Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​

Adipurush | Prabhas: ಪ್ರಭಾಸ್​ ನಟನೆಯ ‘ಆದಿಪುರುಷ್​’ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಆ ನಿರೀಕ್ಷೆಯನ್ನು ಡಬಲ್​ ಮಾಡುವ ರೀತಿಯಲ್ಲಿ ಟೀಸರ್​ ಬಿಡುಗಡೆ ಆಗಿದೆ.

Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
ಪ್ರಭಾಸ್
Follow us
TV9 Web
| Updated By: ಮದನ್​ ಕುಮಾರ್​

Updated on:Oct 02, 2022 | 7:43 PM

ಪ್ಯಾನ್​ ಇಂಡಿಯಾ ಸ್ಟಾರ್​ ಪ್ರಭಾಸ್​ (Prabhas) ನಟಿಸಿರುವ ‘ಆದಿಪುರುಷ್​’ (Adipurush) ಚಿತ್ರ ಸಾಕಷ್ಟು ಹೈಪ್​ ಸೃಷ್ಟಿ ಮಾಡಿದೆ. ಈಗ ಈ ಸಿನಿಮಾದ ಟೀಸರ್​ ರಿಲೀಸ್​ ಆಗಿದೆ. ಆಯೋಧ್ಯೆಯಲ್ಲಿ ಅದ್ದೂರಿ ಕಾರ್ಯಕ್ರಮ ಮಾಡಿ ಟೀಸರ್​ (Adipurush Teaser) ಬಿಡುಗಡೆ ಮಾಡಲಾಗಿದೆ. ರಾಮನ ಅವತಾರದಲ್ಲಿ ಪ್ರಭಾಸ್​ ಕಾಣಿಸಿಕೊಂಡಿದ್ದಾರೆ. ಸೀತೆಯಾಗಿ ಕೃತಿ ಸನೋನ್​ ಅಭಿನಯಿಸಿದ್ದಾರೆ. ಹತ್ತು ತಲೆಯ ರಾವಣನಾಗಿ ಸೈಫ್​ ಅಲಿ ಖಾನ್​ ಅಬ್ಬರಿಸಿದ್ದಾರೆ. ‘ಆದಿಪುರುಷ್​’ ಟೀಸರ್​​ನಲ್ಲಿನ ಗ್ರಾಫಿಕ್ಸ್​ ಕಂಡು ಫ್ಯಾನ್ಸ್​ ವಾವ್​ ಎನ್ನುತ್ತಿದ್ದಾರೆ. ಹೈಬಜೆಟ್​ನಲ್ಲಿ ಈ ಚಿತ್ರ ಸಿದ್ಧವಾಗುತ್ತಿದೆ. ಚಿತ್ರದ ಪ್ರತಿ ಫ್ರೇಮ್​ ಕೂಡ ಅದ್ದೂರಿಯಾಗಿದೆ ಎಂಬುದಕ್ಕೆ ಈ ಟೀಸರ್​ ಸಾಕ್ಷಿ ಒದಗಿಸುತ್ತಿದೆ.

ಭೂಷಣ್​ ಕುಮಾರ್ ಮತ್ತು ಕ್ರಿಷನ್​ ಕುಮಾರ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. 2023ರ ಜನವರಿ 12ರಂದು 3ಡಿ ವರ್ಷನ್​ನಲ್ಲಿ ಈ ಸಿನಿಮಾ ರಿಲೀಸ್​ ಆಗಲಿದೆ. ಅಯೋಧ್ಯೆಯ ಸರಯು ನದಿಯ ದಂಡೆ ಮೇಲೆ ಇಂದು (ಅ.2) ಟೀಸರ್​ ಬಿಡುಗಡೆ ಆಗಿರುವುದು ವಿಶೇಷ. ಬೃಹತ್​ ವೇದಿಕೆಯಲ್ಲಿ, ದೊಡ್ಡ ಎಲ್​ಇಡಿ ಪರದೆ ಮೇಲೆ ಟೀಸರ್​ ಬಿತ್ತರ ಮಾಡಲಾಗಿದೆ. ಇದನ್ನು ಕಂಡು ಫ್ಯಾನ್ಸ್​ ಕಣ್ತುಂಬಿಕೊಂಡಿದ್ದಾರೆ.

ಇದನ್ನೂ ಓದಿ
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​
Image
ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?
Image
‘ರಾಧೆ ಶ್ಯಾಮ್​’ ಸೋಲಿಗೆ 2 ಮುಖ್ಯ ಕಾರಣ ತಿಳಿಸಿದ ಪ್ರಭಾಸ್​; ಪ್ರೇಕ್ಷಕರು ಈ ನೆಪವನ್ನೆಲ್ಲ ಒಪ್ಪುತ್ತಾರಾ?

ಕನ್ನಡ, ಹಿಂದಿ, ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಗಳಲ್ಲಿ ‘ಆದಿಪುರುಷ್​’ ಟೀಸರ್​ ರಿಲೀಸ್​ ಆಗಿದೆ. ಎಲ್ಲ ಭಾಷೆಗಳಿಂದಲೂ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ. ನಿರ್ದೇಶಕ ಓಂ ರಾವುತ್​ ಅವರ ಕಾರ್ಯಕ್ಕೆ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಚಿತ್ರದ ಮೇಲಿನ ನಿರೀಕ್ಷೆ ಡಬಲ್​ ಆಗಿದೆ.

‘ಬಾಹುಬಲಿ’ ಚಿತ್ರದ ಯಶಸ್ಸಿನ ನಂತರ ಪ್ರಭಾಸ್​ ಅವರು ಪ್ಯಾನ್​ ಇಂಡಿಯಾ ಹೀರೋ ಇಮೇಜ್​ ಪಡೆದುಕೊಂಡರು. ಹಾಗಾಗಿ ಅವರ ಎಲ್ಲ ಸಿನಿಮಾಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗುತ್ತಿವೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಕ್ಕಿಲ್ಲ. ‘ಸಾಹೋ’ ಮತ್ತು ‘ರಾಧೆ ಶ್ಯಾಮ್​’ ಚಿತ್ರಗಳು ಬಾಕ್ಸ್​ ಆಫೀಸ್​ನಲ್ಲಿ ಸೋತವು. ಈಗ ‘ಆದಿಪುರುಷ್​’ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲು ಸಜ್ಜಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:36 pm, Sun, 2 October 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ