
ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ತೆರೆಕಂಡು 10 ದಿನ ಕಳೆದಿದೆ. 9 ದಿನಗಳ ಕಲೆಕ್ಷನ್ ರಿಪೋರ್ಟ್ ಸಿಕ್ಕಿದೆ. ರಿಲೀಸ್ ಆದಾಗಿನಿಂದ ಇಂದಿನ ತನಕ ಪ್ರತಿ ದಿನವೂ ಈ ಸಿನಿಮಾ ಉತ್ತಮ ಪ್ರದರ್ಶನ ಕಂಡಿದೆ. ದಿನದಿಂದ ದಿನಕ್ಕೆ ಈ ಚಿತ್ರದ ಕಲೆಕ್ಷನ್ (The Kerala Story Collection) ಹೆಚ್ಚುತ್ತಿದೆ ಎಂಬುದು ಗಮನಿಸಬೇಕಾದ ಅಂಶ. ಎರಡನೇ ಶನಿವಾರವಾರ ಮೇ 13ರಂದು ‘ದಿ ಕೇರಳ ಸ್ಟೋರಿ’ ಸಿನಿಮಾದ ಗಳಿಕೆಯಲ್ಲಿ ದಿಢೀರ್ ಏರಿಕೆ ಆಗಿದೆ. 9ನೇ ದಿನ ಈ ಸಿನಿಮಾ 19.50 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಅಲ್ಲಿಗೆ, ಚಿತ್ರದ ಒಟ್ಟು ಕಲೆಕ್ಷನ್ 113 ಕೋಟಿ ರೂಪಾಯಿ ಆಗಿದೆ. ಈ ಗೆಲುವಿನಿಂದ ನಟಿ ಅದಾ ಶರ್ಮಾ (Adah Sharma) ಅವರ ಖ್ಯಾತಿ ಹೆಚ್ಚಾಗಿದೆ. ಹೊಸ ಅವಕಾಶಗಳು ಅವರನ್ನು ಹುಡುಗಿಕೊಂಡು ಬರುತ್ತಿವೆ. ಇನ್ನೂ ಒಂದಷ್ಟು ದಿನಗಳ ಕಾಲ ‘ದಿ ಕೇರಳ ಸ್ಟೋರಿ’ ಸಿನಿಮಾ ಚಿತ್ರಮಂದಿರದಲ್ಲಿ ಉತ್ತಮ ಕಲೆಕ್ಷನ್ ಮಾಡಲಿದೆ.
1ನೇ ದಿನ: 8.03 ಕೋಟಿ ರೂ.
2ನೇ ದಿನ: 11.22 ಕೋಟಿ ರೂ.
3ನೇ ದಿನ: 16.40 ಕೋಟಿ ರೂ.
4ನೇ ದಿನ: 10.07 ಕೋಟಿ ರೂ.
5ನೇ ದಿನ: 11.14 ಕೋಟಿ ರೂ.
6ನೇ ದಿನ: 12 ಕೋಟಿ ರೂ.
7ನೇ ದಿನ: 12.50 ಕೋಟಿ ರೂ.
8ನೇ ದಿನ: 12.23 ಕೋಟಿ ರೂ.
9ನೇ ದಿನ: 19.50 ಕೋಟಿ ರೂ.
ಇದನ್ನೂ ಓದಿ: Adah Sharma: ಕ್ಯೂಟ್ ಲುಕ್ನಲ್ಲಿ ಗಮನ ಸೆಳೆಯುವ ಅದಾ ಶರ್ಮಾ; ಇಲ್ಲಿದೆ ಫೋಟೋಸ್
ಭಾರತದ ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಧೂಳೆಬ್ಬಿಸಿದೆ. ವಿದೇಶದಲ್ಲೂ ತನ್ನ ಆರ್ಭಟ ಶುರುಮಾಡಿದೆ. ಅಮೆರಿಕಾ, ಆಸ್ಟ್ರೇಲಿಯಾ ಮುಂತಾದ ಕಡೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಅಲ್ಲಿಯೂ ಕೂಡ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ವಿದೇಶದಲ್ಲಿ ಸಿನಿಮಾ ಬಿಡುಗಡೆ ಆಗಿರುವುದರಿಂದ ಹೆಚ್ಚಿನ ಜನರನ್ನು ತಲುಪಲು ಸಹಕಾರಿ ಆಗಿದೆ. ಚಿತ್ರದ ಟೋಟಲ್ ಕಲೆಕ್ಷನ್ ಹೆಚ್ಚುತ್ತಿದೆ.
ನಟಿ ಅದಾ ಶರ್ಮಾ ಅವರು ಈಗ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ವರ್ಷ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ. ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಗಮನ ಸೆಳೆದಿದೆ. ಅವರಿಗೆ ಮತ್ತೊಂದು ದೊಡ್ಡ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದೆ. ‘ದಿ ಗೇಮ್ ಆಫ್ ಗಿರ್ಗಿಟ್’ ಎಂಬ ಸಿನಿಮಾಗೆ ಅದಾ ಶರ್ಮಾ ಅವರು ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್ನ ಖ್ಯಾತ ನಟ ಶ್ರೇಯಸ್ ತಲ್ಪಡೆ ಕೂಡ ನಟಿಸುತ್ತಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ಭಾರಿ ಕುಖ್ಯಾತಿ ಪಡೆದಿದ್ದ ಬ್ಲೂ ವೇಲ್ ಗೇಮ್ ಕುರಿತು ಈ ಸಿನಿಮಾ ಸಿದ್ಧವಾಗಲಿದೆ ಎಂಬುದು ವಿಶೇಷ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.