The Kerala Story: 2ನೇ ದಿನ ‘ದಿ ಕೇರಳ ಸ್ಟೋರಿ’ ಸಿನಿಮಾಗೆ 12 ಕೋಟಿ ರೂಪಾಯಿ ಕಲೆಕ್ಷನ್​; ಇನ್ನೂ ಹೆಚ್ಚಾಗಲಿದೆ ಕಮಾಯಿ

|

Updated on: May 07, 2023 | 1:33 PM

The Kerala Story Box Office Collection: ಅದಾ ಶರ್ಮಾ ಮುಖ್ಯ ಭೂಮಿಕೆ ನಿಭಾಯಿಸಿರುವ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ವಿವಾದಾತ್ಮಕ ಕಥಾಹಂದರ ಇದೆ. ಮತಾಂತರದ ಕುರಿತು ಈ ಚಿತ್ರದಲ್ಲಿ ತೋರಿಸಲಾಗಿದೆ.

The Kerala Story: 2ನೇ ದಿನ ‘ದಿ ಕೇರಳ ಸ್ಟೋರಿ’ ಸಿನಿಮಾಗೆ 12 ಕೋಟಿ ರೂಪಾಯಿ ಕಲೆಕ್ಷನ್​; ಇನ್ನೂ ಹೆಚ್ಚಾಗಲಿದೆ ಕಮಾಯಿ
ಅದಾ ಶರ್ಮಾ
Follow us on

ಮೇ 5ರಂದು ಬಿಡುಗಡೆಯಾದ ದಿ ಕೇರಳ ಸ್ಟೋರಿ’ (The Kerala Story) ಸಿನಿಮಾಗೆ ಜನಮೆಚ್ಚುಗೆ ಸಿಕ್ಕಿದೆ. ಹಲವು ಕಾರಣಗಳಿಗಾಗಿ ಈ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಅದೇ ರೀತಿ ಬಾಕ್ಸ್​ ಆಫೀಸ್​ನಲ್ಲಿ ಸಖತ್​ ಸದ್ದು ಮಾಡುತ್ತಿದೆ. ಮೊದಲ ದಿನ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 8 ಕೋಟಿ ರೂಪಾಯಿ ಕಲೆಕ್ಷನ್​ (Box Office Collection) ಆಗಿತ್ತು. ಎರಡನೇ ದಿನ ಕಲೆಕ್ಷನ್​ನಲ್ಲಿ ಗಣನೀಯ ಏರಿಕೆ ಕಂಡಿದೆ. ಇದರಿಂದ ನಿರ್ಮಾಪಕರಿಗೆ ಬಹಳ ಖುಷಿ ಆಗಿದೆ. ದಿನದಿಂದ ದಿನಕ್ಕೆ ಕಲೆಕ್ಷನ್​ ಹೆಚ್ಚುತ್ತಿರುವುದರಿಂದ ಅಂತಿಮವಾಗಿ ಈ ಚಿತ್ರದ ಗಳಿಕೆ ಎಷ್ಟಾಗಲಿದೆ ಎಂಬ ಕೌತುಕ ಮೂಡಿದೆ. ಎರಡನೇ ದಿನವಾದ ಶನಿವಾರ (ಮೇ 6) ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ 12 ಕೋಟಿ ರೂಪಾಯಿ ಗಳಿಸಿದೆ. ಅಲ್ಲಿಗೆ, ಚಿತ್ರದ ಒಟ್ಟು ಕಲೆಕ್ಷನ್ (The Kerala Story Collection)​ 20 ಕೋಟಿ ರೂಪಾಯಿ ಆಗಿದೆ ಎಂದು ಟ್ರೇಡ್​ ವಿಶ್ಲೇಷಕ ರಮೇಶ್​ ಬಾಲಾ ಅವರು ಸೋಶಿಯಲ್​ ಮೀಡಿಯಾ​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಅದಾ ಶರ್ಮಾ ಮುಖ್ಯ ಭೂಮಿಕೆ ನಿಭಾಯಿಸಿರುವ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ವಿವಾದಾತ್ಮಕ ಕಥಾಹಂದರ ಇದೆ. ಐಸಿಎಸ್​ ಭಯೋತ್ಪಾಕದ ಸಂಘಟನೆಗಳ ಸಂಚಿನಿಂದ ಕೇರಳದಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್​ ಯುವತಿಯರ ಮತಾಂತರ ಮಾಡಲಾಗುತ್ತಿದೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ‘ದಿ ಕೇರಳ ಸ್ಟೋರಿ’ ಕುರಿತಂತೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದದ ಚರ್ಚೆ ಜೋರಾಗಿದೆ.

ಇದನ್ನೂ ಓದಿ
‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ತಡೆ ನೀಡಿ ಎಂದು ಸಲ್ಲಿಕೆ ಆಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ
‘ದಿ ಕೇರಳ ಸ್ಟೋರಿ’ ಟ್ರೇಲರ್ ವಿರುದ್ಧ ಅಸಮಾಧಾನಗೊಂಡ ಕೇರಳ ಸಿಎಂ; ಚಿತ್ರಕ್ಕೆ ಬೀಳಲಿದೆ ತಡೆ?
‘ಹಿಜಾಬ್ ಹಾಕಿದವರ ಮೇಲೆ ಅತ್ಯಾಚಾರ ಆಗಲ್ಲ, ಅಲ್ಲಾಹ್ ಮಾತ್ರ ಕಾಪಾಡುವವನು’; ಚರ್ಚೆ ಹುಟ್ಟುಹಾಕಿದ ‘ದಿ ಕೇರಳ ಸ್ಟೋರಿ’ ಟ್ರೇಲರ್
The Kerala Story: ‘ದಿ ಕೇರಳ ಸ್ಟೋರಿ’ ವಿವಾದ: ‘ನಾವು ಸಾಕ್ಷಿ ಇಲ್ಲದೇ ಏನನ್ನೂ ಹೇಳಲ್ಲ’ ಎಂದ ನಿರ್ಮಾಪಕ ವಿಪುಲ್​ ಶಾ

ನಟಿ ಅದಾ ಶರ್ಮಾ ಅವರು ಈವರೆಗೆ ಕಲರ್​ಫುಲ್​ ಆದಂತಹ ಪಾತ್ರಗಳನ್ನೇ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆದರೆ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಅವರು ಒಂದು ಭಿನ್ನವಾದ ಪಾತ್ರ ಮಾಡಿದ್ದಾರೆ. ಆ ಮೂಲಕ ಸುದ್ದಿ ಆಗುತ್ತಿದ್ದಾರೆ. ಶಾಲಿನಿ ಉನ್ನಿಕೃಷ್ಣನ್​ ಅಲಿಯಾಸ್​ ಫಾತಿಮಾ ಎಂಬ ಪಾತ್ರದಲ್ಲಿ ಅದಾ ಶರ್ಮಾ ಅವರು ನಟಿಸಿದ್ದಾರೆ. ಹಲವು ಶೇಡ್​ಗಳನ್ನು ಹೊಂದಿರುವ ಈ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ. ನೋಡುಗರಿಂದ ಅವರಿಗೆ ಮೆಚ್ಚುಗೆ ಸಿಕ್ಕಿದೆ.

ಇದನ್ನೂ ಓದಿ: The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ

ಸುದೀಪ್ತೋ ಸೇನ್​ ಅವರು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ಬಿಡುಗಡೆ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ವಿವಾದಕ್ಕೆ ಕಾರಣ ಆಗಿವೆ. ವಿಮರ್ಶಕರ ವಲಯದಲ್ಲಿ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿಡುಗಡೆಗೂ ಮುನ್ನವೇ ‘ದಿ ಕೇರಳ ಸ್ಟೋರಿ’ ಸಿನಿಮಾ ವಿವಾದಕ್ಕೆ ಕಾರಣ ಆಗಿತ್ತು. ‘ಕೇವಲ ಟ್ರೇಲರ್​ ನೋಡಿ ಮಾತನಾಡುವುದು ಸರಿಯಲ್ಲ, ಪೂರ್ತಿ ಸಿನಿಮಾ ನೋಡಿದ ಬಳಿಕ ಅಭಿಪ್ರಾಯ ತಿಳಿಸಿ’ ಎಂದು ಅದಾ ಶರ್ಮಾ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.