ವದಂತಿಗೆ ಬ್ರೇಕ್​; ಒಟ್ಟಾಗಿ ಕಾಣಿಸಿಕೊಂಡ ಐಶ್ವರ್ಯಾ, ಅಭಿಷೇಕ್​, ಅಮಿತಾಭ್

|

Updated on: Dec 16, 2023 | 10:47 AM

ಇತ್ತೀಚೆಗೆ ಅಗಸ್ತ್ಯ ನಂದ ಅವರ ಮೊದಲ ಸಿನಿಮಾ ‘ದಿ ಆರ್ಚೀಸ್’ ರಿಲೀಸ್ ಆಗಿತ್ತು. ಈ ಸಿನಿಮಾ ನೋಡಲು ಇಡೀ ಕುಟುಂಬದವರು ಭಾಗಿ ಆಗಿದ್ದರು. ಆ ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ಕಾಣಿಸಿಕೊಂಡಿರಲಿಲ್ಲ. ಈಗ ಆರಾಧ್ಯಾಗಾಗಿ ಇಡೀ ಕುಟುಂಬ ಒಟ್ಟಿಗೆ ಆಗಮಿಸಿದೆ.

ವದಂತಿಗೆ ಬ್ರೇಕ್​; ಒಟ್ಟಾಗಿ ಕಾಣಿಸಿಕೊಂಡ ಐಶ್ವರ್ಯಾ, ಅಭಿಷೇಕ್​, ಅಮಿತಾಭ್
ಬಚ್ಚನ್ ಕುಟುಂಬ
Follow us on

ಇತ್ತೀಚೆಗೆ ನಟಿ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಹಾಗೂ ಅಭಿಷೇಕ್ ಬಚ್ಚನ್ ಕುಟುಂಬದ ವಿಚಾರ ಸಾಕಷ್ಟು ಸುದ್ದಿ ಆಗುತ್ತಿದೆ. ಇವರು ವಿಚ್ಛೇದನ ಪಡೆಯುತ್ತಾರೆ ಎಂದು ವದಂತಿ ಜೋರಾಗಿದೆ. ಅದಕ್ಕೆ ಪೂರಕವಾಗಿ ಹಲವು ಘಟನೆಗಳು ನಡೆದಿವೆ. ಈಗ ಬಚ್ಚನ್ ಕುಟುಂಬದ ಎಲ್ಲರೂ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ವದಂತಿಗಳಿಗೆ ಕೊನೆ ಹಾಡಿದ್ದಾರೆ. ಅಭಿಷೇಕ್ ಹಾಗೂ ಐಶ್ವರ್ಯಾ ಒಟ್ಟಿಗೆ ಕಾಣಿಸಿಕೊಂಡ ಬಳಿಕ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಮುಂಬೈನಲ್ಲಿರುವ ಧೀರೂಬಾಯಿ ಅಂಬಾನಿ ಇಂಟರ್​ನ್ಯಾಷನಲ್​ ಸ್ಕೂಲ್​ನಲ್ಲಿ ಬಚ್ಚನ್ ಕುಟುಂಬದ ಕುಡಿ ಆರಾಧ್ಯಾ ಶಿಕ್ಷಣ ಪಡೆಯುತ್ತಿದ್ದಾಳೆ. ಅವಳ ಶಾಲೆಯಲ್ಲಿ ಶುಕ್ರವಾರ (ಡಿಸೆಂಬರ್ 15) ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮಕ್ಕೆ ಐಶ್ವರ್ಯಾ, ಅಭಿಷೇಕ್, ಅಮಿತಾಭ್, ಅಗಸ್ತ್ಯ ನಂದ ಆಗಮಿಸಿದ್ದರು. ಈ ಕಾರ್ಯಕ್ರಮದ ವಿಡಿಯೋನ ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಐಶ್ವರ್ಯಾ ಅವರು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಕುಟುಂಬದ ಎಲ್ಲರೂ ಒಟ್ಟಾಗಿ ಕಾಣಿಸಿಕೊಂಡಿರುವುದು ಹಲವು ವದಂತಿಗೆ ತೆರೆ ಎಳೆದಂತೆ ಆಗಿದೆ.

ಇತ್ತೀಚೆಗೆ ಅಗಸ್ತ್ಯ ನಂದ ಅವರ ಮೊದಲ ಸಿನಿಮಾ ‘ದಿ ಆರ್ಚೀಸ್’ ರಿಲೀಸ್ ಆಗಿತ್ತು. ಈ ಸಿನಿಮಾ ನೋಡಲು ಇಡೀ ಕುಟುಂಬದವರು ಭಾಗಿ ಆಗಿದ್ದರು. ಆ ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ಕಾಣಿಸಿಕೊಂಡಿರಲಿಲ್ಲ. ಈಗ ಆರಾಧ್ಯಾಗಾಗಿ ಇಡೀ ಕುಟುಂಬ ಒಟ್ಟಿಗೆ ಆಗಮಿಸಿದೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಮಿತಾಭ್ ಹಾಗೂ ಅಭಿಷೇಕ್ ಒಟ್ಟಾಗಿ ಡ್ಯಾನ್ಸ್ ಕೂಡ ಮಾಡಿದ್ದಾರೆ.


ಬಚ್ಚನ್ ಕುಟುಂಬದ ಕೆಲವು ನಡೆಗಳು ಸಾಕಷ್ಟು ಕುತೂಹಲ ಮೂಡಿಸಿದ್ದವು. ಐಶ್ವರ್ಯಾ ರೈ ಬಚ್ಚನ್ ಹಾಗೂ ಅಭಿಷೇಕ್ ಬೇರೆ ಬೇರೆ ವಾಸ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಇನ್ನು, ಇನ್​ಸ್ಟಾಗ್ರಾಮ್​ನಲ್ಲಿ ಅಮಿತಾಭ್ ಅವರು ಐಶ್ವರ್ಯಾ ಅವರನ್ನು ಅನ್​ಫಾಲೋ ಮಾಡಿದ್ದು ಸಾಕಷ್ಟು ಸುದ್ದಿ ಆಯಿತು. ಈ ಎಲ್ಲಾ ಕಾರಣದಿಂದ ವಿಚ್ಛೇದನ ವದಂತಿ ಜೋರಾಯಿತು.

ಇದನ್ನೂ ಓದಿ: ‘ಎಲ್ಲವನ್ನೂ ಹೇಳಿದೆ, ಎಲ್ಲವನ್ನೂ ಮಾಡಿದೆ’; ಐಶ್ವರ್ಯಾ ರೈ ಬಗ್ಗೆ ಟ್ವೀಟ್ ಮಾಡಿದ್ರಾ ಅಮಿತಾಭ್?

ಐಶ್ವರ್ಯಾ ಹಾಗೂ ಅಭಿಷೇಕ್ ಬಚ್ಚನ್ 2007ರಲ್ಲಿ ಮದುವೆ ಆದರು. 2011ರಲ್ಲಿ ಐಶ್ವರ್ಯಾಗೆ ಮಗಳು ಜನಿಸಿದಳು. ಇವಳಿಗೆ ಆರಾಧ್ಯಾ ಎಂದು ನಾಮಕರಣ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:08 am, Sat, 16 December 23