AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: 100 ಕೋಟಿ ರೂ. ಕಲೆಕ್ಷನ್​ ಮಾಡಿದ ‘ದಿ ಕೇರಳ ಸ್ಟೋರಿ’; ಬ್ಯಾನ್​ ನಡುವೆಯೂ ಜಯಭೇರಿ

The Kerala Story Box Office Collection: ‘ದಿ ಕೇರಳ ಸ್ಟೋರಿ’ ಸಿನಿಮಾದ ಕಲೆಕ್ಷನ್​ ಇಷ್ಟಕ್ಕೇ ನಿಲ್ಲುವುದಿಲ್ಲ. ಭಾನುವಾರ (ಮೇ 14) ಕೂಡ ಹೆಚ್ಚಿನ ಜನರು ಈ ಸಿನಿಮಾ ವೀಕ್ಷಿಸಲಿದ್ದಾರೆ.

The Kerala Story: 100 ಕೋಟಿ ರೂ. ಕಲೆಕ್ಷನ್​ ಮಾಡಿದ ‘ದಿ ಕೇರಳ ಸ್ಟೋರಿ’; ಬ್ಯಾನ್​ ನಡುವೆಯೂ ಜಯಭೇರಿ
‘ದಿ ಕೇರಳ ಸ್ಟೋರಿ’ ಪೋಸ್ಟರ್​
ಮದನ್​ ಕುಮಾರ್​
|

Updated on: May 13, 2023 | 11:36 AM

Share

‘ದಿ ಕೇರಳ ಸ್ಟೋರಿ’ ಸಿನಿಮಾ (The Kerala Story) ಈ ಪರಿ ಅಬ್ಬರಿಸಲಿದೆ ಎಂದು ಬಹುತೇಕರು ಊಹಿಸಿರಲಿಲ್ಲ. ಯಾವುದೇ ಸ್ಟಾರ್​ ಹೀರೋಗಳೂ ಇಲ್ಲದ ಈ ಸಿನಿಮಾಗೆ ಜನಮೆಚ್ಚುಗೆ ಸಿಕ್ಕಿದೆ. ಒಂದು ವಾರ ಭರ್ಜರಿಯಾಗಿ ಪ್ರದರ್ಶನಗೊಂಡ ಈ ಚಿತ್ರ ಈಗ 100 ಕೋಟಿ ರೂಪಾಯಿ ಗಳಿಸಿದೆ ಎಂಬುದು ವಿಶೇಷ. ಅದಾ ಶರ್ಮಾ (Adah Sharma) ಅವರು ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅವರ ವೃತ್ತಿಜೀವನದ ಅತಿ ದೊಡ್ಡ ಚಿತ್ರವಾಗಿ ‘ದಿ ಕೇರಳ ಸ್ಟೋರಿ’ ಹೊರಹೊಮ್ಮಿದೆ. ಮೊದಲ ದಿನ 8.03 ಕೋಟಿ ರೂಪಾಯಿ ಗಳಿಸಿತ್ತು. ಹಾಗಾಗಿ ಈ ಚಿತ್ರ ಶತಕೋಟಿ ರೂಪಾಯಿ ಕ್ಲಬ್​ ಸೇರಲು ಸಾಧ್ಯವೋ ಇಲ್ಲವೋ ಎಂಬ ಬಗ್ಗೆ ಅನುಮಾನ ಇತ್ತು. ಕೆಲವು ಕಡೆಗಳಲ್ಲಿ ಸಿನಿಮಾ ಬ್ಯಾನ್​ ಆಗಿದ್ದರಿಂದ ಕಲೆಕ್ಷನ್​ (The Kerala Story Box Office Collection) ತಗ್ಗಬಹುದು ಎಂದು ಊಹಿಸಲಾಗಿತ್ತು. ಆದರೆ ಗಲ್ಲಾಪೆಟ್ಟಿಗೆಯಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನೂರು ಕೋಟಿ ರೂಪಾಯಿ ಗಳಿಸಿ ಮ್ಯಾಜಿಕ್​​ ಮಾಡಿದೆ.

‘ದಿ ಕೇರಳ ಸ್ಟೋರಿ’ ಸಿನಿಮಾದ ಬಾಕ್ಸ್​ ಆಫೀಸ್​ ಕಲೆಕ್ಷನ್​ ವಿವರ:

1ನೇ ದಿನ: 8.03 ಕೋಟಿ ರೂ.

ಇದನ್ನೂ ಓದಿ
Image
‘ದಿ ಕೇರಳ ಸ್ಟೋರಿ’ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಮಧ್ಯ ಪ್ರದೇಶ ಸರ್ಕಾರ
Image
The Kerala Story: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ತೋರಿಸಿರೋದು ನಿಜವೋ ಸುಳ್ಳೋ? ಟ್ವಿಟರ್​ನಲ್ಲಿ ಜೋರಾಗಿದೆ ಚರ್ಚೆ
Image
Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ
Image
The Kerala Story Review: ಐಸಿಸ್ ಸಂಚಿನ ಕುರಿತು ಎಚ್ಚರಿಕೆ ಸಂದೇಶ ಸಾರುವ ‘ದಿ ಕೇರಳ ಸ್ಟೋರಿ’

2ನೇ ದಿನ: 11.22 ಕೋಟಿ ರೂ.

3ನೇ ದಿನ: 16.40 ಕೋಟಿ ರೂ.

4ನೇ ದಿನ: 10.07 ಕೋಟಿ ರೂ.

5ನೇ ದಿನ: 11.14 ಕೋಟಿ ರೂ.

6ನೇ ದಿನ: 12 ಕೋಟಿ ರೂ.

7ನೇ ದಿನ: 12.50 ಕೋಟಿ ರೂ.

8ನೇ ದಿನ: 12.23 ಕೋಟಿ ರೂ.

ಇದನ್ನೂ ಓದಿ: Adah Sharma: ಬ್ಲೂ ವೇಲ್​ ಕುರಿತ ಸಿನಿಮಾದಲ್ಲಿ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ; ಈ ಚಿತ್ರದ ಕಥೆ ಏನು?

ಯಶಸ್ವಿಯಾಗಿ 8 ದಿನಗಳ ಕಾಲ ಪ್ರದರ್ಶನಗೊಂಡ ‘ದಿ ಕೇರಳ ಸ್ಟೋರಿ’ ಸಿನಿಮಾ ಒಟ್ಟು 93.37 ಕೋಟಿ ರೂಪಾಯಿ ಗಳಿಸಿದೆ. ಇಂದು (ಮೇ 13) ಕೂಡ ಈ ಸಿನಿಮಾಗೆ ಒಳ್ಳೆಯ ಕಲೆಕ್ಷನ್​ ಆಗಲಿದೆ. ವೀಕೆಂಡ್​ ಆಗಿರುವುದರಿಂದ ಹೆಚ್ಚಿನ ಜನರು ಚಿತ್ರಮಂದಿರಕ್ಕೆ ಬರುತ್ತಾರೆ ಎಂಬ ಭರವಸೆ ಇದೆ. ಹಲವು ಕಡೆಗಳಲ್ಲಿ ಟಿಕೆಟ್​ ಬುಕಿಂಗ್​ ಕೂಡ ಉತ್ತಮವಾಗಿದೆ. ಹಾಗಾಗಿ ಶನಿವಾರ ಅನಾಯಾಸವಾಗಿ 100 ಕೋಟಿ ರೂಪಾಯಿ ಗಳಿಸಲಿದೆ ಎಂಬುದು ಬಾಕ್ಸ್​ ಆಫೀಸ್​ ತಜ್ಞರ ಅಭಿಪ್ರಾಯ.

ಭಾನುವಾರ (ಮೇ 14) ‘ದಿ ಕೇರಳ ಸ್ಟೋರಿ’ ಸಿನಿಮಾ ಇನ್ನೂ ಹೆಚ್ಚು ಕಲೆಕ್ಷನ್​ ಮಾಡುವ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ವಿವಾದಾತ್ಮಕ ಕಥಾಹಂದರ ಇದೆ ಎಂಬ ಕಾರಣ ನೀಡಿ ಪಶ್ಚಿಮ ಬಂಗಾಳದಲ್ಲಿ ಸಿನಿಮಾವನ್ನು ಬ್ಯಾನ್​ ಮಾಡಲಾಗಿದೆ. ತಮಿಳುನಾಡಿನ ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ನಿಲ್ಲಿಸಲಾಗಿದೆ. ಹಾಗಿದ್ದರೂ ಕೂಡ 100 ಕೋಟಿ ರೂಪಾಯಿ ಗಳಿಸಿರುವುದು ಸಾಧನೆಯೇ ಸರಿ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ