AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಐಟಿ ದಾಳಿ: 60 ಕೋಟಿ ರೂ. ವಂಚನೆ ಕೇಸ್

ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಮೇಲೆ 60 ಕೋಟಿ ರೂಪಾಯಿ ವಂಚನೆ ಆರೋಪ ಎದುರಾಗಿದೆ. ಕೇಸ್ ದಾಖಲಾದ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಅವರಿಗೆ ಸೇರಿದ ಜಾಗಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಪಬ್ ಮೇಲೆ ದಾಳಿ ಆಗಿದೆ. ಅಲ್ಲದೇ ಮುಂಬೈ ನಿವಾಸದ ಮೇಲೂ ದಾಳಿ ಮಾಡಲಾಗಿದೆ.

ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಐಟಿ ದಾಳಿ: 60 ಕೋಟಿ ರೂ. ವಂಚನೆ ಕೇಸ್
Shilpa Shetty
ಮದನ್​ ಕುಮಾರ್​
|

Updated on: Dec 18, 2025 | 9:59 PM

Share

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರ ಕುಟುಂಬದ ಮೇಲೆ ಹಲವಾರು ಕೇಸ್​​ಗಳು ಇವೆ. ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಈಗಾಗಲೇ ಅನೇಕ ಪ್ರಕರಣಗಳಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಈಗ ಶಿಲ್ಪಾ ಶೆಟ್ಟಿ ಅವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಅವರ ಮುಂಬೈ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗುರುವಾರ (ಡಿಸೆಂಬರ್ 18) ಈ ಘಟನೆ ನಡೆದಿದೆ. ಅದಕ್ಕೂ ಒಂದು ದಿನ ಮುನ್ನ, ಅಂದರೆ ಡಿ.17ರಂದು ಬೆಂಗಳೂರಿನಲ್ಲಿ ಕೂಡ ಶಿಲ್ಪಾ ಶೆಟ್ಟಿ ಅವರಿಗೆ ಸಂಬಂಧಿಸಿದ ಜಾಗಗಳಲ್ಲಿ ಐಟಿ ಅಧಿಕಾರಿಗಳು ದಾಳಿ (IT Raid) ಮಾಡಿದ್ದರು.

ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಅವರು ‘ಬಾಸ್ಟಿಯನ್ ಗಾರ್ಡನ್ ಸಿಟಿ’ ಪಬ್ ಹೊಂದಿದ್ದಾರೆ. ಇದು ಬೆಂಗಳೂರಿನ ಅತಿ ದುಬಾರಿ ಪಬ್​​ಗಳಲ್ಲಿ ಒಂದಾಗಿದೆ. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ಈ ಪಬ್ ಇದೆ. ಪಬ್ ಮಾತ್ರವಲ್ಲದೇ ಇನ್ನೂ ಹಲವು ಕಡೆಗಳಲ್ಲಿ ದಾಳಿ ಮಾಡಿ ಕೆಲವು ದಾಖಲೆಗಳನ್ನು ಪರಿಶೀಲಿಸಲಾಗಿದೆ. ಇದರಿಂದಾಗಿ ಶಿಲ್ಪಾ ಶೆಟ್ಟಿ ಅವರಿಗೆ ಸಂಕಷ್ಟ ಶುರುವಾಗಿದೆ.

ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಮೇಲೆ 60 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿಬಂದಿದೆ. ಮುಂಬೈ ಮೂಲದ ಉದ್ಯಮಿ ದೀಪಕ್ ಕೊಠಾರಿ ಅವರು ಈ ಆರೋಪ ಮಾಡಿದ್ದಾರೆ. ಸ್ಟಾರ್ ದಂಪತಿಯಿಂದ ತಮಗೆ ವಂಚನೆ ಆಗಿದೆ ಎಂದು ದೀಪಕ್ ಕೊಠಾರಿ ದೂರು ನೀಡಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಪಬ್ ಮೇಲೆ ದಾಳಿ: ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ 5 ಕಾರಿನಲ್ಲಿ ಹತ್ತಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಸೆಂಟ್ ಮಾರ್ಕ್ಸ್ ರಸ್ತೆಯ ಬ್ಯಾಸ್ಟಿಯನ್ ಪಬ್ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ರೆಸ್ಟೋರೆಂಟ್ ಸಹಜವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟರು. ಆದರೆ ಆಡಳಿತ ವಿಭಾಗ ಮತ್ತು ಅಕೌಂಟ್ಸ್ ವಿಭಾಗದಲ್ಲಿ ಐಟಿ ಅಧಿಕಾರಿಗಳು ಜಾಲಾಡಿದರು. ಇಷ್ಟು ವರ್ಷಗಳಿಂದ ಕಟ್ಟಿದ ತೆರಿಗೆ ಎಷ್ಟು ಎಂಬುದನ್ನು ಪರಿಶೀಲಿಸಲಾಯಿತು. ತೆರಿಗೆ ಇಲಾಖೆಗೆ ನೀಡಿರುವ ದಾಖಲಾತಿಗಳಿಗೂ ಕೌಂಟರ್​ನಲ್ಲಿ ಇದುವರೆಗೆ ಆಗಿರುವ ವ್ಯಾಪಾರಕ್ಕೂ ಹೋಲಿಕೆ ಮಾಡಲಾಗಿದೆ. ಹೂಡಿಕೆ, ಲಾಭ ಮತ್ತು ತೆರಿಗೆ ಈ ಮೂರು ವಿಚಾರಗಳ ಬಗ್ಗೆ ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ವಿರುದ್ಧ ಬೆಂಗಳೂರು ಪೊಲೀಸರ ಎಫ್​​ಐಆರ್: ನಡೆದಿದ್ದೇನು?

ಶಿಲ್ಪಾ ಶೆಟ್ಟಿ ಅವರ ಪಬ್​ನಲ್ಲಿ ಕೆಲವು ದಿನಗಳ ಹಿಂದೆ ಉದ್ಯಮಿ ಸತ್ಯನಾಯ್ಡು ಮತ್ತು ಇತರರ ನಡುವೆ ಒಂದು ಗಲಾಟೆ ಆಗಿತ್ತು. ಆ ಬಳಿಕ ಪಬ್ ಅವಧಿ ಮೀರಿ, ಅಂದರೆ 1.30ರ ತನಕ ಒಪನ್ ಇತ್ತು. ಈ ಎರಡೂ ವಿಚಾರಕ್ಕೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಕಳೆದ 10 ದಿನಗಳ ಅಂತರದಲ್ಲಿ ಈ ಪಬ್ ಮೇಲೆ ಒಂದು ಕೇಸ್ ಹಾಗೂ ಐಟಿ ದಾಳಿ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?