Adipurush BO Collection Day 1: ಮೊದಲ ದಿನ 85 ಕೋಟಿ ರೂ. ಗಳಿಸುತ್ತಾ ‘ಆದಿಪುರುಷ್​’? ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ಎಲ್ಲರ ಕಣ್ಣು

Adipurush Collection: ಉತ್ತರ ಭಾರತದಲ್ಲಿ ‘ಆದಿಪುರುಷ್​’ ಸಿನಿಮಾದ ಹವಾ ಜೋರಾಗಿದೆ. ಮೊದಲ ದಿನ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಆಗಿದೆ. ಹಾಗಾಗಿ 85 ಕೋಟಿ ರೂಪಾಯಿ ಕಲೆಕ್ಷನ್​ ಆಗುತ್ತದೆ ಎಂದು ಕೆಲವರು ಅಂದಾಜಿಸಿದ್ದಾರೆ.

Adipurush BO Collection Day 1: ಮೊದಲ ದಿನ 85 ಕೋಟಿ ರೂ. ಗಳಿಸುತ್ತಾ ‘ಆದಿಪುರುಷ್​’? ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ಎಲ್ಲರ ಕಣ್ಣು
ಪ್ರಭಾಸ್​ , ಕೃತಿ ಸನೋನ್​
Follow us
ಮದನ್​ ಕುಮಾರ್​
|

Updated on: Jun 16, 2023 | 3:20 PM

ಯಾವುದೇ ಬಿಗ್​ ಬಜೆಟ್​ ಸಿನಿಮಾ ಬಿಡುಗಡೆ ಆದಾಗ ಅದರ ಫಸ್ಟ್​ ಡೇ ಕಲೆಕ್ಷನ್​ ಮೇಲೆ ಎಲ್ಲರೂ ಕಣ್ಣಿಟ್ಟಿರುತ್ತಾರೆ. ‘ಆದಿಪುರುಷ್​’ ಸಿನಿಮಾದ (Adipurush Movie) ವಿಚಾರದಲ್ಲೂ ಹಾಗೆಯೇ ಆಗಿದೆ. ನೂರಾರು ಕೋಟಿ ರೂಪಾಯಿ ಬಜೆಟ್​ನಲ್ಲಿ ಈ ಚಿತ್ರ ತಯಾರಾಗಿದೆ. ಇಂದು (ಜೂನ್​ 16) ಗ್ರ್ಯಾಂಡ್​ ಆಗಿ ಈ ಸಿನಿಮಾ ರಿಲೀಸ್​ ಆಗಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಹಿಂದಿ, ತಮಿಳು, ಕನ್ನಡ, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ‘ಆದಿಪುರುಷ್​’ ತೆರೆಕಂಡಿದೆ. ಪ್ರಭಾಸ್​ (Prabhas) ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇರುವುದರಿಂದ ಎಲ್ಲ ಕಡೆಗಳಲ್ಲೂ ಉತ್ತಮ ಕಲೆಕ್ಷನ್​ ಆಗಲಿದೆ ಎಂದು ಊಹಿಸಲಾಗಿದೆ. ಮೊದಲ ದಿನವೇ 85 ಕೋಟಿ ರೂಪಾಯಿ ಗಳಿಕೆ (Adipurush Box Office Collection) ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಊಹೆ ನಿಜವಾಗುತ್ತೋ ಇಲ್ಲವೋ ಎಂಬುದು ಗೊತ್ತಾಗಲು ಇನ್ನು ಕೆಲವೇ ಕೆಲವು ಗಂಟೆಗಳ ಕಾಲ ಕಾಯಬೇಕು.

‘ಆದಿಪುರುಷ್​’ ಸಿನಿಮಾಗೆ ಓಂ ರಾವತ್​ ಅವರು ನಿರ್ದೇಶನ ಮಾಡಿದ್ದಾರೆ. ರಾಮಾಯಣವನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ಪ್ರಭಾಸ್​ ಅವರು ರಾಮನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಸೀತೆಯಾಗಿ ಕೃತಿ ಸನೋನ್​ ಕಾಣಿಸಿಕೊಂಡಿದ್ದಾರೆ. ಸೈಫ್​ ಅಲಿ ಖಾನ್​ ಅವರು ರಾವಣನ ಪಾತ್ರ ಮಾಡಿದ್ದಾರೆ. ಲಕ್ಷ್ಮಣನಾಗಿ ಸನ್ನಿ ಸಿಂಗ್​ ಹಾಗೂ ಆಂಜನೇಯನ ಪಾತ್ರದಲ್ಲಿ ದೇವದತ್ತ ನಾಗೆ ಅವರು ಅಭಿನಯಿಸಿದ್ದಾರೆ. 3ಡಿ ರೂಪದಲ್ಲಿ ‘ಆದಿಪುರುಷ್​’ ಬಿಡುಗಡೆ ಆಗಿದೆ. 2ಡಿ ವರ್ಷನ್​ ಕೂಡ ಲಭ್ಯವಿದೆ. ಟೀ-ಸಿರೀಸ್​ ಮತ್ತು ರೆಟ್ರೋಫೈಲ್ಸ್​ ಸಂಸ್ಥೆಗಳು ಈ ಚಿತ್ರವನ್ನು ನಿರ್ಮಾಣ ಮಾಡಿವೆ.

ಇದನ್ನೂ ಓದಿ: Sara Ali Khan: ಅಪ್ಪನ ಸಿನಿಮಾ ಬಿಡುಗಡೆಯಿಂದ ಮಗಳ ಚಿತ್ರಕ್ಕೆ ಹೊಡೆತ; ‘ಆದಿಪುರುಷ್​’ ವರ್ಸಸ್​ ‘ಜರಾ ಹಟ್ಕೆ ಜರಾ ಬಚ್ಕೆ’

ಉತ್ತರ ಭಾರತದಲ್ಲಿ ‘ಆದಿಪುರುಷ್​’ ಸಿನಿಮಾದ ಹವಾ ಜೋರಾಗಿದೆ. ದೆಹಲಿಯಲ್ಲಿ ಈ ಚಿತ್ರದ ಟಿಕೆಟ್​ಗಳು 2250 ರೂಪಾಯಿಗೆ ಮಾರಾಟ ಆಗಿವೆ. ಮೊದಲ ದಿನ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಆಗಿದೆ. ಹಾಗಾಗಿ 85 ಕೋಟಿ ರೂಪಾಯಿ ಕಲೆಕ್ಷನ್​ ಆಗುತ್ತದೆ ಎಂದು ಕೆಲವರು ಅಂದಾಜಿಸಿದ್ದಾರೆ. ಆದರೆ ತಮಿಳುನಾಡು ಮತ್ತು ಕೇರಳದಲ್ಲಿ ನಿರೀಕ್ಷಿತ ಮಟ್ಟದ ಜನರು ಚಿತ್ರಮಂದಿರಕ್ಕೆ ಬಂದಿಲ್ಲ. ಅದರಿಂದ ಗಲ್ಲಾಪೆಟ್ಟಿಗೆ ಗಳಿಕೆ ಮೇಲೆ ಹೊಡೆತ ಬೀಳಬಹುದು. ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಚಿತ್ರತಂಡದವರು ಸೂಕ್ತ ರೀತಿಯಲ್ಲಿ ಪ್ರಚಾರ ಮಾಡಿಲ್ಲ.

ಇದನ್ನೂ ಓದಿ: Adipurush Review: ಗ್ರಾಫಿಕ್ಸ್​ ನಂಬಿಕೊಂಡು ಯುದ್ಧ ಮಾಡಿದ ರಾಮ-ರಾವಣ; ಇದು ಓಂ ರಾವತ್​ ರಾಮಾಯಣ

‘ಆದಿಪುರುಷ್’ ಚಿತ್ರವನ್ನು ಮೊದಲ ದಿನ ಮೊದಲ ಶೋ ನೋಡಿ ಬಂದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಕೆಲವರಿಗೆ ಈ ಸಿನಿಮಾ ಇಷ್ಟವಾಗಿದೆ. ಆದರೆ ಇನ್ನೂ ಕೆಲವರು ತೆಗಳಿದ್ದಾರೆ. ಓಂ ರಾವತ್​ ಅವರು ರಾಮಾಯಣವನ್ನು ಚಿತ್ರಿಸಿರುವ ರೀತಿ ಬಗ್ಗೆ ಟೀಕೆ ವ್ಯಕ್ತವಾಗಿದೆ. ಈ ವಿಚಾರಗಳನ್ನು ಇಟ್ಟುಕೊಂಡು ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಮಾಡಲಾಗುತ್ತಿದೆ. ಹಾಗಾಗಿ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೆಲ್ಲವೂ ಕೂಡ ಕಲೆಕ್ಷನ್ ಮೇಲೆ ಪರಿಣಾಮ ಬೀರುವುದು ಖಚಿತ ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್