AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ರೈ ಬಚ್ಚನ್ ಕಾರಿಗೆ ಬಸ್ ಡಿಕ್ಕಿ? ಘಟನೆ ಬಗ್ಗೆ ಅಭಿಮಾನಿಗಳಿಗೆ ಆತಂಕ

ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದೆ. ಮುಂಬೈನಲ್ಲಿ ಐಶ್ವರ್ಯಾ ರೈ ಬಚ್ಚನ್ ಅವರ ಕಾರಿಗೆ ಬಸ್ ಡಿಕ್ಕಿ ಆಗಿದೆ ಎಂದು ವರದಿ ಆಗಿದೆ. ಈ ಸುದ್ದಿ ಹಬ್ಬಿದ ಬಳಿಕ ಅಭಿಮಾನಿಗಳಿಗೆ ಆತಂಕ ಆಗಿದೆ. ಆದರೆ ಘಟನೆಯಿಂದ ಯಾವುದೇ ತೊಂದರೆ ಆಗಿಲ್ಲ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.

ಐಶ್ವರ್ಯಾ ರೈ ಬಚ್ಚನ್ ಕಾರಿಗೆ ಬಸ್ ಡಿಕ್ಕಿ? ಘಟನೆ ಬಗ್ಗೆ ಅಭಿಮಾನಿಗಳಿಗೆ ಆತಂಕ
Aishwarya Rai Bachchan
ಮದನ್​ ಕುಮಾರ್​
|

Updated on: Mar 26, 2025 | 9:22 PM

Share

ಬಾಲಿವುಡ್​ನ ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan)ಬಗ್ಗೆ ಒಂದು ಸುದ್ದಿ ಹರಿದಾಡುತ್ತಿದೆ. ಬುಧವಾರ (ಮಾರ್ಚ್​ 26) ಅವರ ಕಾರಿಗೆ ಬಸ್ ಡಿಕ್ಕಿ ಆಗಿದೆ ಎಂದು ಹೇಳಲಾಗುತ್ತಿದೆ. ಮುಂಬೈನ ಬೀದಿಯಲ್ಲಿ ಈ ಘಟನೆ ನಡೆದಿದೆ ಎಂದು ಪಾಪರಾಜಿ ಸೋಶಿಯಲ್ ಮೀಡಿಯಾ ಖಾತೆಯೊಂದರಲ್ಲಿ ಪೋಸ್ಟ್ ಮಾಡಲಾಗಿದೆ. ಕಾರಿಗೆ (Aishwarya Rai  Car) ಬಸ್ ಡಿಕ್ಕಿ ಆದ ನಂತರ ಐಶ್ವರ್ಯಾ ರೈ ಅವರ ಬಾಡಿಗಾರ್ಡ್​ಗಳು ರಸ್ತೆಯಲ್ಲಿ ಜಗಳ ಮಾಡಿದರು ಎಂದು ಕೂಡ ಸುದ್ದಿ ಹಬ್ಬಿದೆ. ಆದರೆ ಘಟನೆಯ ಬಗ್ಗೆ ಎಲ್ಲಿಯೂ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಹಾಗಿದ್ದರೂ ಕೂಡ ಅಭಿಮಾನಿಗಳಿಗೆ ಆತಂಕ ಆಗಿದೆ.

ಐಶ್ವರ್ಯಾ ರೈ ಅವರು ಬ್ಯುಸಿ ನಟಿ. ಸಿನಿಮಾ, ಜಾಹೀರಾತು ಮುಂತಾದ ಕೆಲಸಗಳಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಐಷಾರಾಮಿ ಕಾರಿನಲ್ಲಿ ಅವರು ಓಡಾಡುತ್ತಾರೆ. ಮುಂಬೈನ ರಸ್ತೆಯಲ್ಲಿ ಅವರ ಕಾರು ಚಲಿಸುತ್ತಿರುವಾಗ ಹಿಂದಿನಿಂದ ಬಸ್ ಬಂದು ಡಿಕ್ಕಿ ಹೊಡೆಯಿತು ಎಂದು ಹೇಳಲಾಗುತ್ತಿದೆ. ಮುಂಬೈನ ಜುಹುನಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಕೆಲವು ಕ್ಷಣಗಳ ಕಾಲ ಗದ್ದಲ ಉಂಟಾಗಿತ್ತು.

ಇನ್ನೊಂದು ಮೂಲದ ಪ್ರಕಾರ, ಆ ಕಾರಿನಲ್ಲಿ ಐಶ್ವರ್ಯಾ ರೈ ಬಚ್ಚನ್ ಅವರು ಇರಲಿಲ್ಲ. ಅಲ್ಲದೇ, ಬಸ್ ಜೋರಾಗಿ ಡಿಕ್ಕಿ ಕೂಡ ಆಗಿಲ್ಲ. ಹಿಂದಿನಿಂದ ಬರುತ್ತಿದ್ದ ಬಸ್ ಚಾಲಕ ಕಾರಣ ಇಲ್ಲದೇ ಜೋರಾಗಿ ಹಾರ್ನ್ ಮಾಡಿದ್ದರಿಂದ ಈ ಐಶ್ವರ್ಯಾ ರೈ ಅವರ ಕಾರಿನ ಚಾಲಕ ಕೋಪಗೊಂಡಿದ್ದಾನೆ. ಸಮಸ್ಯೆ ಏನು ಎಂಬುದನ್ನು ತಿಳಿಯಲು ಕಾರಿನಿಂದ ಕೆಳಗೆ ಇಳಿದಿದ್ದಾನೆ ಅಷ್ಟೇ ಎಂದು ಕೂಡ ವರದಿ ಆಗಿದೆ.

ಇದನ್ನೂ ಓದಿ
Image
ಸಲ್ಲು ಜೊತೆ ಪ್ರೇಮ, ಇಬ್ಬರು ಮಕ್ಕಳ ತಂದೆಯ ಜೊತೆ ವಿವಾಹ, ಆ ಬಳಿಕ ವಿಚ್ಛೇದನ
Image
ಸಿನಿಮಾ ಕೈಬಿಟ್ಟು ಸಲ್ಮಾನ್ ಖಾನ್​ಗೆ ಕ್ಷಮೆ ಕೇಳಿದ ಅಟ್ಲಿ; ರಾಂಗ್ ಆದ ನಟ?
Image
ದಕ್ಷಿಣದ ನಿರ್ದೇಶಕನ ಮೇಲೆ ಉರಿದು ಬಿದ್ದ ಸಲ್ಮಾನ್ ಖಾನ್ ಅಭಿಮಾನಿಗಳು, ಕಾರಣ?
Image
ಸಲ್ಮಾನ್ ಖಾನ್​ಗೆ ಬಂದಿರಲಿಲ್ಲ ಆಫರ್; ಜೀವನ ಬದಲಾಯಿಸಿದ ವ್ಯಕ್ತಿ ಇವರು

ಬಸ್ ಡಿಕ್ಕಿ ಆಗಿದೆ ಎಂಬ ಸುದ್ದಿ ವೈರಲ್ ಆದ ಬಳಿಕ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ಅಭಿಮಾನಿಗಳಿಗೆ ಆತಂಕ ಆಗಿದೆ. ತಮ್ಮ ನೆಚ್ಚಿನ ನಟಿಗೆ ಏನಾಗಿದೆಯೋ ಎಂದು ಅನೇಕರು ಚಿಂತೆಗೀಡಾಗಿದ್ದಾರೆ. ಆದರೆ ಯಾರಿಗೂ ಏನೂ ತೊಂದರೆ ಆಗಿಲ್ಲ ಎಂಬುದನ್ನು ತಿಳಿದ ಬಳಿಕ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಶೀಘ್ರವೇ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿರುವ ನಟಿ ಐಶ್ವರ್ಯಾ ರೈ ಬಚ್ಚನ್​

ಐಶ್ವರ್ಯಾ ರೈ ಬಚ್ಚನ್ ಅವರ ಐಷಾರಾಮಿ ಕಾರಿನ ಬೆಲೆ ಬರೋಬ್ಬರಿ 1.30 ಕೋಟಿ ರೂಪಾಯಿ ಎನ್ನಲಾಗಿದೆ. ಎಂಹೆಚ್02 ಜಿಜಿ5050 ಎಂಬ ನಂಬರ್ ಪ್ಲೇಟ್ ಇರುವುದರಿಂದ ಇದು ಐಶ್ವರ್ಯಾ ರೈ ಅವರ ಕಾರು ಎಂಬುದು ಅಭಿಮಾನಿಗಳಿಗೆ ಖಚಿತ ಆಗಿದೆ. ಒಟ್ಟಾರೆ ಈ ಘಟನೆ ಬಗ್ಗೆ ಫ್ಯಾಮಿಲಿ ಕಡೆಯಿಂದ ಹೇಳಿಕೆ ನೀಡಿದರೆ ಫ್ಯಾನ್ಸ್ ಇನ್ನಷ್ಟು ನಿರಾಳರಾಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ