಾ ಚಿತ್ರಮಂದಿರದಲ್ಲಿ ಉತ್ತಮ ಕಲೆಕ್ಷನ್​ ಮಾಡಲಿದೆ. ಸದ್ಯಕ್ಕಂತೂ ಈ ಸಿನಿಮಾದ ಹವಾ ತಗ್ಗುವಂತೆ ಕಾಣುತ್ತಿಲ್ಲ.

The Kerala Story: ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ನಲ್ಲಿ ದಿಢೀರ್​ ಏರಿಕೆ; 113 ಕೋಟಿ ರೂಪಾಯಿ ತಲುಪಿದ ಒಟ್ಟು ಗಳಿಕೆ
ಅದಾ ಶರ್ಮಾ
Follow us
ಮದನ್​ ಕುಮಾರ್​
|

Updated on: May 14, 2023 | 3:14 PM

ಸುದೀಪ್ತೋ ಸೇನ್​ ನಿರ್ದೇಶನದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ತೆರೆಕಂಡು 10 ದಿನ ಕಳೆದಿದೆ. 9 ದಿನಗಳ ಕಲೆಕ್ಷನ್​ ರಿಪೋರ್ಟ್​ ಸಿಕ್ಕಿದೆ. ರಿಲೀಸ್​ ಆದಾಗಿನಿಂದ ಇಂದಿನ ತನಕ ಪ್ರತಿ ದಿನವೂ ಈ ಸಿನಿಮಾ ಉತ್ತಮ ಪ್ರದರ್ಶನ ಕಂಡಿದೆ. ದಿನದಿಂದ ದಿನಕ್ಕೆ ಈ ಚಿತ್ರದ ಕಲೆಕ್ಷನ್​ (The Kerala Story Collection) ಹೆಚ್ಚುತ್ತಿದೆ ಎಂಬುದು ಗಮನಿಸಬೇಕಾದ ಅಂಶ. ಎರಡನೇ ಶನಿವಾರವಾರ ಮೇ 13ರಂದು ‘ದಿ ಕೇರಳ ಸ್ಟೋರಿ’ ಸಿನಿಮಾದ ಗಳಿಕೆಯಲ್ಲಿ ದಿಢೀರ್​ ಏರಿಕೆ ಆಗಿದೆ. 9ನೇ ದಿನ ಈ ಸಿನಿಮಾ 19.50 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಅಲ್ಲಿಗೆ, ಚಿತ್ರದ ಒಟ್ಟು ಕಲೆಕ್ಷನ್​ 113 ಕೋಟಿ ರೂಪಾಯಿ ಆಗಿದೆ. ಈ ಗೆಲುವಿನಿಂದ ನಟಿ ಅದಾ ಶರ್ಮಾ (Adah Sharma) ಅವರ ಖ್ಯಾತಿ ಹೆಚ್ಚಾಗಿದೆ. ಹೊಸ ಅವಕಾಶಗಳು ಅವರನ್ನು ಹುಡುಗಿಕೊಂಡು ಬರುತ್ತಿವೆ. ಇನ್ನೂ ಒಂದಷ್ಟು ದಿನಗಳ ಕಾಲ ‘ದಿ ಕೇರಳ ಸ್ಟೋರಿ’ ಸಿನಿಮಾ ಚಿತ್ರಮಂದಿರದಲ್ಲಿ ಉತ್ತಮ ಕಲೆಕ್ಷನ್​ ಮಾಡಲಿದೆ.

‘ದಿ ಕೇರಳ ಸ್ಟೋರಿ’ ಚಿತ್ರದ ಕಲೆಕ್ಷನ್​ ರಿಪೋರ್ಟ್​:

1ನೇ ದಿನ: 8.03 ಕೋಟಿ ರೂ.

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

2ನೇ ದಿನ: 11.22 ಕೋಟಿ ರೂ.

3ನೇ ದಿನ: 16.40 ಕೋಟಿ ರೂ.

4ನೇ ದಿನ: 10.07 ಕೋಟಿ ರೂ.

5ನೇ ದಿನ: 11.14 ಕೋಟಿ ರೂ.

6ನೇ ದಿನ: 12 ಕೋಟಿ ರೂ.

7ನೇ ದಿನ: 12.50 ಕೋಟಿ ರೂ.

8ನೇ ದಿನ: 12.23 ಕೋಟಿ ರೂ.

9ನೇ ದಿನ: 19.50 ಕೋಟಿ ರೂ.

ಇದನ್ನೂ ಓದಿ: Adah Sharma: ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆಯುವ ಅದಾ ಶರ್ಮಾ; ಇಲ್ಲಿದೆ ಫೋಟೋಸ್

ಭಾರತದ ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಧೂಳೆಬ್ಬಿಸಿದೆ. ವಿದೇಶದಲ್ಲೂ ತನ್ನ ಆರ್ಭಟ ಶುರುಮಾಡಿದೆ. ಅಮೆರಿಕಾ, ಆಸ್ಟ್ರೇಲಿಯಾ ಮುಂತಾದ ಕಡೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಅಲ್ಲಿಯೂ ಕೂಡ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ವಿದೇಶದಲ್ಲಿ ಸಿನಿಮಾ ಬಿಡುಗಡೆ ಆಗಿರುವುದರಿಂದ ಹೆಚ್ಚಿನ ಜನರನ್ನು ತಲುಪಲು ಸಹಕಾರಿ ಆಗಿದೆ. ಚಿತ್ರದ ಟೋಟಲ್​ ಕಲೆಕ್ಷನ್​ ಹೆಚ್ಚುತ್ತಿದೆ.

ಹೊಸ ಸಿಮಾದಲ್ಲಿ ಅದಾ ಶರ್ಮಾ:

ನಟಿ ಅದಾ ಶರ್ಮಾ ಅವರು ಈಗ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ವರ್ಷ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಗಮನ ಸೆಳೆದಿದೆ. ಅವರಿಗೆ ಮತ್ತೊಂದು ದೊಡ್ಡ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ‘ದಿ ಗೇಮ್​ ಆಫ್​ ಗಿರ್ಗಿಟ್​’ ಎಂಬ ಸಿನಿಮಾಗೆ ಅದಾ ಶರ್ಮಾ ಅವರು ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್​ನ ಖ್ಯಾತ ನಟ ಶ್ರೇಯಸ್​ ತಲ್ಪಡೆ ಕೂಡ ನಟಿಸುತ್ತಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಭಾರಿ ಕುಖ್ಯಾತಿ ಪಡೆದಿದ್ದ ಬ್ಲೂ ವೇಲ್​ ಗೇಮ್​ ಕುರಿತು ಈ ಸಿನಿಮಾ ಸಿದ್ಧವಾಗಲಿದೆ ಎಂಬುದು ವಿಶೇಷ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್