AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾರಿಸ್ ಫ್ಯಾಷನ್ ವೀಕ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ;ರ‍್ಯಾಂಪ್ ಮೇಲೆ ಹೆಜ್ಜೆ ಹಾಕಿದ ನಟಿ

ಪ್ಯಾರಿಸ್ ಫ್ಯಾಷನ್ ವೀಕ್‌ನಲ್ಲಿ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್  ಜಗತ್ತಿನ ಗಮನ ಸೆಳೆದಿದ್ದಾರೆ. ಸೆಲಿನ್ ಡಿಯೋನ್ ಮತ್ತು ಕೆಂಡಲ್ ಜೆನ್ನರ್ ಅವರಂತಹ ಜಾಗತಿಕ ತಾರೆಗಳೊಂದಿಗೆ ಐಶ್ವರ್ಯಾ ರ‍್ಯಾಂಪ್ ವಾಕ್ ಮಾಡಿದರು. ತಮ್ಮ ಅಪಾರ ಸೌಂದರ್ಯ ಮತ್ತು ಆತ್ಮವಿಶ್ವಾಸದಿಂದ ರ‍್ಯಾಂಪ್ ಮೇಲೆ ಮಗದೊಮ್ಮೆ ಮೆರೆದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ.

ಪ್ಯಾರಿಸ್ ಫ್ಯಾಷನ್ ವೀಕ್‌ನಲ್ಲಿ ಮಿಂಚಿದ ಐಶ್ವರ್ಯಾ ರೈ;ರ‍್ಯಾಂಪ್ ಮೇಲೆ ಹೆಜ್ಜೆ ಹಾಕಿದ ನಟಿ
ಐಶ್ವರ್ಯಾ ರೈ
ರಾಜೇಶ್ ದುಗ್ಗುಮನೆ
|

Updated on: Sep 29, 2026 | 1:18 PM

Share

ಮುಖ್ಯಾಂಶಗಳು

  • ರ‍್ಯಾಂಪ್ ಮೇಲೆ ರಾಯಲ್ ಲುಕ್
  • ಕಪ್ಪು ವೆಲ್ವೆಟ್ ಗೌನ್‌ನಲ್ಲಿ ಮಿಂಚಿದ ವಿಶ್ವ ಸುಂದರಿ
  • ವೈರಲ್ ಆಯ್ತು ಅಪರೂಪದ ಕ್ಷಣ

ಜಾಗತಿಕ ಫ್ಯಾಷನ್ ಉದ್ಯಮದಲ್ಲಿ ಅತ್ಯಂತ ಪ್ರಸಿದ್ಧ ಮತ್ತು ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಪ್ಯಾರಿಸ್ ಫ್ಯಾಷನ್ ವೀಕ್​ನಲ್ಲಿ ಐಶ್ವರ್ಯಾ ರೈ ಪಾಲ್ಗೊಂಡು ಮಿಂಚಿದ್ದಾರೆ. ಅವರು ರ‍್ಯಾಂಪ್ ಮೇಲೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಅವರ ಸೌಂದರ್ಯಕ್ಕೆ ಅಭಿಮಾನಿಗಳು ಮನಸೋತಿದ್ದಾರೆ. ಈ ಫ್ಯಾಷನ್ ಶೋ ಮೂಲಕ ಐಶ್ವರ್ಯಾ ಭಾರತದ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಏರಿಸಿದ್ದಾರೆ.

‘ಲೋರಿಯಲ್ ಪ್ಯಾರಿಸ್’ ಕಂಪನಿಯ ಜಾಗತಿಕ ರಾಯಭಾರಿಯಾಗಿ ಐಶ್ವರ್ಯಾ ಭಾಗವಹಿಸಿದ್ದರು. ಈ ಬಾರಿಯ ‘ವಾಕ್ ಯುವರ್ ವರ್ತ್’ ಕಲ್ಪನೆಯಡಿ ಅವರು ರ‍್ಯಾಂಪ್ ವಾಕ್ ಮಾಡಿದರು. ವಿಶ್ವದ ಖ್ಯಾತ ತಾರೆಗಳಾದ ಕೆಂಡಲ್ ಜೆನ್ನರ್, ಸೆಲಿನ್ ಡಿಯೋನ್ ಮತ್ತು ವಿಯೋಲಾ ಡೇವಿಸ್ ಕೂಡ ಐಶ್ವರ್ಯಾ ಜೊತೆ ಹೆಜ್ಜೆ ಹಾಕಿದರು.

ರ‍್ಯಾಂಪ್ ವಾಕ್ ಸಮಯದಲ್ಲಿ ಐಶ್ವರ್ಯಾ ಕಪ್ಪು ಬಣ್ಣದ ವೆಲ್ವೆಟ್ ಗೌನ್ ಧರಿಸಿದ್ದರು. ಯಾನ್‌ ಶೂಮೇಕರ್ ವಿನ್ಯಾಸಗೊಳಿಸಿದ ಈ ಉಡುಪಿನಲ್ಲಿ ಅವರು ರಾಜಕುಮಾರಿಯಂತೆ ಕಂಗೊಳಿಸಿದರು. ತಲೆಯ ಮೇಲಿದ್ದ ಕಿರೀಟ ಅವರ ಸೌಂದರ್ಯವನ್ನು ಹೆಚ್ಚಿಸಿತ್ತು. ಗಾಯಕಿ ಸೆಲಿನ್ ಡಿಯೋನ್ ಜೊತೆ ಐಶ್ವರ್ಯಾ ಕೈಜೋಡಿಸಿ ನರ್ತಿಸಿದ ಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಐಶ್ವರ್ಯಾ ಅವರ ಕ್ಯಾಟ್ ವಾಕ್​ಗೆ ನೆಟ್ಟಿಗರು ಫಿದಾ ಆಗಿದ್ದಾರೆ. 1994ರಲ್ಲಿ ಮಿಸ್ ವರ್ಲ್ಡ್ ಪಟ್ಟ ಗೆದ್ದ ನಟಿ ಇಂದಿಗೂ ಅದೇ ಗ್ಲಾಮರ್ ಹೊಂದಿದ್ದಾರೆ ಎಂದು ಅಭಿಮಾನಿಗಳು ಕೊಂಡಾಡಿದ್ದಾರೆ. ಐಶ್ವರ್ಯಾ ಭಾರತೀಯ ಚಿತ್ರರಂಗದ ನಿಜವಾದ ಐಕಾನ್ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ. ಅವರ ನೈಜ ಸೌಂದರ್ಯಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಇದನ್ನೂ ಓದಿ: ಐಶ್ವರ್ಯಾ ರೈ ಮತ್ತು ರಾಣಿ ಮುಖರ್ಜಿ ಸ್ನೇಹ ಮುರಿದುಬಿದ್ದಿದ್ದು ಏಕೆ? ಇದರಲ್ಲಿದೆ ಶಾರುಖ್, ಅಭಿಷೇಕ್ ಪಾತ್ರ

ವೇದಿಕೆಯ ಹಿಂದೆ ಇತರ ತಾರೆಗಳ ಜೊತೆ ಐಶ್ವರ್ಯಾ ಕಾಲ ಕಳೆದರು. ನಟಿ ಈವಾ ಲೊಂಗೋರಿಯಾ ಅವರನ್ನು ತಬ್ಬಿಕೊಂಡು ಶುಭ ಕೋರಿದರು. ‘ಬ್ರಿಡ್ಜರ್ಟನ್’ ಸರಣಿಯ ಖ್ಯಾತಿಯ ಸಿಮೋನ್ ಆಶ್ಲಿ ಜೊತೆಯೂ ಆತ್ಮೀಯವಾಗಿ ಮಾತನಾಡಿದರು. ಈ ಸೌಹಾರ್ದಯುತ ವೀಡಿಯೊಗಳು ಈಗ ಜಾಲತಾಣಗಳಲ್ಲಿ ಅಪಾರ ಮೆಚ್ಚುಗೆ ಗಳಿಸುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ