The Kerala Story: ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ ತಗ್ಗುವ ಲಕ್ಷಣವೇ ಇಲ್ಲ; 7 ದಿನಕ್ಕೆ 81 ಕೋಟಿ ರೂ. ಗಳಿಸಿದ ಕಾಂಟ್ರವರ್ಸಿ ಚಿತ್ರ

The Kerala Story Box Office Collection: ‘ದಿ ಕೇರಳ ಸ್ಟೋರಿ’ ಚಿತ್ರದ ಅಬ್ಬರ ಇನ್ನೂ ಒಂದಷ್ಟು ದಿನಗಳ ಕಾಲ ಮುಂದುವರಿಯಲಿದೆ. ನಿರೀಕ್ಷೆಗಿಂತಲೂ ಚೆನ್ನಾಗಿ ಈ ಚಿತ್ರ ಕಮಾಯಿ ಮಾಡುತ್ತಿದೆ.

The Kerala Story: ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ ತಗ್ಗುವ ಲಕ್ಷಣವೇ ಇಲ್ಲ; 7 ದಿನಕ್ಕೆ 81 ಕೋಟಿ ರೂ. ಗಳಿಸಿದ ಕಾಂಟ್ರವರ್ಸಿ ಚಿತ್ರ
ದಿ ಕೇರಳ ಸ್ಟೋರಿ ಸಿನಿಮಾ ಪೋಸ್ಟರ್​

Updated on: May 12, 2023 | 1:05 PM

ಬಿಡುಗಡೆಯಾಗಿ 7 ದಿನ ಕಳೆದರೂ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಹವಾ ಕಡಿಮೆ ಆಗಿಲ್ಲ. ದಿನದಿಂದ ದಿನಕ್ಕೆ ಈ ಚಿತ್ರದ ಕಲೆಕ್ಷನ್ ಹೆಚ್ಚಾಗುತ್ತಿದೆ. ಸುದೀಪ್ತೋ ಸೇನ್​ ಅವರ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾಗೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಸ್ಟಾರ್​ ಹೀರೋಗಳ ಸಿನಿಮಾ ರೀತಿಯಲ್ಲಿ ‘ದಿ ಕೇರಳ ಸ್ಟೋರಿ’ ಕಲೆಕ್ಷನ್​ (The Kerala Story Collection) ಮಾಡುತ್ತಿದೆ. ದೇಶಾದ್ಯಂತ ಈ ಸಿನಿಮಾದ ಬಗ್ಗೆ ಚರ್ಚೆ ಆಗುತ್ತಿದೆ. ​2023ರ ಯಶಸ್ವಿ ಸಿನಿಮಾಗಳ ಪಟ್ಟಿಗೆ ಈ ಚಿತ್ರ ಕೂಡ ಸೇರ್ಪಡೆ ಆಗಿದೆ. ಮೇ 5ರಂದು ‘ದಿ ಕೇರಳ ಸ್ಟೋರಿ’ ಚಿತ್ರ ತೆರೆ ಕಂಡಿತು. ಅಂದಿನಿಂದ ಇಂದಿನವರೆಗೆ ಉತ್ತಮವಾಗಿ ಪ್ರದರ್ಶನ ಮುಂದುವರಿಸಿದೆ. 7 ದಿನಕ್ಕೆ ಒಟ್ಟು 81.36 ಕೋಟಿ ರೂಪಾಯಿ ಗಳಿಸುವ ಮೂಲಕ ಈ ಚಿತ್ರ ಬ್ಲಾಕ್​ ಬಸ್ಟರ್​ ಎನಿಸಿಕೊಂಡಿದೆ. ನಟಿ ಅದಾ ಶರ್ಮಾ (Adah Sharma) ಅವರು ಈ ಗೆಲುವಿನಿಂದ ಸಖತ್​ ಖುಷಿ ಆಗಿದ್ದಾರೆ. ನಿರ್ಮಾಪಕ ವಿಪುಲ್​ ಅಮೃತ್​ಲಾಲ್​ ಶಾ ಅವರಿಗೆ ಈ ಸಿನಿಮಾದಿಂದ ಭರ್ಜರಿ ಲಾಭ ಆಗಿದೆ.

‘ದಿ ಕೇಳರ ಸ್ಟೋರಿ’ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ ವಿವರ:

ಇದನ್ನೂ ಓದಿ
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

1ನೇ ದಿನ: 8.03 ಕೋಟಿ ರೂ.

2ನೇ ದಿನ: 11.22 ಕೋಟಿ ರೂ.

3ನೇ ದಿನ: 16.40 ಕೋಟಿ ರೂ.

4ನೇ ದಿನ: 10.07 ಕೋಟಿ ರೂ.

5ನೇ ದಿನ: 11.14 ಕೋಟಿ ರೂ.

6ನೇ ದಿನ: 12 ಕೋಟಿ ರೂ.

7ನೇ ದಿನ: 12.50 ಕೋಟಿ ರೂ.

ಇದನ್ನೂ ಓದಿ:  Adah Sharma: ಬ್ಲೂ ವೇಲ್​ ಕುರಿತ ಸಿನಿಮಾದಲ್ಲಿ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ; ಈ ಚಿತ್ರದ ಕಥೆ ಏನು?

‘ದಿ ಕೇಳರ ಸ್ಟೋರಿ’ ಚಿತ್ರದ ಅಬ್ಬರ ಇನ್ನೂ ಒಂದಷ್ಟು ದಿನಗಳ ಕಾಲ ಮುಂದುವರಿಯಲಿದೆ. ನಿರೀಕ್ಷೆಗಿಂತಲೂ ಚೆನ್ನಾಗಿ ಈ ಚಿತ್ರ ಕಮಾಯಿ ಮಾಡುತ್ತಿದೆ. ಎರಡನೇ ವೀಕೆಂಡ್​ನಲ್ಲಿ ಭರ್ಜರಿ ಕಲೆಕ್ಷನ್​ ಆಗುವ ಸಾಧ್ಯತೆ ದಟ್ಟವಾಗಿದೆ. ಶೀಘ್ರದಲ್ಲೇ ಈ ಸಿನಿಮಾ ನೂರು ಕೋಟಿ ರೂಪಾಯಿ ಕಲೆಕ್ಷನ್​ ಮಾಡಲಿದೆ. ಅದಾ ಶರ್ಮಾ ವೃತ್ತಿಜೀವನಕ್ಕೆ ಈ ಸಿನಿಮಾದಿಂದ ಸಖತ್​ ಮೈಲೇಜ್​ ಸಿಕ್ಕಿದೆ. ಅವರಿಗೆ ಹೊಸ ಹೊಸ ಅವಕಾಶಗಳು ಸಿಗುತ್ತಿವೆ.

ಲವ್​ ಜಿಹಾದ್​ ಮತ್ತು ಮತಾಂತರದ ಘಟನೆಗಳನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗಿದೆ. ವಿವಾದಾತ್ಮಕ ಕಥಾಹಂದರ ಇರುವುದರಿಂದ ಬಿಡುಗಡೆಗೂ ಮುನ್ನವೇ ಈ ಚಿತ್ರದ ಬಗ್ಗೆ ಚರ್ಚೆ ಶುರುವಾಗಿತ್ತು. ಕೆಲವು ಕಡೆಗಳಲ್ಲಿ ಈ ಸಿನಿಮಾದ ಪ್ರದರ್ಶನಕ್ಕೆ ಅಡ್ಡಿ ಆಗಿದೆ. ಆದರೂ ಸಹ ಬಾಕ್ಸ್​ ಆಫೀಸ್​ ಕಲೆಕ್ಷನ್​ ತಗ್ಗಿಲ್ಲ ಎಂಬುದು ವಿಶೇಷ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us