Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿ ಇದ್ದಾರೆ ಇಬ್ಬರು ಸ್ಟಾರ್ ಹೀರೋಗಳು; ಯಾರೆಂದು ಪತ್ತೆಹಚ್ಚಿ ನೋಡೋಣ..

ನಟರ ಹೆಸರು ಹೇಳಿದ ನಂತರವೂ ಈ ಫೋಟೋದಲ್ಲಿ ಅವರು ಎಲ್ಲಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದು ಕೂಡ ಒಂದು ಕಷ್ಟದ ಟಾಸ್ಕ್​. ಯಾಕೆಂದರೆ, ಮೈಗೆಲ್ಲ ಕೆಸರು ಮೆತ್ತಿಕೊಂಡಿರುವ ಅವರನ್ನು ಗುರುತು ಹಿಡಿಯಲು ಸ್ವಲ್ಪ ಸೂಕ್ಷ್ಮವಾಗಿ ಗಮನಿಸಬೇಕು. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ. ಸಿನಿಮಾದ ಶೂಟಿಂಗ್​ ಸೆಟ್​ನಿಂದಲೇ ಆ ನಟರು ಹೀಗೆ ಡಿಫರೆಂಟ್​ ಆಗಿ ಪೋಸ್​ ನೀಡಿದ್ದಾರೆ. ಅಭಿಮಾನಿಗಳು ಇದನ್ನು ನೋಡಿ ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಈ ಫೋಟೋದಲ್ಲಿ ಇದ್ದಾರೆ ಇಬ್ಬರು ಸ್ಟಾರ್ ಹೀರೋಗಳು; ಯಾರೆಂದು ಪತ್ತೆಹಚ್ಚಿ ನೋಡೋಣ..
ವೈರಲ್​ ಫೋಟೋ
Follow us
ಮದನ್​ ಕುಮಾರ್​
|

Updated on: Feb 01, 2024 | 7:21 PM

ಸಿನಿಮಾ ಪ್ರಮೋಷನ್​ಗಾಗಿ ಸಿಕ್ಕಾಪಟ್ಟೆ ಸರ್ಕಸ್​ ಮಾಡಲಾಗುತ್ತದೆ. ಈಗಿನ ಕಾಲದಲ್ಲಿ ಹೇಗಾದರೂ ಕಷ್ಟಪಟ್ಟು ಒಂದು ಸಿನಿಮಾ ಮಾಡಬಹುದು. ಆದರೆ ಅದನ್ನು ಜನರಿಗೆ ತಲುಪಿಸುವುದು ನಿಜಕ್ಕೂ ಸವಾಲಿನ ಕೆಲಸ. ಹಾಗಾಗಿ ಇಷ್ಟೆಲ್ಲ ಕಸರತ್ತು ಮಾಡಬೇಕಾಗುತ್ತದೆ. ಅದಕ್ಕೆ ಬೆಸ್ಟ್​ ಉದಾಹರಣೆಯೇ ಈ ಫೋಟೋ. ಸೋಶಿಯಲ್​ ಮೀಡಿಯಾದಲ್ಲಿ ಸಿನಿಪ್ರಿಯರ ಗಮನ ಸೆಳೆಯುತ್ತಿರುವ ಈ ಫೋಟೋದಲ್ಲಿ (Viral Photo) ಇಬ್ಬರು ಸ್ಟಾರ್​ ನಟರು ಇದ್ದಾರೆ. ಬಾಲಿವುಡ್​ನ (Bollywood) ಟಾಪ್​ ಹೀರೋಗಳ ಪಟ್ಟಿಯಲ್ಲಿ ಅವರ ಹೆಸರು ಕೂಡ ಇದೆ. ಮೈಗೆ ಕೆಸರು ಮೆತ್ತಿಕೊಂಡು ನಿಂತಿರುವ ಆ ಇಬ್ಬರು ಖ್ಯಾತ ನಟರು (Bollywood Actors) ಯಾರೆಂಬುದು ಪತ್ತೆ ಹಚ್ಚಬೇಕು.

ಇದು ಬೇರೆ ಯಾರೂ ಅಲ್ಲ. ಹಿಂದಿ ಚಿತ್ರರಂಗದ ಜನಪ್ರಿಯ ನಟರಾದ ಅಕ್ಷಯ್​ ಕುಮಾರ್​ ಮತ್ತು ಟೈಗರ್​ ಶ್ರಾಫ್​! ನಟರ ಹೆಸರು ಹೇಳಿದ ನಂತರವೂ ಈ ಫೋಟೋದಲ್ಲಿ ಅವರು ಎಲ್ಲಿದ್ದಾರೆ ಎಂಬುದನ್ನು ಪತ್ತೆ ಹಚ್ಚುವುದು ಕೂಡ ಒಂದು ಕಷ್ಟದ ಟಾಸ್ಕ್​. ಯಾಕೆಂದರೆ, ಮೈಗೆಲ್ಲ ಕೆಸರು ಮೆತ್ತಿಕೊಂಡಿರುವ ಅವರನ್ನು ಗುರುತು ಹಿಡಿಯಲು ಸ್ವಲ್ಪ ಸೂಕ್ಷ್ಮವಾಗಿ ಗಮನಿಸಬೇಕು.

View this post on Instagram

A post shared by Akshay Kumar (@akshaykumar)

ಫೋಟೋದಲ್ಲಿ ಎಡಗಡೆಯಿಂದ ಇರುವ ಮೂರನೆಯವರೇ ಅಕ್ಷಯ್​ ಕುಮಾರ್​. ಅವರ ಎಡಭಾಗದಲ್ಲಿ ನಿಂತಿರುವುದು ಟೈಗರ್​ ಶ್ರಾಫ್​. ಸೋಶಿಯಲ್​ ಮೀಡಿಯಾದಲ್ಲಿ ಅಕ್ಷಯ್​ ಕುಮಾರ್​ ಅವರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಂದಹಾಗೆ, ಇದು ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾದ ಶೂಟಿಂಗ್​ ಸೆಟ್​ನಲ್ಲಿ ಕ್ಲಿಕ್ಕಿಸಿದ ಫೋಟೋ. ಒಂದು ಹಂತದ ಶೂಟಿಂಗ್​ ಮುಗಿದಿದೆ ಎಂಬುದನ್ನು ಈ ಫೋಟೋ ಹಂಚಿಕೊಳ್ಳುವ ಮೂಲಕ ಅಕ್ಷಯ್​ ಕುಮಾರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಒಂದೇ ಫ್ರೇಮ್​ನಲ್ಲಿ ಸೂರ್ಯ, ಅಮಿತಾಭ್​, ಅಕ್ಷಯ್​ ಕುಮಾರ್​; ಏನ್​ ಸಮಾಚಾರ?

ಈ ವರ್ಷ ಈದ್​ ಹಬ್ಬದ ಪ್ರಯುಕ್ತ ‘ಬಡೇ ಮಿಯಾ ಚೋಟೆ ಮಿಯಾ’ ಸಿನಿಮಾ ಬಿಡುಗಡೆ ಆಗಲಿದೆ. ಮುಂಬೈ, ಲಂಡನ್​, ಸ್ಕಾಟ್ಲೆಂಡ್​, ಅಬು ಧಾಬಿ, ಜೋರ್ಡನ್​ ಮುಂತಾದ ಕಡೆಗಳಲ್ಲಿ ಈ ಸಿನಿಮಾದ ಶೂಟಿಂಗ್​ ಮಾಡಲಾಗಿದೆ. ಅಲಿ ಅಬ್ಬಾಸ್​ ಜಾಫರ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸೋನಾಕ್ಷಿ ಸಿನ್ಹಾ, ಪೃಥ್ವಿರಾಜ್​ ಸುಕುಮಾರನ್​ ಅವರು ಕೂಡ ‘ಬಡೇ ಮಿಯಾ ಚೋಟೆ ಮಿಯಾ’ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ. ಬಹುಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ
ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಫಲಿತಾಂಶ ಕೊಡಿಸುವ ಸವಾಲು ಸ್ವೀಕಾರ: ಬಿವೈವಿ