AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಆರ್ಭಟಕ್ಕೆ ಬೆದರಿದ ‘ಭೂತ್ ಬಂಗ್ಲ’: ಅಕ್ಷಯ್ ಕುಮಾರ್ ಚಿತ್ರದ ಬಿಡುಗಡೆ ಮುಂದೂಡಿಕೆ

ಸದ್ಯಕ್ಕಂತೂ ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸಿನಿಮಾದ ಹವಾ ಜೋರಾಗಿದೆ. ಚಿತ್ರಮಂದಿರಗಳಲ್ಲಿ ಬೇರೆ ಸಿನಿಮಾಗಳಿಗೆ ಜಾಗ ಸಿಗುವುದು ಕಷ್ಟ ಆಗಿದೆ. ಹಾಗಾಗಿ ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲ’ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

‘ಧುರಂಧರ್ 2’ ಆರ್ಭಟಕ್ಕೆ ಬೆದರಿದ ‘ಭೂತ್ ಬಂಗ್ಲ’: ಅಕ್ಷಯ್ ಕುಮಾರ್ ಚಿತ್ರದ ಬಿಡುಗಡೆ ಮುಂದೂಡಿಕೆ
Bhooth Bangla Movie PosterImage Credit source: Balaji Motion Pictures
ಮದನ್​ ಕುಮಾರ್​
|

Updated on: Mar 29, 2026 | 1:08 PM

Share

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಶನ್‌ನ ಬಹುನಿರೀಕ್ಷಿತ ಹಾರರ್-ಕಾಮಿಡಿ ಚಿತ್ರ ‘ಭೂತ್ ಬಂಗ್ಲ’ (Bhooth Bangla) ಬಿಡುಗಡೆ ದಿನಾಂಕದಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ಹಿಂದೆ ಘೋಷಿಸಿದಂತೆ ಏಪ್ರಿಲ್ 10ರಂದು ತೆರೆಗೆ ಬರಬೇಕಿದ್ದ ಈ ಚಿತ್ರ, ಈಗ ಏಪ್ರಿಲ್ 17ಕ್ಕೆ ಮುಂದೂಡಲ್ಪಟ್ಟಿದೆ ಎಂಬ ಮಾಹಿತಿ ಕೇಳಿಬಂದಿದೆ. ಅಂದಹಾಗೆ, ಈ ಬದಲಾವಣೆಗೆ ಕಾರಣ ಆಗಿರುವುದು ‘ಧುರಂಧರ್ 2’ (Dhurandhar 2) ಸಿನಿಮಾದ ಅಬ್ಬರ. ಈ ಸಿನಿಮಾದ ಆರ್ಭಟಕ್ಕೆ ಅಕ್ಷಯ್ ಕುಮಾರ್ ಅವರಂತಹ ಸ್ಟಾರ್ ಹೀರೋ ಕೂಡ ಸೈಲೆಂಟ್ ಆಗಬೇಕಾಗಿದೆ.

ಬಾಕ್ಸ್ ಆಫೀಸ್‌ನಲ್ಲಿ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾ ಸುನಾಮಿ ಎಬ್ಬಿಸಿದೆ. ಚಿತ್ರಮಂದಿರಗಳಲ್ಲಿ ಬಹುತೇಕ ಸ್ಕ್ರೀನ್‌ಗಳನ್ನು ಈ ಚಿತ್ರವೇ ಆಕ್ರಮಿಸಿಕೊಂಡಿದೆ. ಆದ್ದರಿಂದ, ಹೊಸ ಸಿನಿಮಾಗಳಿಗೆ ಜಾಗ ಸಿಗುವುದು ಕಷ್ಟವಾಗಿದೆ. ಹಾಲಿವುಡ್ ಸ್ಟಾರ್ ಹೀರೋ ರಿಯಾನ್ ಗೋಸ್ಲಿಂಗ್ ಅವರ ‘ಪ್ರಾಜೆಕ್ಟ್ ಹೇಲ್ ಮೇರಿ’ ಚಿತ್ರ ಕೂಡ ಈ ಕಾರಣದಿಂದ ಪ್ರದರ್ಶನ ಕಾಣಲು ಪರದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರಿಸ್ಕ್ ತೆಗೆದುಕೊಳ್ಳಲು ಇಷ್ಟಪಡದ ‘ಭೂತ್ ಬಂಗ್ಲ’ ತಂಡ, ಬಿಡುಗಡೆಯನ್ನು ಒಂದು ವಾರ ಮುಂದಕ್ಕೆ ಹಾಕಿದೆ.

ಇದು ಅತ್ಯಂತ ಬುದ್ಧಿವಂತಿಕೆಯ ನಿರ್ಧಾರ ಎಂಬ ಅಭಿಪ್ರಾಯ ಕೇಳಿಬಂದಿದೆ. ದೊಡ್ಡ ಚಿತ್ರಗಳ ನಡುವೆ ಪೈಪೋಟಿಗಿಂತ ಲಾಭ ಮುಖ್ಯ. ಈ ಹಿಂದೆ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಕೂಡ ‘ಧುರಂಧರ್ 2’ ಜೊತೆಗಿನ ಸಂಘರ್ಷವನ್ನು ತಪ್ಪಿಸಿತ್ತು. ಈಗ ‘ಭೂತ್ ಬಂಗ್ಲ’ ಮುಂದಕ್ಕೆ ಹೋಗುತ್ತಿರುವುದಕ್ಕೆ ಈ ಸಿನಿಮಾದ ನಿರ್ಮಾಪಕರು ಕೂಡ ಸಮ್ಮತಿಸಿದ್ದಾರೆ ಎಂದು ವರದಿ ಆಗಿದೆ.

ವಿಶೇಷವೆಂದರೆ, ಏಪ್ರಿಲ್ 17ರಂದು ಈ ಹಿಂದೆ ಸಲ್ಮಾನ್ ಖಾನ್ ಅಭಿನಯದ ‘ಮಾತೃಭೂಮಿ’ ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ ಆ ಚಿತ್ರದ ಕೆಲಸಗಳು ವಿಳಂಬವಾಗಿ ಮುಂದೂಡಲ್ಪಟ್ಟಿದೆ. ಈಗ ಆ ದಿನಾಂಕವನ್ನು ‘ಭೂತ್ ಬಂಗ್ಲಾ’ ಆಕ್ರಮಸಿಕೊಳ್ಳುತ್ತಿದೆ. ಸದ್ಯಕ್ಕಂತೂ ಎಲ್ಲ ಚಿತ್ರಮಂದಿರಗಳಲ್ಲಿ ‘ಧುರಂಧರ್ 2’ ಸಿನಿಮಾದ ಹವಾ ಜೋರಾಗಿದೆ. ಹಾಗಾಗಿ ಹೊಸ ಸಿನಿಮಾಗಳ ಬಿಡುಗಡೆಗೆ ಹಿಂದೇಟು ಹಾಕುವಂತಾಗಿದೆ.

ಇದನ್ನೂ ಓದಿ: ‘ಧುರಂಧರ್ 2’ ಅಬ್ಬರ: ಭಾರತದಲ್ಲಿ 10 ದಿನಕ್ಕೆ 700 ಕೋಟಿ ರೂಪಾಯಿ ದಾಟಿದ ಕಲೆಕ್ಷನ್

‘ಭೂತ್ ಬಂಗ್ಲ’ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲ್ಪಟ್ಟಿದ್ದರಿಂದ ಟ್ರೇಲರ್ ಬಿಡುಗಡೆಯಲ್ಲೂ ಬದಲಾವಣೆಯಾಗಿದೆ. ಈ ಮೊದಲು ಮಾರ್ಚ್ 30ರಂದು ಟ್ರೇಲರ್ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಲಾಗಿತ್ತು. ಅದರ ಬದಲು ಏಪ್ರಿಲ್ ಮೊದಲ ವಾರದಲ್ಲಿ ಟ್ರೇಲರ್ ಬಿಡುಗಡೆ ಮಾಡಲು ಚಿತ್ರತಂಡ ಆಲೋಚಿಸಿದೆ ಎನ್ನಲಾಗಿದೆ. ಈಗಾಗಲೇ ಟೀಸರ್ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ