Deepika Padukone: ಮಗು ಜನಿಸಿದ ಬಳಿಕ ಚಿತ್ರರಂಗ ತೊರೆಯಲಿದ್ದಾರೆ ದೀಪಿಕಾ ಪಡುಕೋಣೆ?

ದೀಪಿಕಾ ಪಡುಕೋಣೆಗೆ ಸೆಪ್ಟೆಂಬರ್‌ನಲ್ಲಿ ಮಗು ಜನಿಸಲಿದೆ. ಈ ಹಿಂದೆ ಅವರು ಸಂದರ್ಶನ ಒಂದರಲ್ಲಿ ಸಂತೋಷದ ದಾಂಪತ್ಯ ಜೀವನಕ್ಕಾಗಿ ನಟನೆಯನ್ನು ತ್ಯಜಿಸಬೇಕಾಗಿ ಬರಬಹುದು ಎಂದು ಹೇಳಿದ್ದರು. ದೀಪಿಕಾ ಪಡುಕೋಣೆ ಅವರು ರಣವೀರ್ ಸಿಂಗ್ ಜೊತೆ ಡೇಟಿಂಗ್ ಮಾಡುವಾಗ ಈ ಹೇಳಿಕೆ ನೀಡಿದ್ದರು.

Deepika Padukone: ಮಗು ಜನಿಸಿದ ಬಳಿಕ ಚಿತ್ರರಂಗ ತೊರೆಯಲಿದ್ದಾರೆ ದೀಪಿಕಾ ಪಡುಕೋಣೆ?
ದೀಪಿಕಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Jul 05, 2024 | 10:52 AM

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅಭಿನಯದ ‘ಕಲ್ಕಿ 2898 ಎಡಿ’ ಚಿತ್ರ ಬಾಕ್ಸ್​​ಆಫೀಸ್​ನಲ್ಲಿ ಹಿಟ್ ಆಗಿದೆ. ಸದ್ಯ ದೀಪಿಕಾ ಪಡುಕೋಣೆ ಗರ್ಭಿಣಿ. ಆದರೆ ಸಿನಿಮಾ ಪ್ರಚಾರದಲ್ಲಿ ಅವರು ಹಿಂದೆ ಬಿದ್ದಿಲ್ಲ. ದೀಪಿಕಾ ಪಡುಕೋಣೆ ಬೇಬಿ ಬಂಪ್‌ನೊಂದಿಗೆ ‘ಕಲ್ಕಿ 2898 ಎಡಿ’ ಸಿನಿಮಾ ಪ್ರಚಾರ ಮಾಡುತ್ತಿದ್ದಾರೆ. ಅವರ ಬಗ್ಗೆ ಪ್ರಭಾಸ್ ಮತ್ತು ಅಮಿತಾಭ್ ಬಚ್ಚನ್ ಸಾಕಷ್ಟು ಕಾಳಜಿ ವಹಿಸುತ್ತಿದ್ದಾರೆ. ದೀಪಿಕಾ ಇನ್ಮುಂದೆ ಸಿನಿಮಾ ಮಾಡದೆ ಇರಬಹುದು ಎಂದು ಕೆಲವರು ಹೇಳುತ್ತಿದ್ದಾರೆ. ಜನರು ಈ ರೀತಿ ಏಕೆ ಭಾವಿಸುತ್ತಿದ್ದಾರೆ? ದೀಪಿಕಾ ಪಡುಕೋಣೆ ಒಮ್ಮೆ ನೀಡಿದ ಹೇಳಿಕೆಯೇ ಇದಕ್ಕೆ ಕಾರಣ.

ಸೆಪ್ಟೆಂಬರ್‌ನಲ್ಲಿ ದೀಪಿಕಾ ಪಡುಕೋಣೆಗೆ ಮೊದಲ ಮಗು ಜನಿಸಲಿದೆ. ಈ ಹಿಂದೆ ದೀಪಿಕಾ ಪಡುಕೋಣೆ ‘ಮೈ ಚಾಯ್ಸ್’ ವಿಡಿಯೋದಲ್ಲಿ ಸಂತೋಷದ ದಾಂಪತ್ಯ ಜೀವನಕ್ಕಾಗಿ ನಟನೆಯನ್ನು ತ್ಯಜಿಸಬೇಕಾಗಿ ಬರಬಹುದು ಎಂದು ಹೇಳಿದ್ದರು. ದೀಪಿಕಾ ಪಡುಕೋಣೆ ಅವರು ರಣವೀರ್ ಸಿಂಗ್ ಜೊತೆ ಡೇಟಿಂಗ್ ಮಾಡುವಾಗ ಈ ಹೇಳಿಕೆ ನೀಡಿದ್ದರು.

ಕೆಲವು ವರ್ಷಗಳ ಹಿಂದೆ ರಣವೀರ್ ಹಾಗೂ ದೀಪಿಕಾ ಮದುವೆಯಾಗಿದ್ದಾರೆ. ಶೀಘ್ರದಲ್ಲೇ ಮಗುವಿಗೆ ಪೋಷಕರಾಗಲಿದ್ದಾರೆ. ಇಷ್ಟೇ ಅಲ್ಲ, ದೀಪಿಕಾ ಪಡುಕೋಣೆ ಸಂದರ್ಶನ ಒಂದರಲ್ಲಿ ‘ನಾನು ಮಕ್ಕಳನ್ನು ಪ್ರೀತಿಸುತ್ತೇನೆ ಮತ್ತು ಅನೇಕ ಮಕ್ಕಳನ್ನು ಹೊಂದಲು ಬಯಸುತ್ತೇನೆ’ ಎಂದು ಹೇಳಿದ್ದರು. ಶಾರುಖ್ ಖಾನ್ ಅವರ ಮಗ ಅಬ್ರಾಮ್ ಜೊತೆ ನಾನು ಹೆಚ್ಚು ಸಮಯ ಕಳೆಯುತ್ತೇನೆ ಎಂದು ದೀಪಿಕಾ ಹೇಳಿದ್ದರು. ಇದು ಮಕ್ಕಳ ಮೇಲೆ ಅವರಿಗೆ ಇರೋ ಪ್ರೀತಿಗೆ ಒಳ್ಳೆಯ ಉದಾಹರಣೆ.

ಹೆರಿಗೆ ನಂತರ ದೀಪಿಕಾ ನಟನೆ ಬಿಡುತ್ತಾರಾ?

ಈ ವರ್ಷ ದೀಪಿಕಾ ಪಡುಕೋಣೆಗೆ ವಿಶೇಷವಾಗಿದೆ. ಏಕೆಂದರೆ ಅವರು ತಮ್ಮ ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ. ಇದಾದ ಬಳಿಕ ಅವರು ಸಿನಿಮಾಗಳಲ್ಲಿ ನಟಿಸುವುದಿಲ್ಲವೇ ಎನ್ನುವ ಪ್ರಶ್ನೆ ಮೂಡಿದೆ. ಈ ಪ್ರಶ್ನೆಗೆ ಸ್ವತಃ ದೀಪಿಕಾ ಉತ್ತರಿಸಬೇಕಿದೆ. ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಮೊದಲ ಮಗುವಿನ ಜನನದ ನಂತರ ಸಿನಿಮಾಗಳಲ್ಲಿ ನಟಿಸೋದನ್ನು ಕಡಿಮೆ ಮಾಡಿದ್ದಾರೆ.

ಇದನ್ನೂ ಓದಿ: ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್​ 1; ಕಂಗನಾ, ಆಲಿಯಾಗೆ ಎಷ್ಟನೇ ಸ್ಥಾನ?

ದೀಪಿಕಾ ಪಡುಕೋಣೆ ‘ಸಿಂಗಮ್ ಅಗೇನ್’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ಅವರ ಕಾಪ್ ಯೂನಿವರ್ಸ್ ಚಿತ್ರದಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೂಡ ಪ್ರಮುಖ ಪಾತ್ರ ಮಾಡಿದ್ದಾರೆ. ಇತ್ತೀಚೆಗಷ್ಟೇ ರೋಹಿತ್ ಶೆಟ್ಟಿ ದೀಪಿಕಾ ಅವರ ಲುಕ್ ರವೀಲ್ ಮಾಡಿದ್ದಾರೆ. ರಣವೀರ್ ಸಿಂಗ್, ಅಕ್ಷಯ್ ಕುಮಾರ್, ಶಿಲ್ಪಾ ಶೆಟ್ಟಿ ಮತ್ತು ಸಿದ್ದಾರ್ಥ್ ಮಲ್ಹೋತ್ರಾ ರೋಹಿತ್ ಶೆಟ್ಟಿಯ ಕಾಪ್ ಯೂನಿವರ್ಸ್‌ನ ಭಾಗವಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ