AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲ್ಜಿತ್ ದೊಸಾಂಜ್ ಹಾಡು ಬ್ಯಾನ್ ಮಾಡಿ: ಮೋದಿಗೆ ಪತ್ರ ಬರೆದ ಸಿನಿಮಾ ಕಾರ್ಮಿಕರ ಒಕ್ಕೂಟ

ಪಾಕಿಸ್ತಾನಿ ನಟಿ ಹಾನಿಯಾ ಆಮಿರ್ ಜೊತೆ ಕೈ ಜೋಡಿಸಿರುವ ದಿಲ್ಜಿತ್ ದೊಸಾಂಜ್ ಅವರು ವಿವಾದಕ್ಕೆ ಸಿಲುಕಿದ್ದಾರೆ. ಹಾಗಾಗಿ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗಿದೆ. ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಅವರ ಸಿನಿಮಾ, ಹಾಡು, ಸಂಗೀತ ಕಾರ್ಯಕ್ರಮ, ಸೋಶಿಯಲ್ ಮೀಡಿಯಾ ಖಾತೆ ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ದಿಲ್ಜಿತ್ ದೊಸಾಂಜ್ ಹಾಡು ಬ್ಯಾನ್ ಮಾಡಿ: ಮೋದಿಗೆ ಪತ್ರ ಬರೆದ ಸಿನಿಮಾ ಕಾರ್ಮಿಕರ ಒಕ್ಕೂಟ
Diljit Dosanjh
ಮದನ್​ ಕುಮಾರ್​
|

Updated on: Jun 25, 2025 | 10:49 PM

Share

ಗಾಯಕ, ನಟ ದಿಲ್ಜಿತ್ ದೊಸಾಂಜ್ (Diljit Dosanjh) ಅವರ ಬಗ್ಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಪಾಕಿಸ್ತಾನದ ಕಲಾವಿದರ ಜೊತೆ ಅವರು ಕೈ ಜೋಡಿಸಿರುವುದೇ ಇಷ್ಟಕ್ಕೆಲ್ಲ ಕಾರಣ ಆಗುತ್ತಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಎಂಥ ಪರಿಸ್ಥಿತಿ ನಿರ್ಮಾಣ ಆಗಿದೆ ಎಂಬುದನ್ನು ಹೊಸದಾಗಿ ಹೇಳಬೇಕಾಗಿದ್ದಿಲ್ಲ. ಪಾಕ್ ಉಗ್ರರು ಪಹಲ್ಗಾಮ್​ನಲ್ಲಿ ದಾಳಿ ಮಾಡಿದ ಬಳಿಕ ಪಾಕ್ ಜೊತೆಗೆ ಎಲ್ಲ ಸಂಪರ್ಕವನ್ನು ಕಡಿತಗೊಳಿಸಲಾಯಿತು. ಹಾಗಿದ್ದರೂ ಕೂಡ ದಿಲ್ಜಿತ್ ದೊಂಸಾಜ್ ಅವರು ಪಾಕಿಸ್ತಾನದ ನಟಿ ಹಾನಿಯಾ ಆಮಿರ್ (Hania Aamir) ಜೊತೆ ಸಿನಿಮಾ ಪ್ರಚಾರದಲ್ಲಿ ಕೈ ಜೋಡಿಸಿದ್ದಾರೆ. ಇದನ್ನು ‘ಅಖಿಲ ಭಾರತ ಸಿನಿಮಾ ಕಾರ್ಮಿಕರ ಒಕ್ಕೂಟ’ (AICWA) ತೀವ್ರವಾಗಿ ವಿರೋಧಿಸಿದೆ.

‘ಸರ್ದಾರ್​ ಜೀ 3’ ಸಿನಿಮಾದಲ್ಲಿ ಹಾನಿಯಾ ಆಮಿರ್ ಮತ್ತು ದಿಲ್ಜಿತ್ ದೊಸಾಂಜ್ ಅವರು ತೆರೆ ಹಂಚಿಕೊಂಡಿದ್ದಾರೆ. ಇದು ಪಂಜಾಬಿ ಸಿನಿಮಾ. ಆದರೆ ಪಾಕ್ ಕಲಾವಿದರು ಈ ಚಿತ್ರದಲ್ಲಿ ನಟಿಸಿರುವುದರಿಂದ ಭಾರತದಲ್ಲಿ ಇದರ ಬಿಡುಗಡೆಗೆ ಅವಕಾಶ ನೀಡಿಲ್ಲ. ಆದರೆ ವಿದೇಶದಲ್ಲಿ ರಿಲೀಸ್ ಮಾಡಲಾಗುತ್ತಿದೆ. ಈ ಸಿನಿಮಾದ ಬಗ್ಗೆ ದಿಲ್ಜಿತ್ ದೊಸಾಂಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ್ದಾರೆ.

ಪಾಕಿಸ್ತಾನಕ್ಕೆ ಸಂಬಂಧಿಸಿದ ಯಾವುದೇ ಕಂಟೆಂಟ್​ಗಳನ್ನು ಭಾರತದ ಒಟಿಟಿಯಲ್ಲಿ ಪ್ರಸಾರ ಮಾಡುವಂತಿಲ್ಲ ಎಂದು ಕೇಂದ್ರ ಸರ್ಕಾರವೇ ಎಚ್ಚರಿಕೆ ನೀಡಿತ್ತು. ಆದರೂ ಕೂಡ ದಿಲ್ಜಿತ್ ದೊಸಾಂಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಾನಿಯಾ ಆಮಿರ್ ಇರುವ ಟ್ರೇಲರ್ ಹಂಚಿಕೊಂಡರು. ಇದರಿಂದ ಅವರ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.

ಈ ಮೊದಲು ನರೇಂದ್ರ ಮೋದಿ ಅವರನ್ನು ದಿಲ್ಜಿತ್ ದೊಸಾಂಜ್ ಅವರು ಭೇಟಿ ಆಗಿದ್ದರು. ದಿಲ್ಜಿತ್ ಗಾಯನಕ್ಕೆ ಮೋದಿ ಕೂಡ ಮೆಚ್ಚುಗೆ ಸೂಚಿಸಿದ್ದರು. ಆದರೆ ಈಗ ದಿಲ್ಜಿತ್ ಅವರನ್ನು ಬ್ಯಾನ್ ಮಾಡಬೇಕು ಎಂದು ನರೇಂದ್ರ ಮೋದಿಗೆ ಅಖಿಲ ಭಾರತ ಸಿನಿಮಾ ಕಾರ್ಮಿಕರ ಒಕ್ಕೂಟ ಪತ್ರ ಬರೆದಿದೆ. ದಿಲ್ಜಿತ್ ಅವರ ಸಂಗೀತ ಕಾರ್ಯಕ್ರಮಗಳು, ಹಾಡುಗಳು ಹಾಗೂ ಸೋಶಿಯಲ್ ಮೀಡಿಯಾ ಖಾತೆಗಳನ್ನು ಕೂಡ ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಸಂವಾದ ನಡೆಸಿದ ಗಾಯಕ ದಿಲ್​ಜೀತ್ ದೊಸಾಂಜ್

ಯೂಟ್ಯೂಬ್, ಜಿಯೋ ಸಾವನ್ ಮುಂತಾದ ಕಡೆಗಳಲ್ಲಿ ದಿಲ್ಜಿತ್ ದೊಸಾಂಜ್ ಅವರ ಹಾಡುಗಳು ಪ್ರಸಾರ ಆಗುತ್ತಿವೆ. ಅದನ್ನೆಲ್ಲ ನಿಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಅಖಿಲ ಭಾರತ ಸಿನಿಮಾ ಕಾರ್ಮಿಕರ ಒಕ್ಕೂಟ ಮನವಿ ಮಾಡಿದೆ. ಲೈವ್ ಸಂಗೀತ ಕಾರ್ಯಕ್ರಮಗಳನ್ನು ಮಾಡದಂತೆ ಅವರ ಮೇಲೆ ನಿಷೇಧ ವಿಧಿಸಬೇಕು ಎಂದು ಕೂಡ ಒತ್ತಾಯಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು