ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು

Akshay Kumar Troll: ಅಕ್ಷಯ್​ ಕುಮಾರ್ ಮತ್ತೆ ಟ್ರೋಲ್​ ಆಗಿದ್ದಾರೆ. ಇನ್ಮುಂದೆ ಅವರು​ ಏನೇ ಮಾಡಿದರೂ ಅದನ್ನು ಜನರು ವಿಮಲ್​ ಜಾಹೀರಾತಿನ ಜೊತೆ ಹೋಲಿಸಿ ಮಾತನಾಡುತ್ತಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿ.

ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
ಅಕ್ಷಯ್ ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: May 02, 2022 | 7:43 AM

ಸೆಲೆಬ್ರಿಟಿಗಳ ಮೇಲೆ ಜನರು ಯಾವಾಗಲೂ ಕಣ್ಣು ಇಟ್ಟಿರುತ್ತಾರೆ. ಸ್ಟಾರ್​ ಕಲಾವಿದರು ಸಾರ್ವಜನಿಕ ಜೀವನದಲ್ಲಿ ಮಾಡುವ ಎಲ್ಲ ಕೆಲಸಗಳನ್ನೂ ಅಭಿಮಾನಿಗಳು ಗಮನಿಸುತ್ತಾ ಇರುತ್ತಾರೆ. ಸೆಲೆಬ್ರಿಟಿಗಳು ಹಾದಿ ತಪ್ಪಿ ನಡೆದರೆ ನೆಟ್ಟಿಗರು ಛಾಟಿ ಬೀಸುತ್ತಾರೆ. ಇತ್ತೀಚೆಗೆ ಪಾನ್​ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡ ಅಕ್ಷಯ್​ ಕುಮಾರ್ (Akshay Kumar)​ ಅವರಿಗೆ ಹಾಗೆಯೇ ಆಯಿತು. ಇಷ್ಟು ದಿನ ಜವಾಬ್ದಾರಿಯಿಂದ ನಡೆದುಕೊಂಡಿದ್ದ ಅಕ್ಕಿ, ಈಗ ಏಕಾಏಕಿ ಇಂಥ ಜಾಹೀರಾತಿನಲ್ಲಿ ನಟಿಸಿದ್ದನ್ನು ಜನರು ಸಹಿಸಲಿಲ್ಲ. ಕಮೆಂಟ್​ಗಳ ಮೂಲಕ ಕಿವಿ ಹಿಂಡಿದರು. ಅದರ ಪರಿಣಾಮವಾಗಿ ಅಕ್ಷಯ್​ ಕುಮಾರ್​ ಅವರು ವಿಮಲ್​ ಪಾನ್​ ಮಸಾಲ (Vimal Pan Masala) ಕಂಪನಿ ಜೊತೆಗಿನ ಒಪ್ಪಂದವನ್ನು ಕಡಿದುಕೊಳ್ಳಬೇಕಾಯಿತು. ಆ ನಿರ್ಧಾರಕ್ಕೆ ಜನರು ಭೇಷ್​ ಎಂದರು ಎಂಬುದು ನಿಜ. ಆದರೆ ಅಕ್ಷಯ್​ ಕುಮಾರ್​ ಟ್ರೋಲ್​ (Akshay Kumar Troll) ಆಗುವುದು ಮಾತ್ರ ತಪ್ಪುತ್ತಿಲ್ಲ. ಅವರು ಏನೇ ಮಾಡಿದರೂ ಜನರು ಈಗ ಗುಟ್ಕಾ ವಿಚಾರವನ್ನೇ ಪ್ರಸ್ತಾಪಿಸುತ್ತಿದ್ದಾರೆ. ‘ವಿಶ್ವ ನಗು ದಿನ’ ಪ್ರಯುಕ್ತ ಅಕ್ಷಯ್ ಕುಮಾರ್​ ಅವರು ಒಂದು ಹೊಸ ವಿಡಿಯೋ ಹಂಚಿಕೊಂಡಿದ್ದರು. ಅದನ್ನು ಕಂಡು ಕೆಲವರು ನಕ್ಕಿದ್ದಾರೆ. ಆದರೆ ಕೆಲವರು ಅದಕ್ಕೆ ಗುಟ್ಕಾದ ಲಿಂಕ್​ ನೀಡಿದ್ದಾರೆ. ಆ ಮೂಲಕ ಟ್ರೋಲ್​ ಮಾಡಲಾಗುತ್ತಿದೆ.

ಮೇ 1ರಂದು ‘ವಿಶ್ವ ನಗು ದಿನ’. ಅದರ ಸಲುವಾಗಿ ಅಭಿಮಾನಿಗಳನ್ನು ನಗಿಸಬೇಕು ಎಂಬ ಉದ್ದೇಶದಿಂದ ಅಕ್ಷಯ್​ ಕುಮಾರ್​ ಅವರು ಒಂದು ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಅದರಲ್ಲಿ ಅವರ ಹಾವ-ಭಾವ ಸಖತ್​ ಫನ್ನಿ ಆಗಿದೆ. ಬಾಚಣಿಗೆಯಿಂದ ಅವರು ತಮ್ಮ ಹಲ್ಲನ್ನು ಕೆರೆದುಕೊಳ್ಳುತ್ತಿರುವ ರೀತಿಯಲ್ಲಿ ನಟಿಸಿದ್ದಾರೆ. ಇದನ್ನು ನೋಡಿ ಹಲವರಿಗೆ ವಿಮಲ್ ಪಾನ್​ ಮಸಾಲ ಜಾಹೀರಾತು ನೆನಪಾಗಿದೆ. ಅದನ್ನೇ ಇಟ್ಟುಕೊಂಡು ಜನರು ಟ್ರೋಲ್​ ಮಾಡುತ್ತಿದ್ದಾರೆ.

‘ನೀವು ಮಾಡುತ್ತಿರುವುದು ಸರಿ. ವಿಮಲ್​ ತಿಂದ ಬಳಿಕ ಹಲ್ಲುಗಳನ್ನು ಈ ರೀತಿ ಸ್ವಚ್ಛಗೊಳಿಸಬೇಕಾಗುತ್ತದೆ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ವಿಮಲ್​ನಿಂದ ಹಲ್ಲಿನಲ್ಲಿ ಆಗಿರುವ ಕಲೆಯನ್ನು ತೆಗೆಯುತ್ತಿರುವ ಅಕ್ಷಯ್​ ಕುಮಾರ್​’ ಎಂದು ಕೂಡ ಕೆಲವರು ಟ್ರೋಲ್​ ಮಾಡಿದ್ದಾರೆ. ಇತ್ತೀಚೆಗೆ ಅಜಯ್​ ದೇವಗನ್​ ಅವರ ಹೊಸ ಚಿತ್ರವನ್ನು ನೋಡಿ ಅಕ್ಷಯ್​ ಕುಮಾರ್​ ಹೊಗಳಿದ್ದರು. ಆಗಲೂ ಕೂಡ ‘ನಿಮ್ಮದು ಗುಟ್ಕಾ ಗ್ಯಾಂಗ್​’ ಎಂದು ಜನರು ಕಮೆಂಟ್​ ಮಾಡಿದ್ದರು. ಇನ್ಮುಂದೆ ಅಕ್ಷಯ್​ ಕುಮಾರ್​ ಏನೇ ಮಾಡಿದರೂ ಅದನ್ನು ಜನರು ವಿಮಲ್​ ಜಾಹೀರಾತಿನ ಜೊತೆ ಹೋಲಿಸಿ ಮಾತನಾಡುತ್ತಾರೆ ಎಂಬುದಕ್ಕೆ ಈ ಘಟನೆಗಳು ಸಾಕ್ಷಿ. ಅದೇನೇ ಇರಲಿ, ಅಕ್ಷಯ್​ ಕುಮಾರ್​ ಹಂಚಿಕೊಂಡ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಕೆಲವೇ ಗಂಟೆಗಳೊಳಗೆ 10 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ.

ವಿಮಲ್​ ಜೊತೆಗಿನ ಒಪ್ಪಂದ ಕಡಿದುಕೊಂಡು ಅಕ್ಷಯ್​ ಹೇಳಿದ್ದೇನು?

‘ನನ್ನನ್ನು ಕ್ಷಮಿಸಿ.. ಎಲ್ಲ ಅಭಿಮಾನಿಗಳು ಮತ್ತು ಹಿತೈಷಿಗಳಲ್ಲಿ ನಾನು ಕ್ಷಮೆ ಕೇಳುತ್ತೇನೆ. ಕಳೆದ ಕೆಲವು ದಿನಗಳಿಂದ ನೀವು ನೀಡಿದ ಪ್ರತಿಕ್ರಿಯೆಗಳು ನನ್ನಲ್ಲಿ ಆಳವಾದ ಪರಿಣಾಮ ಬೀರಿವೆ. ನಾನು ತಂಬಾಕು ಸೇವನೆಯನ್ನು ಉತ್ತೇಜಿಸುವುದಿಲ್ಲ. ವಿಮಲ್​ ಜೊತೆ ನಾನು ಕೈ ಜೋಡಿಸಿರುವುದರ ಕುರಿತು ನಿಮ್ಮ ಪ್ರತಿಕ್ರಿಯೆಗಳನ್ನು ನಾನು ಗೌರವಿಸುತ್ತೇನೆ. ಮಾನವೀಯತೆಯ ಕಾರಣಕ್ಕೆ ನಾನು ಈ ಜಾಹೀರಾತಿನಿಂದ ಹಿಂದೆ ಸರಿಯುತ್ತೇನೆ. ಒಳ್ಳೆಯ ಉದ್ದೇಶಕ್ಕೆ ಇದರ ಸಂಭಾವನೆಯನ್ನು ನೀಡಲು ನಿರ್ಧರಿಸಿದ್ದೇನೆ. ಈಗಾಗಲೇ ಮಾಡಿಕೊಂಡ ಒಪ್ಪಂದದ ಅವಧಿ ಮುಗಿಯುವವರೆಗೂ ಬ್ರ್ಯಾಂಡ್​ನವರು ಆ ಜಾಹೀರಾತನ್ನು ಪ್ರಸಾರ ಮಾಡಬಹುದು. ಆದರೆ ಮುಂಬರುವ ದಿನಗಳಲ್ಲಿ ನಾನು ಜಾಹೀರಾತುಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಎಚ್ಚರಿಕೆ ವಹಿಸುತ್ತೇನೆ. ಸದಾ ನಿಮ್ಮ ಪ್ರೀತಿ ಮತ್ತು ಹಾರೈಕೆ ಬಯಸುತ್ತೇನೆ’ ಎಂದು ಅಕ್ಷಯ್​ ಕುಮಾರ್​ ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದನ್ನೂ ಓದಿ:

ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು

ಸೌದಿ ಮಿನಿಸ್ಟರ್​ ಜೊತೆ ಶಾರುಖ್​, ಸಲ್ಮಾನ್​​, ಅಕ್ಷಯ್​ ಕುಮಾರ್​ ಪೋಸ್; ಏನಿದು ಸಮಾಚಾರ?

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ