‘ದಿ ಸಾಬರಮತಿ ರಿಪೋರ್ಟ್’ ಸಿನಿಮಾಕ್ಕೆ ಎರಡು ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ

The Sabarmati Report: ಗೋಧ್ರಾ ಘಟನೆ ಕುರಿತ ಸಿನಿಮಾ ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೆ ಸಿನಿಮಾಕ್ಕೆ ಮಧ್ಯ ಪ್ರದೇಶದಲ್ಲಿ ತೆರಿಗೆ ವಿನಾಯಿತಿ ನೀಡಲಾಗಿತ್ತು. ಈಗ ಹರಿಯಾಣಾನಲ್ಲಿಯೂ ತೆರಿಗೆ ವಿನಾಯಿತಿ ನೀಡಲಾಗಿದೆ.

‘ದಿ ಸಾಬರಮತಿ ರಿಪೋರ್ಟ್’ ಸಿನಿಮಾಕ್ಕೆ ಎರಡು ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ
Follow us
ಮಂಜುನಾಥ ಸಿ.
|

Updated on: Nov 21, 2024 | 12:33 PM

ಭಾರತದ ಕರಾಳ ಘಟನೆಗಳಲ್ಲಿ ಒಂದಾದ ಗೋದ್ರಾ ಘಟನೆಯನ್ನು ಆಧರಿಸಿ ‘ದಿ ಸಾಬರಮತಿ ರಿಪೋರ್ಟ್’ ಹೆಸರಿನ ಸಿನಿಮಾ ನಿರ್ಮಾಣವಾಗಿದ್ದು ಕೆಲ ದಿನಗಳ ಹಿಂದಷ್ಟೆ ಸಿನಿಮಾ ಬಿಡುಗಡೆ ಆಗಿದೆ. ಗೋದ್ರಾ ಘಟನೆ ನಡೆದ ಬಳಿಕ ಅದನ್ನು ಮಾಧ್ಯಮಗಳು ಹೇಗೆ ನೋಡಿದವು? ನಿಜವಾಗಿ ಏನು ನಡೆದಿತ್ತು? ಅದನ್ನು ಮುಚ್ಚಿ ಹಾಕುವ ಪ್ರಯತ್ನ ಹೇಗಾಯ್ತು? ಇತ್ಯಾದಿ ವಿಷಯಗಳನ್ನು ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ಒಳಗೊಂಡಿದೆ.

ವಿಕ್ರಾಂತ್ ಮೆಸ್ಸಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾದ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ‘ಸತ್ಯ ಹೊರಗೆ ಬರಬೇಕು’ ಎಂದಿದ್ದರು. ನರೇಂದ್ರ ಮೋದಿಯವರ ಮೆಚ್ಚುಗೆ ಲಭ್ಯವಾದ ಬೆನ್ನಲ್ಲೆ, ಬಿಜೆಪಿ ಆಡಳಿತದಲ್ಲಿರುವ ಮಧ್ಯ ಪ್ರದೇಶದಲ್ಲಿ ತೆರಿಗೆ ವಿನಾಯಿತಿ ಘೋಷಣೆ ಮಾಡಲಾಗಿತ್ತು. ಮಧ್ಯ ಪ್ರದೇಶದ ಬಳಿಕ ಈಗ ಬಿಜೆಪಿ ಆಡಳಿತವಿರುವ ಮತ್ತೊಂದು ರಾಜ್ಯವಾದ ಹರಿಯಾಣಾನಲ್ಲಿ ತೆರಿಗೆ ವಿನಾಯಿತಿ ಘೋಷಣೆ ಮಾಡಲಾಗಿದೆ.

ಹರಿಯಾಣದ ಸಿಎಂ ನಯಾಬ್ ಸಿಂಗ್ ಸೈನಿ ಅವರು ಇತ್ತೀಚೆಗಷ್ಟೆ ತಮ್ಮ ಸಂಪುಟದ ಕೆಲವು ಸಚಿವರೊಟ್ಟಿಗೆ ಸೇರಿ ‘ದಿ ಸಾಬರಮತಿ ರಿಪೊರ್ಟ್’ ಸಿನಿಮಾ ವೀಕ್ಷಿಸಿದ್ದು, ಈ ಸಂದರ್ಭದಲ್ಲಿ ಕೆಲ ಕೇಂದ್ರ ಮಂತ್ರಿಗಳು ಸಹ ಹಾಜರಿದ್ದರು. ಸಿನಿಮಾದ ನಿರ್ಮಾಪಕಿ ಏಕ್ತಾ ಕಪೂರ್ ಸಹ ಈ ಸಂದರ್ಭದಲ್ಲಿ ಹಾಜರಿದ್ದರು. ಸಿನಿಮಾ ನೋಡಿದ ಸಿಎಂ, ಎಲ್ಲರೂ ನೋಡಬೇಕಾದ ಸಿನಿಮಾ ಇದೆಂದು ಕೊಂಡಾಡಿದರು. ಬಳಿಕ ಹರಿಯಾಣಾದಲ್ಲಿ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ:ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದ ‘ದಿ ಸಾಬರಮತಿ ರಿಪೋರ್ಟ್’ ಗಳಿಸಿದ್ದೆಷ್ಟು?

‘ದಿ ಸಾಬರಮತಿ ರಿಪೋರ್ಟ್’ ಸಿನಿಮಾವನ್ನು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ಹೋಲಿಸಿದ ಸಿಎಂ ಸೈನಿ, ‘ಆಗ ನಡೆದ ಘಟನೆಗಳನ್ನು ಯಥಾವತ್ತಾಗಿ ಸತ್ಯಕ್ಕೆ ಹತ್ತಿರ ಇರುವಂತೆ ಚಿತ್ರೀಕರಿಸಲಾಗಿದೆ. ಎಲ್ಲರೂ ನೋಡಬೇಕಾದ ಸಿನಿಮಾ ಇದು’ ಎಂದಿದ್ದಾರೆ. ಪ್ರಧಾನಿ ಮೋದಿಯವರು ಸಹ ಈ ಸಿನಿಮಾ ಬಗ್ಗೆ ಟ್ವೀಟ್ ಮಾಡಿದ್ದು, ‘ಸತ್ಯ ಹೊರಗೆ ಬರುತ್ತಿರುವುದು ಬಹಳ ಒಳ್ಳೆಯದು. ಅದರಲ್ಲಿಯೂ ಸಾಮಾನ್ಯ ಜನ ನೋಡಿ ಅರ್ಥ ಮಾಡಿಕೊಳ್ಳುವ ಮಾಧ್ಯಮದ ಮೂಲಕ ಸತ್ಯ ಹೊರಗೆ ಬರುತ್ತಿದೆ. ಸುಳ್ಳು ಹೇಳಿಕೆಗಳು, ಕತೆಗಳು ಕೆಲ ಸಮಯದ ವರೆಗೆ ಮಾತ್ರವೇ ಜೀವಂತ ಇರಲು ಸಾಧ್ಯ, ಸತ್ಯ ಎಂದಾದರೂ ಹೊರಗೆ ಬರಲೇ ಬೇಕಾಗುತ್ತದೆ’ ಎಂದಿದ್ದಾರೆ.

ಈ ಹಿಂದೆ, ‘ದಿ ಕಾಶ್ಮೀರ್ ಫೈಲ್ಸ್’, ‘ಕೇರಳ ಸ್ಟೋರಿ’, ‘ವಾಕ್ಸಿನ್ ವಾರ್’ ಇನ್ನೂ ಕೆಲವು ಸಿನಿಮಾಗಳಿಗೆ ಬಿಜೆಪಿ ಅಧಿಕಾರದ ರಾಜ್ಯಗಳಲ್ಲಿ ತೆರಿಗೆ ವಿನಾಯಿತಿ ನೀಡಲಾಗಿತ್ತು. ಈಗ ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾಕ್ಕೆ ಸಹ ಅದೇ ರೀತಿ ತೆರಿಗೆ ವಿನಾಯಿತಿ ನೀಡಲಾಗುತ್ತಿದೆ. ಸಿನಿಮಾವನ್ನು ಧೀರಜ್ ಸರ್ನಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ವಿಕ್ರಾಂತ್ ಮೆಸ್ಸಿ, ರಾಶಿ ಖನ್ನಾ, ರಿಧಿ ದಿಗ್ರ, ಬರ್ಖಾ ಸಿಂಗ್ ಇನ್ನಿತರರು ನಟಿಸಿದ್ದಾರೆ. ನವೆಂಬರ್ 15 ಕ್ಕೆ ಈ ಸಿನಿಮಾ ಬಿಡುಗಡೆ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ