AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದಂಕಿ ಗಳಿಸಿದ ‘ಹೈವಾನ್’ ಸಿನಿಮಾ; ಅಕ್ಷಯ್ ಕುಮಾರ್​ಗೆ ಮತ್ತೊಂದು ಸೋಲು?

ಅಕ್ಷಯ್ ಕುಮಾರ್ ಹಾಗೂ ಸೈಫ್ ಅಲಿ ಖಾನ್ ನಟನೆಯ ‘ಹೈವಾನ್’ ಸಿನಿಮಾ ಮೊದಲ ದಿನ ಪ್ರಪಂಚದಾದ್ಯಂತ ಕೇವಲ 4.60 ಕೋಟಿ ರೂಪಾಯಿ ಗಳಿಸಿ ನಿರಾಸೆ ಮೂಡಿಸಿದೆ. ಕೆವಿಎನ್ ಸಂಸ್ಥೆ ನಿರ್ಮಿಸಿದ ಈ ಚಿತ್ರ ಸಾಲು ಸಾಲು ಸೋಲು ಕಾಣುತ್ತಿರುವ ಅಕ್ಷಯ್ ಅವರಿಗೆ ಮತ್ತೊಂದು ಹಿನ್ನಡೆಯ ಸೂಚನೆ ನೀಡಿದ್ದು, ಬಾಕ್ಸ್ ಆಫೀಸ್‌ನಲ್ಲಿ ಕಳಪೆ ಆರಂಭ ಪಡೆದಿದೆ.

ಒಂದಂಕಿ ಗಳಿಸಿದ ‘ಹೈವಾನ್’ ಸಿನಿಮಾ; ಅಕ್ಷಯ್ ಕುಮಾರ್​ಗೆ ಮತ್ತೊಂದು ಸೋಲು?
ಹೈವಾನ್ Image Credit source: Haiwaan
ರಾಜೇಶ್ ದುಗ್ಗುಮನೆ
|

Updated on: Sep 12, 2026 | 7:39 AM

Share

ಮುಖ್ಯಾಂಶಗಳು

  • ಮೊದಲ ದಿನವೇ ತಣ್ಣಗಾದ 'ಹೈವಾನ್'
  • ಬಾಕ್ಸ್ ಆಫೀಸ್‌ನಲ್ಲಿ ಒಂದಂಕಿ ಗಳಿಸಿದ ಅಕ್ಷಯ್
  • ಸ್ಟಾರ್‌ ನಟರ ಕಾಂಬಿನೇಷನ್ ವರ್ಕ್ ಆಗ್ಲಿಲ್ವಾ?

ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಸೈಫ್ ಅಲಿ ಖಾನ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಹೈವಾನ್’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸೆಪ್ಟೆಂಬರ್ 11ರಂದು ತೆರೆಗೆ ಬಂದ ಈ ಚಿತ್ರ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಅತ್ಯಂತ ನೀರಸ ಪ್ರದರ್ಶನ ಕಂಡಿದೆ. ಈ ಮೂಲಕ ನಟ ಅಕ್ಷಯ್ ಕುಮಾರ್ ಅವರಿಗೆ ಬಾಕ್ಸ್ ಆಫೀಸ್‌ನಲ್ಲಿ ಮತ್ತೊಮ್ಮೆ ಸೋಲು ಅನುಭವಿಸುವ ಸ್ಪಷ್ಟ ಸೂಚನೆ ಸಿಕ್ಕಿದೆ.

ಮೊದಲ ದಿನದ ಕಲೆಕ್ಷನ್ ವಿವರ

ದೇಶಾದ್ಯಂತ ಒಟ್ಟು 7,224 ಶೋಗಳಲ್ಲಿ ಪ್ರದರ್ಶನ ಕಂಡಿರುವ ಈ ಸಿನಿಮಾ, ಮೊದಲ ದಿನ ಭಾರತದಲ್ಲಿ ನೆಟ್ ಕಲೆಕ್ಷನ್ 3 ಕೋಟಿ ರೂಪಾಯಿ ತಲುಪಿದೆ. ಇದರೊಂದಿಗೆ ಭಾರತದಾದ್ಯಂತ ಗ್ರಾಸ್ ಕಲೆಕ್ಷನ್ 3.60 ಕೋಟಿ ರೂಪಾಯಿ ತಲುಪಿದೆ.

ಇನ್ನು ವಿದೇಶಿ ಮಾರುಕಟ್ಟೆಯಲ್ಲಿ 1.00 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದ್ದು, ಪ್ರಪಂಚದಾದ್ಯಂತ ಒಟ್ಟು 4.60 ಕೋಟಿ ಕಲೆಕ್ಷನ್‌ನೊಂದಿಗೆ ಗಳಿಕೆಯನ್ನು ಆರಂಭಿಸಿದೆ. ಅಕ್ಷಯ್ ಕುಮಾರ್, ಸೈಫ್ ಅಲಿ ಖಾನ್ ಅವರಂತಹ ಸ್ಟಾರ್ ಹೀರೋಗಳೂ ಇದ್ದರೂ ಚಿತ್ರ ಇಷ್ಟು ನೀರಸ ಆರಂಭ ಆರಿಸಿರೋದು ಅನೇಕರಿಗೆ ಶಾಕಿಂಗ್ ಎನಿಸಿದೆ. ಅಕ್ಷಯ್ ಕುಮಾರ್ ಅವರ ನಟನೆಯ ಸಿನಿಮಾಗಳು ಇತ್ತೀಚೆಗೆ ಸಾಲು ಸಾಲು ಸೋಲು ಕಾಣುತ್ತಿವೆ. ಇದಕ್ಕೆ ಕಾರಣ ಹುಡುಕಲು ಅವರಿಂದಲೂ ಸಾಧ್ಯವಾಗಿಲ್ಲ. ಈಗ ಅವರು ಮತ್ತೊಮ್ಮೆ ಎಡವುವ ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಕೆವಿಎನ್ ಪ್ರೊಡಕ್ಷನ್ಸ್‌ನಿಂದ ಬೀರ್‌ಬಲ್ ಕೇಸ್; ಅನೌನ್ಸ್; ಇರಲಿದೆ ಹಲವು ವಿಶೇಷ

ಕೆವಿಎನ್ ಸಂಸ್ಥೆಗೆ ಮತ್ತೊಂದು ಸೋಲಿನ ಬಿಸಿ?

ಈ ಬೃಹತ್ ವೆಚ್ಚದ ಸಿನಿಮಾವನ್ನು ಪ್ರಸಿದ್ಧ ನಿರ್ಮಾಣ ಸಂಸ್ಥೆ ಕೆವಿಎನ್ ನಿರ್ಮಿಸಿದೆ. ಈ ಹಿಂದೆ ಭಾರಿ ನಿರೀಕ್ಷೆ ಮೂಡಿಸಿ ಸೋಲು ಕಂಡಿದ್ದ ‘ಜನ ನಾಯಗನ್’, ‘ಕೆಡಿ’ ಹಾಗೂ ‘ಟಾಕ್ಸಿಕ್’ ಚಿತ್ರಗಳು ಸಾಧಾರಣ ಕಲೆಕ್ಷನ್ ಮಾಡಿದೆ. ಈ ಸಾಲಿಗೆ, ಇದೀಗ ‘ಹೈವಾನ್’ ಸಿನಿಮಾ ಸೇರ್ಪಡೆಯಾಗುವ ಲಕ್ಷಣಗಳು ಕಾಣಿಸುತ್ತಿದ್ದು, ನಿರ್ಮಾಣ ಸಂಸ್ಥೆಗೆ ಮತ್ತೊಂದು ಸೋಲಿನ ಆತಂಕ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!