Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ

Swara Bhaskar | Death Threat: ಸ್ವರಾ ಭಾಸ್ಕರ್​ ಅವರು ಮೊದಲಿನಿಂದಲೂ ಅನೇಕ ವಿವಾದಗಳನ್ನು ಮಾಡಿಕೊಂಡಿದ್ದಾರೆ. ಈಗ ಮುಂಬೈನ ವರ್ಸೋವಾದಲ್ಲಿ ಇರುವ ಅವರ ನಿವಾಸಕ್ಕೆ ಕೊಲೆ ಬೆದರಿಕೆ ಪತ್ರವನ್ನು ಕಳಿಸಲಾಗಿದೆ.

Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ
ಸ್ವರಾ ಭಾಸ್ಕರ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 30, 2022 | 8:03 AM

ಅನೇಕ ಸೆಲೆಬ್ರಿಟಿಗಳಿಗೆ ಕೊಲೆ ಬೆದರಿಕೆ (Death Threat) ಹಾಕಲಾಗುತ್ತಿದೆ. ಪಂಜಾಬಿ ಸಿಂಗರ್​ ಸಿಧು ಮೂಸೆ ವಾಲಾ ಅವರ ಹತ್ಯೆ ಬೆನ್ನಲ್ಲೇ ಈ ರೀತಿಯ ಘಟನೆಗಳು ಹೆಚ್ಚಾಗಿ ವರದಿ ಆಗುತ್ತಿವೆ. ಕೆಲವೇ ದಿನಗಳ ಹಿಂದೆ ಬಾಲಿವುಡ್​ ಸ್ಟಾರ್​ ನಟ ಸಲ್ಮಾನ್​ ಖಾನ್​ (Salman Khan) ಮತ್ತು ಅವರ ತಂದೆ ಸಲೀಮ್​ ಖಾನ್​ ಅವರಿಗೆ ಜೀವ ಬೆದರಿಕೆ ಹಾಕಲಾಗಿತ್ತು. ಈಗ ಖ್ಯಾತ ನಟಿ ಸ್ವರಾ ಭಾಸ್ಕರ್ (Swara Bhaskar)​ ಅವರಿಗೆ ಇದೇ ರೀತಿಯಲ್ಲಿ ಬೆದರಿಕೆ ಹಾಕಲಾಗಿದೆ. ಅನಾಮಧೇಯ ವ್ಯಕ್ತಿಗಳಿಂದ ಸ್ವರಾ ಭಾಸ್ಕರ್​ ಅವರ ಮನೆಗೆ ಪತ್ರ ಬರೆಯಲಾಗಿದೆ. ಅವರನ್ನು ಕೊಲೆ ಮಾಡುವುದಾಗಿ ಈ ಪತ್ರದಲ್ಲಿ ಬರೆಯಲಾಗಿದೆ. ವಿನಾಯಕ ದಾಮೋದರ್​ ಸಾವರ್ಕರ್​ ಬಗ್ಗೆ ಮಾತನಾಡಿದ್ದಕ್ಕಾಗಿಯೇ ಸ್ವರಾ ಭಾಸ್ಕರ್​ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ವರದಿ ಆಗಿದೆ.

ಸ್ವರಾ ಭಾಸ್ಕರ್​​ ಅವರು ಮೊದಲಿನಿಂದಲೂ ಅನೇಕ ವಿವಾದಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ನೇರ ನಡೆ-ನುಡಿಯ ಕಾರಣದಿಂದ ಅವರು ಫೇಮಸ್​ ಆಗಿದ್ದಾರೆ. ಈಗ ಮುಂಬೈನ ವರ್ಸೋವಾದಲ್ಲಿ ಇರುವ ಅವರ ನಿವಾಸಕ್ಕೆ ಬೆದರಿಕೆ ಪತ್ರವನ್ನು ಕಳಿಸಲಾಗಿದೆ. ಈ ಕೃತ್ಯ ಮಾಡಿರುವವರು ಯಾರು ಎಂಬುದು ತಿಳಿದು ಬಂದಿಲ್ಲ. ಹಾಗಾಗಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಸ್ವರಾ ಭಾಸ್ಕರ್​ ಅವರು ದೂರು ದಾಖಲಿಸಿದ್ದಾರೆ.

ಮೂಲಗಳ ಪ್ರಕಾರ, ಬೆದರಿಕೆ ಪತ್ರವನ್ನು ಹಿಂದಿಯಲ್ಲಿ ಬರೆಯಲಾಗಿದೆ. ವೀರ ಸಾವರ್ಕರ್​ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಈ ದೇಶದ ಜನತೆ ಸಹಿಸುವುದಿಲ್ಲ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ. ವರ್ಸೋವಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ
Image
Salman Khan: ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್​ ಭದ್ರತೆ ಹೆಚ್ಚಳ
Image
ಕೊಲೆ ಬೆದರಿಕೆಗಳ ಹಿನ್ನೆಲೆಯಲ್ಲಿ ದೂರು ದಾಖಲಿಸಿದ ಕಂಗನಾ; ಚುನಾವಣೆ ಗೆಲ್ಲಲು ದ್ವೇಷ ಹರಡಬೇಡಿ ಎಂದ ನಟಿ
Image
ಶೂಟಿಂಗ್ ವೇಳೆಯೇ ಬಾಲಿವುಡ್​ ಖ್ಯಾತ ನಿರ್ದೇಶಕನಿಗೆ ತಾಲಿಬಾನಿಗಳಿಂದ ಬಂತು ಜೀವ ಬೆದರಿಕೆ
Image
ಶಿವಣ್ಣ ಮನೆ ಮುಂದೆ ಟೈಟ್ ಸೆಕ್ಯೂರಿಟಿ; ಶಿವರಾಜ್ ಕುಮಾರ್, ಬಿ.ಟಿ. ಲಲಿತಾ ನಾಯಕ್ ಸೇರಿ ನಾಲ್ವರಿಗೆ ಕೊಲೆ ಬೆದರಿಕೆ..

ಸ್ವರಾ ಭಾಸ್ಕರ್​ ಹಿನ್ನೆಲೆ:

ದೆಹಲಿ ಮೂಲದ ಸ್ವರಾ ಭಾಸ್ಕರ್​ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದಾರೆ. 2009ರಲ್ಲಿ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಅವರು ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ತನು ವೆಡ್ಸ್​ ಮನು’, ‘ಪ್ರೇಮ್​ ರತನ್​ ಧನ್​ ಪಾಯೋ’, ‘ಅನಾರ್ಕಲಿ ಆಫ್ ಆರಾಹ್’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಅವರು ಗಮನ ಸೆಳೆದಿದ್ದಾರೆ.

ಸಲ್ಮಾನ್​ ಖಾನ್​ ಕುಟುಂಬಕ್ಕೂ ಬಂದಿತ್ತು ಬೆದರಿಕೆ:

ಸಿಧು ಮೂಸೆ ವಾಲಾ ಅವರ ಹತ್ಯೆಯ ಬೆನ್ನಲ್ಲೇ ನಟ ಸಲ್ಮಾನ್​ ಖಾನ್​ ಕುಟುಂಬದವರಿಗೂ ಕೊಲೆ ಬೆದರಿಕೆ ಹಾಕಲಾಗಿತ್ತು. ಸಲ್ಲು ಮನೆಯ ಭದ್ರತಾ ಸಿಬ್ಬಂದಿಗೆ ಬೆದರಿಕೆ ಪತ್ರ ಸಿಕ್ಕಿತ್ತು. ‘ನಿಮಗೂ ಮೂಸೆ ವಾಲಾ ರೀತಿ ಮಾಡುತ್ತೇವೆ’ ಎಂದು ಅದರಲ್ಲಿ ಬರೆಯಲಾಗಿತ್ತು. ಈ ಬೆದರಿಕೆ ಪತ್ರ ಬಂದಿರುವುದು ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನಿಂದ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಸಲ್ಮಾನ್ ಖಾನ್​ಗೆ ಕೊಲೆ ಬೆದರಿಕೆ ಪ್ರಕರಣ; ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ

‘ನಿಮ್ಮನ್ನೂ ಸಿಧು ಮೂಸೆವಾಲಾ ರೀತಿ ಕೊಲ್ಲುತ್ತೇವೆ’; ಸಲ್ಮಾನ್​ ಖಾನ್ ತಂದೆಗೆ ಕೊಲೆ ಬೆದರಿಕೆ

Published On - 7:48 am, Thu, 30 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ