AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಮತ್ತೆ ಶಕ್ತಿ ತುಂಬಲು ಶಾರುಖ್ ಖಾನ್ ಪ್ಲ್ಯಾನ್; ಮಹತ್ವದ ಕೆಲಸಕ್ಕೆ ಶುಭಾರಂಭ

ಶಾರುಖ್ ಖಾನ್ ಅವರು ಒಂದೇ ಬಾರಿಗೆ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿದ್ದಾರ್ಥ್ ಆನಂದ್ ನಿರ್ದೇಶನದ ‘ಪಠಾಣ್’ ಚಿತ್ರದ ಕೆಲಸಗಳಲ್ಲಿ ಶಾರುಖ್ ಬ್ಯುಸಿ ಇದ್ದಾರೆ. ಇದಲ್ಲದೆ, ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಅಟ್ಲೀ ಜತೆ ಸಿನಿಮಾ ಮಾಡುತ್ತಿದ್ದಾರೆ.

ಬಾಲಿವುಡ್​ಗೆ ಮತ್ತೆ ಶಕ್ತಿ ತುಂಬಲು ಶಾರುಖ್ ಖಾನ್ ಪ್ಲ್ಯಾನ್; ಮಹತ್ವದ ಕೆಲಸಕ್ಕೆ ಶುಭಾರಂಭ
ಶಾರುಖ್-ಯಶ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Apr 17, 2022 | 11:00 AM

Share

‘ಕೆಜಿಎಫ್ ಚಾಪ್ಟರ್ 2’ ಸಿನಿಮಾ (KGF Chapter 2) ತೆರೆಗೆ ಬಂದ ನಂತರದಲ್ಲಿ ಬಾಲಿವುಡ್ ಕಥೆ ಮುಗಿದೇ ಹೋಯಿತು ಎನ್ನುವ ಮಾತು ಕೇಳಿಬರುತ್ತಿದೆ. ಇದು ಬಾಲಿವುಡ್ (Bollywood) ಸ್ಟಾರ್​ಗಳು ಹಾಗೂ ಅಲ್ಲಿನ ನಿರ್ದೇಶಕರಿಗೆ ಚಿಂತೆ ತಂದಿದೆ. ಹೇಗಾದರೂ ಮಾಡಿ ಮತ್ತೆ ಮೊದಲಿನ ಚಾರ್ಮ್​ ಮರಳಿ ತರುವ ಪ್ರಯತ್ನದಲ್ಲಿ ತೊಡಗಿದ್ದಾರೆ ಅಲ್ಲಿನ ನಿರ್ದೇಶಕರು. ಹೀಗಿರುವಾಗಲೇ ಶಾರುಖ್ ಖಾನ್ ಅವರು (Shah Rukh Khan) ಹೊಸ ಸಿನಿಮಾದ ಶೂಟಿಂಗ್ ಆರಂಭಿಸಿದ್ದಾರೆ. ಸೋಲನ್ನೇ ಕಾಣದ ನಿರ್ದೇಶಕ ರಾಜ್​ ಕುಮಾರ್ ಹಿರಾನಿ ಜತೆ ಅವರು ಕೆಲಸ ಮಾಡುತ್ತಿದ್ದಾರೆ.

‘ಪುಷ್ಪ’, ‘ಆರ್​ಆರ್​ಆರ್’, ‘ಕೆಜಿಎಫ್ 2’ ಚಿತ್ರದ ಕಲೆಕ್ಷನ್ ನೋಡಿ ಬಾಲಿವುಡ್ ಮಂದಿ ಮಂಕಾಗಿದ್ದಾರೆ. ಸಲ್ಮಾನ್ ಖಾನ್ ಮೊದಲಾದವರ ಚಿತ್ರಗಳು ಗೆಲುವಿನ ಮುಖವನ್ನು ಕಾಣುತ್ತಿಲ್ಲ. ದಕ್ಷಿಣ ಭಾರತದ ಸಿನಿಮಾಗಳನ್ನು ಬಾಲಿವುಡ್​ಗೆ ರಿಮೇಕ್ ಮಾಡಿ ಕೊಂಚ ಬಿಸ್ನೆಸ್ ಮಾಡಿಕೊಳ್ಳುತ್ತಿದ್ದಾರೆ. ‘ನಾನು ಪ್ರಾದೇಶಿಕ ಸಿನಿಮಾಗಳನ್ನು ಮಾಡುವುದಿಲ್ಲ’ ಎಂದು ಧಿಮಾಕಿನ ಮಾತುಗಳನ್ನು ಆಡಿದ್ದರು ಜಾನ್​ ಅಬ್ರಾಹಂ. ಅವರಿಗೆ ಜನರು ಸೋಲಿನ ರುಚಿ ತೋರಿಸಿದ್ದಾರೆ. ಹೀಗಿರುವಾಗಲೇ ಮತ್ತೆ ಬಾಲಿವುಡ್​ಅನ್ನು ಮೇಲಕ್ಕೆತ್ತಬೇಕು ಎಂದು ಅಲ್ಲಿನ ಸ್ಟಾರ್​ಗಳು ನಿರ್ಧರಿಸಿದಂತಿದೆ.

ಶಾರುಖ್ ಖಾನ್ ಅವರು ಒಂದೇ ಬಾರಿಗೆ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸಿದ್ದಾರ್ಥ್ ಆನಂದ್ ನಿರ್ದೇಶನದ ‘ಪಠಾಣ್’ ಚಿತ್ರದ ಕೆಲಸಗಳಲ್ಲಿ ಶಾರುಖ್ ಬ್ಯುಸಿ ಇದ್ದಾರೆ. ಇದಲ್ಲದೆ, ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಅಟ್ಲೀ ಜತೆ ಸಿನಿಮಾ ಮಾಡುತ್ತಿದ್ದಾರೆ. ಇದಲ್ಲದೆ, ರಾಜ್​ಕುಮಾರ್ ಹಿರಾನಿ ಜತೆಗಿನ ಸಿನಿಮಾಗೆ ಅವರು ಚಾಲನೆ ನೀಡಿದ್ದಾರೆ.

ರಾಜ್​ಕುಮಾರ್ ಹಿರಾನಿ ನಿರ್ದೇಶನದ ಸಿನಿಮಾಗಳು ಬಾಕ್ಸ್​ ಆಫೀಸ್​ನಲ್ಲಿ ಹಿಟ್ ಆಗಿವೆ. ಅವರ ಕೊನೆಯ ಸಿನಿಮಾ ‘ಸಂಜು’. ಸಂಜಯ್ ದತ್​ ಅವರ ಕುರಿತು ಸಿದ್ಧವಾದ ಈ ಬಯೋಪಿಕ್ ಹಿಟ್ ಆಗಿತ್ತು. ಇದಾದ ಬಳಿಕ ಅವರು ಯಾವುದೇ ಸಿನಿಮಾ ಘೋಷಿಸಿಲ್ಲ. ಈಗ ಶಾರುಖ್ ಖಾನ್ ಜತೆ ಶೂಟಿಂಗ್ ಆರಂಭಿಸಿದ್ದಾರೆ.

ಶಾರುಖ್ ಖಾನ್ ಹಾಗೂ ರಾಜ್​ಕುಮಾರ್ ಹಿರಾನಿ ಪಂಜಾಬ್​ನ ಗ್ರಾಮದಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ. ಕೆಲ ದಿನಗಳ ಕಾಲ ಅವರು ಇಲ್ಲಿಯೇ ಶೂಟಿಂಗ್ ನಡೆಸಲಿದ್ದಾರೆ. ನಂತರ ಚಿತ್ರತಂಡ ಲಂಡನ್​ಗೆ ಪ್ರಯಾಣ ಬೆಳೆಸಲಿದೆ. ಈ ಸಿನಿಮಾ ಯಾವ ಶೈಲಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ಅಭಿಮಾನಿಗಳನ್ನು ಮೂಡಿದೆ.

ಇದನ್ನೂ ಓದಿ: ‘ಕೆಜಿಎಫ್ 2’ ಅಬ್ಬರದಿಂದ ಮಲ್ಟಿಪ್ಲೆಕ್ಸ್​ಗಳಲ್ಲಿ ‘ಬೀಸ್ಟ್​’ಗೆ ಸಿಗಲಿಲ್ಲ ಸ್ಕ್ರೀನ್​; ನಿರ್ಮಾಪಕನ ಅಸಮಾಧಾನ?

ಮಕ್ಕಳ ಜತೆ ಶಾರುಖ್ ಖಾನ್ ಜಾಲಿ ರೈಡ್; ವೈರಲ್ ಆಯ್ತು ಫೋಟೋ

Published On - 10:52 am, Sun, 17 April 22

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು