ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಐಟಿ ದಾಳಿ: 60 ಕೋಟಿ ರೂ. ವಂಚನೆ ಕೇಸ್

ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಮೇಲೆ 60 ಕೋಟಿ ರೂಪಾಯಿ ವಂಚನೆ ಆರೋಪ ಎದುರಾಗಿದೆ. ಕೇಸ್ ದಾಖಲಾದ ಬೆನ್ನಲ್ಲೇ ಶಿಲ್ಪಾ ಶೆಟ್ಟಿ ಅವರಿಗೆ ಸೇರಿದ ಜಾಗಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಪಬ್ ಮೇಲೆ ದಾಳಿ ಆಗಿದೆ. ಅಲ್ಲದೇ ಮುಂಬೈ ನಿವಾಸದ ಮೇಲೂ ದಾಳಿ ಮಾಡಲಾಗಿದೆ.

ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಐಟಿ ದಾಳಿ: 60 ಕೋಟಿ ರೂ. ವಂಚನೆ ಕೇಸ್
Shilpa Shetty

Updated on: Dec 18, 2025 | 9:59 PM

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರ ಕುಟುಂಬದ ಮೇಲೆ ಹಲವಾರು ಕೇಸ್​​ಗಳು ಇವೆ. ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಈಗಾಗಲೇ ಅನೇಕ ಪ್ರಕರಣಗಳಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಈಗ ಶಿಲ್ಪಾ ಶೆಟ್ಟಿ ಅವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಅವರ ಮುಂಬೈ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗುರುವಾರ (ಡಿಸೆಂಬರ್ 18) ಈ ಘಟನೆ ನಡೆದಿದೆ. ಅದಕ್ಕೂ ಒಂದು ದಿನ ಮುನ್ನ, ಅಂದರೆ ಡಿ.17ರಂದು ಬೆಂಗಳೂರಿನಲ್ಲಿ ಕೂಡ ಶಿಲ್ಪಾ ಶೆಟ್ಟಿ ಅವರಿಗೆ ಸಂಬಂಧಿಸಿದ ಜಾಗಗಳಲ್ಲಿ ಐಟಿ ಅಧಿಕಾರಿಗಳು ದಾಳಿ (IT Raid) ಮಾಡಿದ್ದರು.

ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಅವರು ‘ಬಾಸ್ಟಿಯನ್ ಗಾರ್ಡನ್ ಸಿಟಿ’ ಪಬ್ ಹೊಂದಿದ್ದಾರೆ. ಇದು ಬೆಂಗಳೂರಿನ ಅತಿ ದುಬಾರಿ ಪಬ್​​ಗಳಲ್ಲಿ ಒಂದಾಗಿದೆ. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ಈ ಪಬ್ ಇದೆ. ಪಬ್ ಮಾತ್ರವಲ್ಲದೇ ಇನ್ನೂ ಹಲವು ಕಡೆಗಳಲ್ಲಿ ದಾಳಿ ಮಾಡಿ ಕೆಲವು ದಾಖಲೆಗಳನ್ನು ಪರಿಶೀಲಿಸಲಾಗಿದೆ. ಇದರಿಂದಾಗಿ ಶಿಲ್ಪಾ ಶೆಟ್ಟಿ ಅವರಿಗೆ ಸಂಕಷ್ಟ ಶುರುವಾಗಿದೆ.

ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಮೇಲೆ 60 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿಬಂದಿದೆ. ಮುಂಬೈ ಮೂಲದ ಉದ್ಯಮಿ ದೀಪಕ್ ಕೊಠಾರಿ ಅವರು ಈ ಆರೋಪ ಮಾಡಿದ್ದಾರೆ. ಸ್ಟಾರ್ ದಂಪತಿಯಿಂದ ತಮಗೆ ವಂಚನೆ ಆಗಿದೆ ಎಂದು ದೀಪಕ್ ಕೊಠಾರಿ ದೂರು ನೀಡಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಪಬ್ ಮೇಲೆ ದಾಳಿ:
ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ 5 ಕಾರಿನಲ್ಲಿ ಹತ್ತಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಸೆಂಟ್ ಮಾರ್ಕ್ಸ್ ರಸ್ತೆಯ ಬ್ಯಾಸ್ಟಿಯನ್ ಪಬ್ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ರೆಸ್ಟೋರೆಂಟ್ ಸಹಜವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟರು. ಆದರೆ ಆಡಳಿತ ವಿಭಾಗ ಮತ್ತು ಅಕೌಂಟ್ಸ್ ವಿಭಾಗದಲ್ಲಿ ಐಟಿ ಅಧಿಕಾರಿಗಳು ಜಾಲಾಡಿದರು. ಇಷ್ಟು ವರ್ಷಗಳಿಂದ ಕಟ್ಟಿದ ತೆರಿಗೆ ಎಷ್ಟು ಎಂಬುದನ್ನು ಪರಿಶೀಲಿಸಲಾಯಿತು. ತೆರಿಗೆ ಇಲಾಖೆಗೆ ನೀಡಿರುವ ದಾಖಲಾತಿಗಳಿಗೂ ಕೌಂಟರ್​ನಲ್ಲಿ ಇದುವರೆಗೆ ಆಗಿರುವ ವ್ಯಾಪಾರಕ್ಕೂ ಹೋಲಿಕೆ ಮಾಡಲಾಗಿದೆ. ಹೂಡಿಕೆ, ಲಾಭ ಮತ್ತು ತೆರಿಗೆ ಈ ಮೂರು ವಿಚಾರಗಳ ಬಗ್ಗೆ ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಶಿಲ್ಪಾ ಶೆಟ್ಟಿ ವಿರುದ್ಧ ಬೆಂಗಳೂರು ಪೊಲೀಸರ ಎಫ್​​ಐಆರ್: ನಡೆದಿದ್ದೇನು?

ಶಿಲ್ಪಾ ಶೆಟ್ಟಿ ಅವರ ಪಬ್​ನಲ್ಲಿ ಕೆಲವು ದಿನಗಳ ಹಿಂದೆ ಉದ್ಯಮಿ ಸತ್ಯನಾಯ್ಡು ಮತ್ತು ಇತರರ ನಡುವೆ ಒಂದು ಗಲಾಟೆ ಆಗಿತ್ತು. ಆ ಬಳಿಕ ಪಬ್ ಅವಧಿ ಮೀರಿ, ಅಂದರೆ 1.30ರ ತನಕ ಒಪನ್ ಇತ್ತು. ಈ ಎರಡೂ ವಿಚಾರಕ್ಕೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೇಸ್ ಕೂಡ ದಾಖಲಾಗಿತ್ತು. ಕಳೆದ 10 ದಿನಗಳ ಅಂತರದಲ್ಲಿ ಈ ಪಬ್ ಮೇಲೆ ಒಂದು ಕೇಸ್ ಹಾಗೂ ಐಟಿ ದಾಳಿ ನಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.