AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cannes 2024: 2ನೇ ದಿನವೂ ಕಾನ್​ ಚಿತ್ರೋತ್ಸವದಲ್ಲಿ ಐಶ್ವರ್ಯಾ ರೈ ಬಚ್ಚನ್​ ಮಿಂಚಿಂಗ್​

ಐಶ್ವರ್ಯಾ ರೈ ಬಚ್ಚನ್​ ಅವರ ಆತ್ಮವಿಶ್ವಾಸ ಕಂಡು ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಕಾನ್​ ಚಿತ್ರೋತ್ಸವದಲ್ಲಿ ಭಾಗಿಯಾಗಿರುವ ಐಶ್ವರ್ಯಾ ಅವರು 2ನೇ ದಿನ ಮಿರಿ ಮಿರಿ ಮಿಂಚುವ ಗೌನ್​ ಧರಿಸಿ ಎಲ್ಲರ ಗಮನವನ್ನು ತಮ್ಮತ್ತ ಸೆಳೆದುಕೊಂಡಿದ್ದಾರೆ. ಕೈ ನೋವಿನ ನಡುವೆಯೂ ಅವರು ರೆಡ್​ ಕಾರ್ಪೆಟ್​ನಲ್ಲಿ ಮಿಂಚಿದ್ದಾರೆ.

Cannes 2024: 2ನೇ ದಿನವೂ ಕಾನ್​ ಚಿತ್ರೋತ್ಸವದಲ್ಲಿ ಐಶ್ವರ್ಯಾ ರೈ ಬಚ್ಚನ್​ ಮಿಂಚಿಂಗ್​
ಐಶ್ವರ್ಯಾ ರೈ ಬಚ್ಚನ್
ಮದನ್​ ಕುಮಾರ್​
|

Updated on: May 17, 2024 | 9:48 PM

Share

2024ರ ಸಾಲಿನ ಕಾನ್​ ಚಿತ್ರೋತ್ಸವ (Cannes Film Festival 2024) ಕಳೆ ಕಟ್ಟಿದೆ. ವಿವಿಧ ದೇಶದ ಸೆಲೆಬ್ರಿಟಿಗಳು ಈ ಫಿಲ್ಮ್​ ಫೆಸ್ಟಿವಲ್​ನ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಭಾರತದ ಅನೇಕ ಸೆಲೆಬ್ರಿಟಿಗಳಿಗೆ ಈ ಪ್ರತಿಷ್ಠಿತ ಚಿತ್ರೋತ್ಸವದಿಂದ ಆಹ್ವಾನ ಬಂದಿದೆ. ನಟಿ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಅವರು ರೆಡ್​ ಕಾರ್ಪೆಟ್​ನಲ್ಲಿ ಮಿಂಚುತ್ತಿದ್ದಾರೆ. ಮೊದಲ ದಿನ ಆಕರ್ಷಕವಾದ ಕಾಸ್ಟ್ಯೂಮ್​ ಧರಿಸಿ ಕಂಗೊಳಿಸಿದ್ದ ಅವರು ಎರಡನೇ ದಿನವೂ ವಿಶೇಷವಾದ ಉಡುಗೆ ಧರಿಸಿ ಮಿಂಚಿದ್ದಾರೆ. ಐಶ್ವರ್ಯಾ ರೈ (Aishwarya Rai) ಅವರ ಫೋಟೋಗಳನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡು ಸಂಭ್ರಮಿಸಿದ್ದಾರೆ.

ಐಶ್ವರ್ಯಾ ರೈ ಬಚ್ಚನ್​ ಅವರು ಇತ್ತೀಚಿನ ವರ್ಷಗಳಲ್ಲಿ ಸಿನಿಮಾಗಳ ಆಯ್ಕೆಯಲ್ಲಿ ಹೆಚ್ಚು ಚ್ಯೂಸಿ ಆಗಿದ್ದಾರೆ. ಅಪರೂಪಕ್ಕೆ ಅಲ್ಲೊಂದು ಇಲ್ಲೊಂದು ಸಿನಿಮಾ ಮಾತ್ರ ಒಪ್ಪಿಕೊಳ್ಳುತ್ತಾರೆ. ಹಾಗಿದ್ದರೂ ಕೂಡ ಅವರಿಗೆ ಇರುವ ಬೇಡಿಕೆ ಕಡಿಮೆ ಆಗಿಲ್ಲ. ಇಂದಿಗೂ ಅದೇ ಚಾರ್ಮ್ ಉಳಿಸಿಕೊಂಡಿರುವ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನ ಅಂದ ಹೆಚ್ಚಿಸಿದ್ದಾರೆ. 2002ರಿಂದಲೂ ಪ್ರತಿ ವರ್ಷ ಐಶ್ವರ್ಯಾ ರೈ ಅವರು ಈ ಚಿತ್ರೋತ್ಸವದಲ್ಲಿ ಭಾಗಿಯಾಗುತ್ತಿದ್ದಾರೆ.

ನಟನೆಯ ಜೊತೆಗೆ ಮಾಡೆಲಿಂಗ್​ನಲ್ಲೂ ದೊಡ್ಡ ಹೆಸರು ಮಾಡಿದ್ದಾರೆ ಐಶ್ವರ್ಯಾ ರೈ ಬಚ್ಚನ್​. ಪ್ರತಿಷ್ಠಿತ ಸೌಂದರ್ಯ ವರ್ಧಕ ಕಂಪನಿಗಳಿಗೆ ಪ್ರಚಾರ ರಾಯಭಾರಿ ಆಗಿರುವ ಅವರು ಪ್ರತಿ ವರ್ಷವೂ ಕಾನ್​ ಚಿತ್ರೋತ್ಸವಕ್ಕೆ ಹಾಜರಿ ಹಾಕುತ್ತಾರೆ. ಈ ವರ್ಷ ಅವರ ಕೈಗೆ ಪೆಟ್ಟಾಗಿದೆ. ಆದರೂ ಸಹ ಅವರು ಕಾನ್​ ಫಿಲ್ಮ್​ ಫೆಸ್ಟಿವಲ್​ನಲ್ಲಿ ಭಾಗವಹಿಸುವುದನ್ನು ತಪ್ಪಿಸಿಕೊಂಡಿಲ್ಲ ಎಂಬುದು ಗಮನಿಸಬೇಕಾದ ಸಂಗತಿ.

ಇದನ್ನೂ ಓದಿ: ಕಾನ್ ಫಿಲ್ಮ್​ ಫೆಸ್ಟಿವಲ್​ನಲ್ಲಿ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ

ಐಶ್ವರ್ಯಾ ರೈ ಬಚ್ಚನ್​ ಅವರ ಬಲಗೈಗೆ ಪೆಟ್ಟಾಗಿದೆ. ಕೈ ನೋವು ಇರುವ ಕಾರಣ ಬ್ಯಾಂಡೇಜ್​ ಹಾಕಲಾಗಿದೆ. ಕೈಯಲ್ಲಿ ಬ್ಯಾಂಡೇಜ್​ ಇದ್ದರೂ ಕೂಡ ಐಶ್ವರ್ಯಾ ರೈ ಅವರು ಮಿರಿ ಮಿರಿ ಮಿಂಚುವಂತಹ ಗೌನ್​ಗಳಲ್ಲಿ ಧರಿಸಿ ಕೆಂಪು ಹಾಸಿನ ಮೇಲೆ ನಡೆದುಬಂದಿದ್ದಾರೆ. ಅವರ ಆತ್ಮವಿಶ್ವಾಸದ ಬಗ್ಗೆ ಎಲ್ಲರೂ ಮಾತನಾಡುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕಾನ್​ ಚಿತ್ರೋತ್ಸವದಲ್ಲಿ ಭಾಗವಹಿಸಲು ಐಶ್ವರ್ಯಾ ರೈ ಜೊತೆ ಅವರ ಪುತ್ರಿ ಆರಾಧ್ಯಾ ಬಚ್ಚನ್​ ಕೂಡ ಹೋಗಿದ್ದಾರೆ. ಅವರಿಬ್ಬರ ಫೋಟೋಗಳು ಸಹ ವೈರಲ್​ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ