AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cannes 2024: ಶೀಘ್ರವೇ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿರುವ ನಟಿ ಐಶ್ವರ್ಯಾ ರೈ ಬಚ್ಚನ್​

ಖ್ಯಾತ ನಟಿ ಐಶ್ವರ್ಯಾ ರೈ ಬಚ್ಚನ್​ ಅವರು 2024ರ ಕಾನ್​ ಚಿತ್ರೋತ್ಸವದಲ್ಲಿ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಅವರು ಭಾರತಕ್ಕೆ ಮರಳುತ್ತಿದ್ದಂತೆಯೇ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಹಾಗಾದರೆ ಅವರಿಗೆ ಏನಾಗಿದೆ? ಆರೋಗ್ಯ ಸಮಸ್ಯೆ ಇದ್ದರೂ ಕೂಡ ಐಶ್ವರ್ಯಾ ರೈ ಅವರು ಕಾನ್​ ಫಿಲ್ಮ್​ ಫೆಸ್ಟಿವಲ್​ಗೆ ತೆರಳಿದ್ದು ಯಾಕೆ? ಇಲ್ಲಿದೆ ಉತ್ತರ..

Cannes 2024: ಶೀಘ್ರವೇ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿರುವ ನಟಿ ಐಶ್ವರ್ಯಾ ರೈ ಬಚ್ಚನ್​
ಐಶ್ವರ್ಯಾ ರೈ ಬಚ್ಚನ್
ಮದನ್​ ಕುಮಾರ್​
|

Updated on: May 19, 2024 | 7:12 AM

Share

ಕೈ ನೋವು ಇದ್ದರೂ ಕೂಡ ನಟಿ ಐಶ್ವರ್ಯಾ ರೈ ಬಚ್ಚನ್​ (Aishwarya Rai Bachchan) ಅವರು ಫ್ರಾನ್ಸ್​ಗೆ ತೆರಳಿದ್ದಾರೆ. ಅಲ್ಲಿನ ಕಾನ್ ಫಿಲ್ಮ್​ ಫೆಸ್ಟಿವಲ್​ನಲ್ಲಿ (Cannes 2024) ಭಾಗಿ ಆಗಿದ್ದಾರೆ. ರೆಡ್ ಕಾರ್ಪೆಟ್​ ಮೇಲೆ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ. ಈ ವೇಳೆ ಅವರ ಬಲಗೈಯಲ್ಲಿ ಇರುವ ಬ್ಯಾಂಡೇಜ್​ ನೋಡಿ ಬಹುತೇಕರಿಗೆ ಅಚ್ಚರಿ ಆಗಿದೆ. ಈಗ ಸಿಕ್ಕಿರುವ ಮಾಹಿತಿ ಏನೆಂದರೆ, ಭಾರತಕ್ಕೆ ವಾಪಸ್​ ಆಗುತ್ತಿದ್ದಂತೆಯೇ ಐಶ್ವರ್ಯಾ ರೈ (Aishwarya Rai) ಅವರ ಕೈಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. 77ನೇ ಕಾನ್ ಚಿತ್ರೋತ್ಸವದಲ್ಲಿ ಅವರು ಮಿಂಚಿದ್ದಾರೆ. ಕೈ ನೋವಿನ ನಡುವೆಯೂ ತಮ್ಮ ಬದ್ಧತೆ ತೋರಿಸಿದ್ದಾರೆ.

ಸತತ 21 ವರ್ಷಗಳಿಂದ ಐಶ್ವರ್ಯಾ ರೈ ಬಚ್ಚನ್​ ಅವರು ಕಾನ್​ ಚಿತ್ರೋತ್ಸವದಲ್ಲಿ ಭಾಗಿ ಆಗುತ್ತಿದ್ದಾರೆ. ಅವರನ್ನು ವಿವಿಧ ಬಗೆಯ ಕಾಸ್ಟ್ಯೂಮ್​ನಲ್ಲಿ ನೋಡಿ ಫ್ಯಾನ್ಸ್​ ಖುಷಿಪಟ್ಟಿದ್ದಾರೆ. ಈ ವರ್ಷ ಅವರಿಗೆ ತೀವ್ರ ಕೈ ನೋವು ಇತ್ತು. ಹಾಗಾಗಿ ಅವರು ಕಾನ್​ ಚಿತ್ರೋತ್ಸವದ ರೆಡ್​ ಕಾರ್ಪೆಟ್​ನಲ್ಲಿ ಹೆಜ್ಜೆ ಹಾಕುವುದು ಅನುಮಾನ ಎಂದೇ ಅನೇಕರು ಊಹಿಸಿದ್ದರು. ಆದರೆ ಅಂಥವರ ಊಹೆ ಸುಳ್ಳಾಗಿದೆ.

ಕೆಲವೇ ದಿನಗಳ ಹಿಂದೆ ಐಶ್ವರ್ಯಾ ರೈ ಬಚ್ಚನ್​ ಅವರ ಮಣಿಕಟ್ಟಿಗೆ ಪೆಟ್ಟಾಗಿತ್ತು. ನೋವು ಇದ್ದಿದ್ದರಿಂದ ಈ ಬಾರಿ ಕಾನ್​ ಫಿಲ್ಮ್​ ಫೆಸ್ಟಿವಲ್​ಗೆ ತೆರಳುವುದು ಬೇಡ ಎಂದು ಆಪ್ತರು ಸಲಹೆ ಕೂಡ ನೀಡಿದ್ದರು. ಆದರೆ ಅದಕ್ಕೆ ಐಶ್ವರ್ಯಾ ರೈ ಒಪ್ಪಲಿಲ್ಲ. ಇಷ್ಟು ವರ್ಷಗಳ ಕಾಲ ನಡೆದುಬಂದ ಸಂಭ್ರಮವನ್ನು ಈ ಬಾರಿ ತಪ್ಪಿಸಲು ಅವರಿಗೆ ಇಷ್ಟ ಇರಲಿಲ್ಲ. ಹಾಗಾಗಿ ಕೈಗೆ ಬ್ಯಾಂಡೇಜ್​ ಹಾಕಿಸಿಕೊಂಡೇ ಅವರು ರೆಡ್​ ಕಾರ್ಪೆಟ್​ನಲ್ಲಿ ಪೋಸ್​ ನೀಡಿದರು.

ಇದನ್ನೂ ಓದಿ: ರಜನಿಕಾಂತ್​ಗೆ ಐಶ್ವರ್ಯಾ ರೈ ಜೋಡಿ ಎಂದಾಗ ಕಕ್ಕಾಬಿಕ್ಕಿ ಆಗಿದ್ದ ರಾಜಸ್ಥಾನಿ ವ್ಯಕ್ತಿ

ಐಶ್ವರ್ಯಾ ರೈ ಬಚ್ಚನ್​ ಅವರು ವಿದೇಶಕ್ಕೆ ತೆರಳುವುದಕ್ಕೂ ಮುನ್ನ ತಮ್ಮ ವೈದ್ಯರ ತಂಡದ ಜೊತೆ ಚರ್ಚೆ ಮಾಡಿದ್ದಾರೆ. ಮುಂದಿನ ವಾರ ಅವರು ಭಾರತಕ್ಕೆ ಮರಳಿದ ತಕ್ಷಣ ಮಣಿಕಟ್ಟಿನ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂಬ ಆಪ್ತರು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಮಗಳು ಆರಾಧ್ಯ ಬಚ್ಚನ್​ ಜೊತೆ ಐಶ್ವರ್ಯಾ ಅವರು ಕಾನ್​ ಚಿತ್ರೋತ್ಸವಕ್ಕೆ ತೆರಳಿದ್ದಾರೆ. ಅಲ್ಲಿಂದ ಅವರ ಫೋಟೋಗಳು ವೈರಲ್​ ಆಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ