‘ಟೈಗರ್ 3’ ಸಿನಿಮಾ ಬಿಡುಗಡೆಗೆ ಮುನ್ನ ಪ್ರೇಕ್ಷಕರಲ್ಲಿ ಮನವಿ ಮಾಡಿದ ಸಲ್ಮಾನ್ ಖಾನ್

Tiger 3: ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ಭಾನುವಾರ ಬಿಡುಗಡೆ ಆಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನಾದಿನ ಪ್ರೇಕ್ಷಕರಲ್ಲಿ ಸಲ್ಮಾನ್ ಖಾನ್ ಮನವಿಯೊಂದನ್ನು ಮಾಡಿದ್ದಾರೆ.

‘ಟೈಗರ್ 3’ ಸಿನಿಮಾ ಬಿಡುಗಡೆಗೆ ಮುನ್ನ ಪ್ರೇಕ್ಷಕರಲ್ಲಿ ಮನವಿ ಮಾಡಿದ ಸಲ್ಮಾನ್ ಖಾನ್
Follow us
ಮಂಜುನಾಥ ಸಿ.
|

Updated on: Nov 11, 2023 | 6:01 PM

ಕಳೆದ ಕೆಲ ವರ್ಷಗಳಿಂದ ಟ್ರೆಂಡ್ ಒಂದು ಹುಟ್ಟಿಕೊಂಡಿದೆ. ಸಿನಿಮಾ ನೋಡಲು ಹೋದವರು ಸಿನಿಮಾದ ಕೆಲವು ತುಣುಕುಗಳನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ (Social Media) ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾ ಬಿಡುಗಡೆ ಆದ ಒಂದೆರಡು ದಿನದಲ್ಲಿ ಸಿನಿಮಾದ ಪ್ರಮುಖ ಸೀನ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿಬಿಟ್ಟಿರುತ್ತವೆ. ಇದು ಸಿನಿಮಾಗಳಿಗೆ ದೊಡ್ಡ ಹೊಡೆತ ನೀಡುತ್ತದೆ. ಇದೀಗ ಸಲ್ಮಾನ್ ಖಾನ್ (Salman Khan) ನಟನೆಯ ‘ಟೈಗರ್ 3’ ಸಿನಿಮಾ ಇದೇ ಭಾನುವಾರ ಬಿಡುಗಡೆ ಆಗಲಿದ್ದು, ಸಿನಿಮಾ ಬಿಡುಗಡೆಗೆ ಮುನ್ನ ಸಲ್ಮಾನ್ ಖಾನ್ ಪ್ರೇಕ್ಷಕರಲ್ಲಿ ಮನವಿಯೊಂದನ್ನು ಮಾಡಿದ್ದಾರೆ.

‘‘ನಾವು ‘ಟೈಗರ್ 3’ ಸಿನಿಮಾವನ್ನು ಸಾಕಷ್ಟು ಉತ್ಸಾಹದಿಂದ, ಪ್ರೀತಿಯಿಂದ ಮಾಡಿದ್ದೇವೆ. ‘ಟೈಗರ್ 3’ ಸಿನಿಮಾದಲ್ಲಿ ನಿಮ್ಮ ಮನೊರಂಜನೆಗಾಗಿ ಕೆಲವು ಒಳ್ಳೆಯ, ಕುತೂಹಲಕಾರಿ ದೃಶ್ಯಗಳು, ಸನ್ನಿವೇಶಗಳನ್ನು ಕಟ್ಟಿಕೊಟ್ಟಿದ್ದೀವಿ, ನೀವು ನಮ್ಮ ಸಿನಿಮಾ ನೋಡಿದ ಬಳಿಕ ನಮ್ಮ ಸಿನಿಮಾದ ಕುತೂಹಲಕಾರಿ ಅಂಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳದೆ ಅವನ್ನು ರಕ್ಷಿಸಿ ಬೇರೆ ಪ್ರೇಕ್ಷಕರು ಅದೇ ಮನರಂಜನೆ ಪಡೆಯಲು ಅನುವು ಮಾಡಿಕೊಡಿ. ನೀವು ಬಿಟ್ಟುಕೊಡುವ ಸ್ಪಾಯ್ಲರ್‌ಗಳು ಚಲನಚಿತ್ರ ವೀಕ್ಷಣೆಯ ಅನುಭವವನ್ನು ಹಾಳುಮಾಡಬಹುದು. ನೀವು ಸರಿಯಾದದ್ದನ್ನು ಮಾಡುತ್ತೀರಿ ಎಂದು ನಾವು ನಂಬುತ್ತೇವೆ. ‘ಟೈಗರ್ 3’ ಚಿತ್ರತಂಡದ ಕಡೆಯಿಂದ ಎಲ್ಲರಿಗೂ ದೀಪಾವಳಿ ಉಡುಗೊರೆ ಆಗಲಿದೆ ಎಂದು ನಾವು ಭಾವಿಸುತ್ತೇವೆ. ನಮ್ಮ ಸಿನಿಮಾ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ನಾಳೆ (ನವೆಂಬರ್ 12) ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ’’ ಎಂದು ಸಲ್ಮಾನ್ ಖಾನ್ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಐಶ್ವರ್ಯಾ ರೈ ಮೇಲೆ ಸಲ್ಮಾನ್ ಖಾನ್​ಗೆ ಇತ್ತು ಅನುಮಾನ; ಸಂಬಂಧ ಮುರಿದು ಬೀಳಲು ಇದೇ ಕಾರಣ

ಹಲವರು ಸಿನಿಮಾ ನೋಡುವಾಗ ಸಿನಿಮಾದ ಆಕ್ಷನ್ ದೃಶ್ಯಗಳನ್ನು, ಅಥವಾ ಯಾವುದೋ ಕುತೂಹಲಕಾರಿ ಸನ್ನಿವೇಶವನ್ನೊ, ಅತಿಥಿ ಪಾತ್ರಗಳ ಎಂಟ್ರಿ ಸೀನ್ ಅನ್ನೋ ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಬಿಡುತ್ತಾರೆ. ಶಾರುಖ್ ಖಾನ್​ರ ‘ಪಠಾಣ್’ ಸಿನಿಮಾ ಬಿಡುಗಡೆ ಆದಾಗ, ಆ ಸಿನಿಮಾದಲ್ಲಿ ಸಲ್ಮಾನ್ ಖಾನ್ ಎಂಟ್ರಿ ಸೀನ್​ ಅನ್ನು ರೆಕಾರ್ಡ್ ಮಾಡಿ ಹರಿಬಿಡಲಾಗಿತ್ತು. ಇತ್ತೀಚೆಗೆ ಬಿಡುಗಡೆ ಆದ ‘ಜೈಲರ್’ ಸಿನಿಮಾಕ್ಕೂ ಇದೇ ಕತೆಯಾಯ್ತು. ಕೆಲವು ವಾರಗಳ ಮುಂಚೆ ಬಿಡುಗಡೆ ಆದ ವಿಜಯ್​ರ ‘ಲಿಯೋ’ ಸಿನಿಮಾದ ಅತ್ಯಂತ ಪ್ರಮುಖ ಭಾಗದ ವಿಡಿಯೋವನ್ನೇ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಆ ವಿಡಿಯೋ ನೋಡಿ ಸಿನಿಮಾ ನೋಡುವವರಿಗೆ ಸಿನಿಮಾದ ಅನುಭವ ಹಾಳಾಗುತ್ತದೆ, ಸಿನಿಮಾವನ್ನು ಪೂರ್ಣವಾಗಿ ಎಂಜಾಯ್ ಮಾಡಲು ಆಗುವುದಿಲ್ಲ. ಹಾಗಾಗಿ ಸಲ್ಮಾನ್ ಖಾನ್ ಪ್ರೇಕ್ಷಕರಲ್ಲಿ ಈ ಮನವಿಯನ್ನು ಮಾಡಿಕೊಂಡಿದ್ದಾರೆ.

ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ ಇದೇ ಭಾನುವಾರ ತೆರೆಗೆ ಬರುತ್ತಿದೆ. ಸಿನಿಮಾದಲ್ಲಿ ಸಲ್ಮಾನ್ ಜೊತೆಗೆ ಕತ್ರಿನಾ ಕೈಫ್ ಸಹ ಇದ್ದಾರೆ. ಇಮ್ರಾನ್ ಹಶ್ಮಿ ಈ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಟ್ರೈಲರ್ ಹಾಗೂ ಟೀಸರ್​ಗಳು ಬಿಡುಗಡೆ ಆಗಿ ವೈರಲ್ ಆಗಿವೆ. ಟೈಗರ್ ಸರಣಿಯ ಮೂರನೇ ಸಿನಿಮಾ ಇದಾಗಿದ್ದು, ಈ ಮುಂಚೆ ಬಿಡುಗಡೆ ಆಗಿರುವ ಎರಡು ಸಿನಿಮಾಗಳು ಸೂಪರ್ ಹಿಟ್ ಆಗಿವೆ. ಈ ಸಿನಿಮಾ ಸಹ ಸೂಪರ್ ಹಿಟ್ ಆಗುವ ನಿರೀಕ್ಷೆ ಸಲ್ಮಾನ್ ಖಾನ್ ರದ್ದು. ಸಿನಿಮಾವನ್ನು ಮನೀಶ್ ಶರ್ಮಾ ನಿರ್ದೇಶನ ಮಾಡಿದ್ದಾರೆ. ಯಶ್ ರಾಜ್ ಫಿಲ್ಮ್ಸ್​ ನಿರ್ಮಾಣ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್