ನಟ ಪ್ರಭಾಸ್ (Prabhas) ಅಭಿನಯದ ‘ಆದಿಪುರುಷ್’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಸೆಟ್ಟೇರಿದ ದಿನದಿಂದಲೂ ಈ ಚಿತ್ರ ಹೈಪ್ ಕ್ರಿಯೇಟ್ ಮಾಡಿದೆ. ಇದೇ ಮೊದಲ ಬಾರಿಗೆ ಚಿತ್ರತಂಡದಿಂದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ‘ಆದಿಪುರುಷ್’ (Adipurush) ಚಿತ್ರದಲ್ಲಿ ಪ್ರಭಾಸ್ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ಈಗ ರಿಲೀಸ್ ಆಗಿರುವ ಪೋಸ್ಟರ್ನಲ್ಲಿ ಅವರು ಬಿಲ್ಲು ಮತ್ತು ಬಾಣ ಹಿಡಿದು ರಾಮನಂತೆಯೇ ಪೋಸ್ ನೀಡಿದ್ದಾರೆ. ಶುಕ್ರವಾರ (ಸೆ.30) ಮುಂಜಾನೆಯೇ ಚಿತ್ರದ ಫಸ್ಟ್ ಲುಕ್ ಪೋಸ್ಟರ್ (Adipurush First Look) ಅನಾವರಣ ಮಾಡಲಾಗಿದ್ದು, ಅಭಿಮಾನಿಗಳ ವಲಯದಲ್ಲಿ ಇದು ವೈರಲ್ ಆಗುತ್ತಿದೆ. ಈ ಚಿತ್ರಕ್ಕೆ ಓಂ ರಾವುತ್ ನಿರ್ದೇಶನ ಮಾಡುತ್ತಿದ್ದಾರೆ.
‘ಬಾಹುಬಲಿ’ ಚಿತ್ರದ ಯಶಸ್ಸಿನ ನಂತರ ಪ್ರಭಾಸ್ ಅವರು ಪ್ಯಾನ್ ಇಂಡಿಯಾ ಹೀರೋ ಇಮೇಜ್ ಪಡೆದುಕೊಂಡರು. ಹಾಗಾಗಿ ಅವರ ಎಲ್ಲ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಕ್ಕಿಲ್ಲ. ‘ಸಾಹೋ’ ಮತ್ತು ‘ರಾಧೆ ಶ್ಯಾಮ್’ ಚಿತ್ರಗಳು ಬಾಕ್ಸ್ ಆಫೀಸ್ನಲ್ಲಿ ಸೋತವು. ಈಗ ‘ಆದಿಪುರುಷ್’ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲು ಸಜ್ಜಾಗುತ್ತಿದೆ. ಈ ಬಾರಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
‘ಆದಿಪುರುಷ್’ ಸಿನಿಮಾ ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳಿನಲ್ಲಿ ರಿಲೀಸ್ ಆಗಲಿದೆ. ಎಲ್ಲ ಭಾಷೆಯಲ್ಲಿಯೂ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಆಗಿದೆ. ಅಕ್ಟೋಬರ್ 2ರಂದು ರಾತ್ರಿ 7.11 ಗಂಟೆಗೆ ಈ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ. ಅದನ್ನು ನೋಡಲು ಫ್ಯಾನ್ಸ್ ಕಾದಿದ್ದರೆ. ಟೀಸರ್ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಈ ಚಿತ್ರದಲ್ಲಿ ಪ್ರಭಾಸ್ಗೆ ಜೋಡಿಯಾಗಿ ಕೃತಿ ಸನೋನ್ ನಟಿಸುತ್ತಿದ್ದು, ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ. ರಾವಣನಾಗಿ ಸೈಫ್ ಅಲಿ ಖಾನ್ ಕಾಣಿಸಿಕೊಳ್ಳಲಿದ್ದಾರೆ.
ಬಿಗ್ ಬಜೆಟ್ನಲ್ಲಿ ‘ಆದಿಪುರುಷ್’ ಸಿದ್ಧವಾಗುತ್ತಿದೆ. ಭೂಷಣ್ ಕುಮಾರ್ ಮತ್ತು ಕ್ರಿಷನ್ ಕುಮಾರ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. 2023ರ ಜನವರಿ 12ರಂದು 3ಡಿ ವರ್ಷನ್ನಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಅಯೋಧ್ಯೆಯ ಸರಯು ನದಿಯ ದಂಡೆ ಮೇಲೆ ಅ.2ರಂದು ಟೀಸರ್ ಬಿಡುಗಡೆ ಆಗಲಿರುವುದು ವಿಶೇಷ. ಪ್ರಭಾಸ್ ವೃತ್ತಿಜೀವನಕ್ಕೆ ಈ ಸಿನಿಮಾ ಟರ್ನಿಂಗ್ ಪಾಯಿಂಟ್ ಆಗಲಿದೆ ಎಂದು ಫ್ಯಾನ್ಸ್ ನಿರೀಕ್ಷಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.