
ಬಾಲಿವುಡ್ನ ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಮತ್ತು ಹಿರಿಯ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್ನಲ್ಲಿ ಬಂದ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಸಮಾಧಾನಕರ ಗಳಿಕೆ ಮಾಡಿದೆ. ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ ಈ ಚಿತ್ರವು ವಿಶ್ವಾದ್ಯಂತ 100 ಕೋಟಿ ರೂಪಾಯಿಗಳ ಗಡಿಯನ್ನು ದಾಟುವ ಮೂಲಕ ಗಮನ ಸೆಳೆದಿದೆ. ಸುಮಾರು 14 ವರ್ಷಗಳ ಸುದೀರ್ಘ ಬಿಡುವಿನ ನಂತರ ಅಕ್ಷಯ್ ಕುಮಾರ್ ಮತ್ತು ಪ್ರಿಯದರ್ಶನ್ ಒಂದಾಗಿ ಮಾಡಿರುವ ಈ ಹಾರರ್-ಕಾಮಿಡಿ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
‘ಬಾಲಾಜಿ ಮೋಷನ್ ಪಿಕ್ಚರ್ಸ್’ ಸಂಸ್ಥೆಯು ತನ್ನ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ‘ಭೂತ್ ಬಂಗ್ಲ’ ಚಿತ್ರವು ಕೇವಲ ಮೂರು ದಿನಗಳಲ್ಲಿ ಜಾಗತಿಕವಾಗಿ 102.05 ಕೋಟಿ ರೂಪಾಯಿ ಗಳಿಸಿದೆ. 21.60 ಕೋಟಿ ರೂಪಾಯಿ, ಎರಡನೇ ದಿನ 25.65 ಕೋಟಿ ರೂಪಾಯಿ ಹಾಗೂ ಮೂರನೇ ದಿನವಾದ ಭಾನುವಾರ 30.20 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.
ಭಾನುವಾರದ ರಜೆಯ ದಿನದಂದು ‘ಭೂತ್ ಬಂಗ್ಲ’ ಚಿತ್ರದ ಗಳಿಕೆಯಲ್ಲಿ ಏರಿಕೆ ಕಂಡುಬಂದಿದ್ದು, ಭಾರತದ ಮಾರುಕಟ್ಟೆಯಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲೂ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಸಿನಿಮಾದ ಕಲೆಕ್ಷನ್ ಹೆಚ್ಚಾಗಬಹುದು ಎಂಬ ಭರವಸೆ ಮೂಡಿದೆ. ಆದರೆ ವಿಮರ್ಶೆಯ ದೃಷ್ಟಿಯಿಂದ ಈ ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ.
ಭಾರತದಲ್ಲಿ ಪೇಯ್ಡ್ ಪ್ರಿವ್ಯೂಗಳ ಮೂಲಕ 3.50 ಕೋಟಿ ಗಳಿಸಿದ್ದ ಈ ಸಿನಿಮಾ, ಮೊದಲ ದಿನ 12.25 ಕೋಟಿ ರೂಪಾಯಿ (ನೆಟ್) ಸಂಗ್ರಹಿಸಿತ್ತು. ಶನಿವಾರ 19 ಕೋಟಿ ಮತ್ತು ಭಾನುವಾರ 23 ಕೋಟಿ ರೂಪಾಯಿ ಗಳಿಸುವ ಮೂಲಕ ದೇಶೀಯ ಮಾರುಕಟ್ಟೆಯಲ್ಲೂ ಗಮನ ಸೆಳೆದಿದೆ. ಇದು ಉತ್ತಮ ಮೊತ್ತ ಆಗಿದ್ದರೂ ಕೂಡ ಸ್ಟಾರ್ ಸಿನಿಮಾಗೆ ಸಾಧಾರಣ ಕಲೆಕ್ಷನ್ ಎನ್ನಬಹುದು.
ಇದನ್ನೂ ಓದಿ: ಅಕ್ಷಯ್ ಕುಮಾರ್ ಪುತ್ರ ಆರವ್ ಭಾಟಿಯಾ ತಿಂಗಳ ಸಂಬಳ ಕೇವಲ 4,500 ರೂಪಾಯಿ
ನಿರ್ದೇಶಕ ಪ್ರಿಯದರ್ಶನ್ ಐದು ವರ್ಷಗಳ ನಂತರ ಹಿಂದಿ ಚಿತ್ರರಂಗಕ್ಕೆ ಮರಳಿದ್ದು, ತಮ್ಮ ಹಳೆಯ ಖದರ್ ಮತ್ತೆ ತೋರಿಸಲು ಪ್ರಯತ್ನಿಸಿದ್ದಾರೆ. ಈ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಜೊತೆಗೆ ಟಬು, ವಾಮಿಕಾ ಗಬ್ಬಿ, ಪರೇಶ್ ರಾವಲ್, ರಾಜ್ಪಾಲ್ ಯಾದವ್ ಮತ್ತು ಮಿಥಿಲಾ ಪಾಲ್ಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.