‘ಸೈಜ್ ಎಷ್ಟು’ ಎಂದು ಕೇಳಿದವನಿಗೆ ಚಪ್ಪಲಿ ತೋರಿಸಿ ಉತ್ತರ ಕೊಟ್ಟ ಅದಾ ಶರ್ಮಾ

ನಟಿ ಅದಾ ಶರ್ಮಾ 'ಆಸ್ಕ್ ಮಿ ಎನಿಥಿಂಗ್' ಸೆಷನ್‌ನಲ್ಲಿ 'ನಿಮ್ಮ ಸೈಜ್ ಎಷ್ಟು?' ಎಂಬ ಅಶ್ಲೀಲ ಪ್ರಶ್ನೆಗೆ ದಿಟ್ಟ ಉತ್ತರ ನೀಡಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿಗಳು ಇಂತಹ ಪ್ರಶ್ನೆಗಳನ್ನು ನಿರ್ಲಕ್ಷಿಸುತ್ತಾರೆ. ಆದರೆ, ಅದಾ ಶರ್ಮಾ ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ಪ್ರಶ್ನೆ ಕೇಳಿದವರ ಬಾಯಿ ಮುಚ್ಚಿಸಿದ್ದಾರೆ. ಅವರ ಈ ಧೈರ್ಯಶಾಲಿ ಕ್ರಮಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

‘ಸೈಜ್ ಎಷ್ಟು’ ಎಂದು ಕೇಳಿದವನಿಗೆ ಚಪ್ಪಲಿ ತೋರಿಸಿ ಉತ್ತರ ಕೊಟ್ಟ ಅದಾ ಶರ್ಮಾ
ಅದಾ ಶರ್ಮಾ

Updated on: Apr 02, 2026 | 9:08 AM

ನಟಿ ಅದಾ ಶರ್ಮಾ (Adah Sharma) ಅವರು ಕನ್ನಡ ಚಿತ್ರರಂಗದವರಿಗೂ ಪರಿಚಿತರು. ಪುನೀತ್ ರಾಜ್​​ಕುಮಾರ್ ನಟನೆಯ ‘ರಣ ವಿಕ್ರಮ’ ಸಿನಿಮಾದಲ್ಲಿ ಅದಾ ಶರ್ಮಾ ಅವರು ನಟಿಸಿದ್ದರು. ಈ ಸಿನಿಮಾ ಮೆಚ್ಚುಗೆ ಪಡೆಯಿತು. ‘ದಿ ಕೇರಳ ಸ್ಟೋರಿ’ ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿತು. ಸದ್ಯ ಅವರು ಬಾಲಿವುಡ್​​ನಲ್ಲಿ ಬ್ಯುಸಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್ ಆಗಿರೋ ಅದಾ ಶರ್ಮಾ ಅವರು ಆಗಾಗ ವಿವಿಧ ರೀತಿಯ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರು ಅಶ್ಲೀಲವಾಗಿ ಪ್ರಶ್ನೆ ಕೇಳಿದವರಿಗೆ ಉತ್ತರ ನೀಡಿದ್ದಾರೆ.

ಸೆಲೆಬ್ರಿಟಿಗಳು ಕೆಲವೊಮ್ಮೆ ಬೋಲ್ಡ್ ಆಗಿ ಕಾಣಿಸಿಕೊಂಡು ಫೋಟೋ ಹಾಕುತ್ತಾರೆ. ಈ ಪೋಸ್ಟ್​​ಗಳ ಕಮೆಂಟ್ ಸೆಕ್ಷನ್​​ಗೆ ತೆರಳಿದರೆ ಸಾಕಷ್ಟು ಕೆಟ್ಟ​ ಕಮೆಂಟ್​​​ಗಳನ್ನು ಕಾಣಬಹುದು. ಕೆಲವು ನಟಿಯರು ಇದಕ್ಕೆ ಉತ್ತರ ಕೊಡದೆ ಸುಮ್ಮನೆ ಇದ್ದರೆ ಇನ್ನೂ ಕೆಲವರು ಈ ರೀತಿಯ ಪ್ರಶ್ನೆ ಕೇಳಿದವರಿಗೆ ಖಡಕ್ ಆಗಿ ಉತ್ತರ ನೀಡುತ್ತಾರೆ. ಅದಾ ಶರ್ಮಾ ಕೂಡ ಹಾಗೆಯೇ ಮಾಡಿದ್ದಾರೆ.

ಅದಾ ಶರ್ಮಾ ಅವರು ‘ಆಸ್ಕ್ ಮಿ ಎನಿಥಿಂಗ್’ ಸೆಷನ್ ನಡೆಸಿದ್ದರು. ಈ ವೇಳೆ ಅದಾ ಶರ್ಮಾ ಅವರಿಗೆ ‘ನಿಮ್ಮ ಸೈಜ್ ಎಷ್ಟು’ ಎಂದು ಕೇಳಲಾಗಿದೆ. ಇದು ಕೆಟ್ಟ ಉದ್ದೇಶದಿಂದ ಕೇಳಿದ ಪ್ರಶ್ನೆ ಎಂಬುದು ಅದಾಗೆ ಗೊತ್ತಾಗಿದೆ. ಹೀಗಾಗಿ, ಅವರು ‘ಸೈಜ್ 9, ನನ್ನ ಚಪ್ಪಲಿಯದ್ದು’ ಎಂದಿದ್ದಾರೆ. ಈ ವೇಳೆ ಅವರು ಪರೋಕ್ಷವಾಗಿ ಮಧ್ಯ ಬೆಟ್ಟನ್ನು ತೋರಿಸಿದ್ದಾರೆ. ಈ ಮೂಲಕ ಪ್ರಶ್ನೆ ಕೇಳಿದವನಿಗೆ ಅದಾ ಮಂಗಳಾರತಿ ಮಾಡಿದ್ದಾರೆ. ಅವರ ಕ್ರಮಕ್ಕೆ ಎಲ್ಲರೂ ಸಂತಸ ಹೊರಹಾಕಿದ್ದಾರೆ.

ಇದನ್ನೂ ಓದಿ: ಪುನೀತ್ ಜೊತೆ ನಟಿಸಿದ ಅದಾ ಶರ್ಮಾ ನಿಜವಾದ ಹೆಸರೇನು ಗೊತ್ತಾ? ಪಕ್ಕಾ ಟ್ರೆಡಿಷನಲ್

ಸಾಮಾನ್ಯವಾಗಿ ಮುಜುಗರ ತರುವ ಪ್ರಶ್ನೆ ಅಥವಾ ಅಶ್ಲೀಲ ಪ್ರಶ್ನೆ ಕೇಳಿದಾಗ ಸೆಲೆಬ್ರಿಟಿಗಳು ಆ ಬಗ್ಗೆ ಉತ್ತರ ನೀಡಲು ಹಿಂದೇಟು ಹಾಕುತ್ತಾರೆ. ಆ ರೀತಿಯ ಪ್ರಶ್ನೆಗಳನ್ನು ಸ್ಕಿಪ್ ಮಾಡುತ್ತಾರೆ. ಆದರೆ, ಅದಾ ಶರ್ಮಾ ಅವರು ಆ ರೀತಿ ಮಾಡಿಲ್ಲ. ಅವರು ಈ ಪ್ರಶ್ನೆಯನ್ನು ಗಂಭೀರವಾಗಿ ಸ್ವೀಕರಿಸಿ, ಅದಕ್ಕೆ ಉತ್ತರ ಕೊಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us