ಫೇಕ್ ಸುದ್ದಿ ಬಗ್ಗೆ ಕೊನೆಗೂ ಸ್ಪಷ್ಟನೆ ಕೊಟ್ಟ ಬಾಲಿವುಡ್ ನಟ ಅಕ್ಷಯ್ ಕುಮಾರ್

Akshay Kumar: ನಟ ಅಕ್ಷಯ್ ಕುಮಾರ್, ವರ್ಷಕ್ಕೆ ಅತಿ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಸ್ಟಾರ್ ನಟ. ಆದರೆ ಇತ್ತೀಚೆಗೆ ಅಕ್ಷಯ್ ಕುಮಾರ್ ಬಗ್ಗೆ ಸುಳ್ಳು ಸುದ್ದಿಯೊಂದು ಹಬ್ಬಿತ್ತು. ಆ ಬಗ್ಗೆ ಸ್ವತಃ ಅಕ್ಷಯ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಬೇಸರದಿಂದಲೇ ಈ ಸ್ಪಷ್ಟನೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಫೇಕ್ ಸುದ್ದಿ ಬಗ್ಗೆ ಕೊನೆಗೂ ಸ್ಪಷ್ಟನೆ ಕೊಟ್ಟ ಬಾಲಿವುಡ್ ನಟ ಅಕ್ಷಯ್ ಕುಮಾರ್
ಅಕ್ಷಯ್
Follow us
 ಶ್ರೀಲಕ್ಷ್ಮೀ ಎಚ್
| Updated By: ಮಂಜುನಾಥ ಸಿ.

Updated on:Aug 21, 2024 | 4:39 PM

‘ಭೂಲ್ ಭುಲಯ್ಯ’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಅವರು ಹೀರೋ ಆಗಿ ನಟಿಸಿದ್ದರು. ಈ ಸಿನಿಮಾ ಯಶಸ್ಸು ಕಂಡಿತ್ತು. ಈ ಚಿತ್ರದ ಸೀಕ್ವೆಲ್​ಗೆ ಅಕ್ಷಯ್ ಕುಮಾರ್ ಬದಲು ಕಾರ್ತಿಕ್ ಆರ್ಯನ್ ಅವರನ್ನು ಹಾಕಿಕೊಳ್ಳಲಾಯಿತು. ಹೀಗಾದಾಗ ಯಾರಿಗಾದರೂ ಬೇಸರ ಆಗಿಯೇ ಆಗುತ್ತದೆ. ಅಕ್ಷಯ್ ಕುಮಾರ್ ಅವರಿಗೂ ಈ ವಿಚಾರದಲ್ಲಿ ಬೇಸರ ಆಗಿದೆ ಎಂದು ಹೇಳಲಾಗುತ್ತಿದೆ. ಈಗ ಅಕ್ಷಯ್ ಕುಮಾರ್ ಬಗ್ಗೆ ಒಂದು ಫೇಕ್ ನ್ಯೂಸ್ ಹರಿದಾಡಿತ್ತು. ಇದಕ್ಕೆ ಅವರು ಸ್ಪಷ್ಟನೆ ನೀಡುವ ಕೆಲಸವನ್ನು ಮಾಡಿದ್ದಾರೆ.

‘ಭೂಲ್ ಭುಲಯ್ಯ 3’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಭೂಲ್ ಭುಲಯ್ಯ’ ಸಿನಿಮಾದಲ್ಲಿ ನಟಿಸಿದ್ದ ವಿದ್ಯಾ ಬಾಲನ್ ಅವರು ಮರಳುತ್ತಿದ್ದಾರೆ. ಅದೇ ರೀತಿ ಅಕ್ಷಯ್ ಕುಮಾರ್ ಅವರ ಆಗಮನವೂ ಆಗಲಿದೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ, ಆ ರೀತಿ ಆಗಿಲ್ಲ. ಈ ವದಂತಿಗೆ ಅಕ್ಷಯ್ ಕುಮಾರ್ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ.

ಇದನ್ನೂ ಓದಿ:ಅಕ್ಷಯ್ ಕುಮಾರ್ ಸಿನಿಮಾ ಆಯ್ಕೆ ಬಗ್ಗೆ ಆಪ್ತರಿಂದಲೇ ಮೂಡಿದೆ ಪ್ರಶ್ನೆ; ಬೇಸರ ಹೊರಹಾಕಿದ ನಟ

ಸಂದರ್ಶನ ಒಂದರಲ್ಲಿ ಅಕ್ಷಯ್ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದಾರೆ ಎಂದು ವರದಿ ಆಗಿದೆಯಂತೆ. ‘ನಾನು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ. ಅದು ಫೇಕ್ ನ್ಯೂಸ್’ ಎಂದು ಹೇಳಿದ್ದಾರೆ. ಒಮ್ಮೆ ಸರಣಿಯಿಂದ ತೆಗೆದು ಹಾಕಿದ ಬಳಿಕ ಮತ್ತೆ ಅದರಲ್ಲಿ ನಟಿಸೋದು ಸರಿ ಅಲ್ಲ ಅನ್ನೋದು ಅಕ್ಷಯ್ ಕುಮಾರ್ ಅವರ ಅಭಿಪ್ರಾಯ ಎನ್ನಲಾಗಿದೆ.

ಈ ಮೊದಲು ನಿರ್ದೇಶನ ಅನೀಸ್ ಬಾಜ್ಮೀ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ‘ಭೂಲ್ ಭುಲಯ್ಯ 3’ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ನಟಿಸೋದಿಲ್ಲ. ಅವರ ಜೊತೆ ಕೆಲಸ ಮಾಡಬೇಕು ಎಂಬುದು ನನ್ನ ಆಸೆ’ ಎಂದಿದ್ದರು ಅವರು.

ಈಗಾಗಲೇ ಅಕ್ಷಯ್ ಕುಮಾರ್ ಬಳಿ ಸಾಕಷ್ಟು ಸಿನಿಮಾಗಳು ಇವೆ. 10 ಸಿನಿಮಾಗಳ ಶೂಟ್​ನಲ್ಲಿ ಅವರು ಬ್ಯುಸಿ ಇದ್ದಾರೆ. ಇದರ ಮಧ್ಯೆ ಹೊಸ ಸಿನಿಮಾ ಒಪ್ಪಿಕೊಳ್ಳಬೇಕು ಎಂದರೆ ಅದು ಕಷ್ಟ. ಹೀಗಾಗಿ ಅವರು ಈ ಸಿನಿಮಾ ಒಪ್ಪಿಕೊಳ್ಳಲು ನಟಿಸಿಲ್ಲ ಎಂದು ಹೇಳಲಾಗುತ್ತಿದೆ. ಅವರ ನಟನೆಯ ‘ಖೇಲ್ ಖೇಲ್ ಮೇ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Wed, 21 August 24

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ