AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಯಿ ಬಾಬಾ’ ಖ್ಯಾತಿಯ ನಟ ಸುಧೀರ್ ದಲ್ವಿಗೆ ಅನಾರೋಗ್ಯ; ಸಹಾಯಕ್ಕೆ ಬಂದ ಹೀರೋಗಳು

ಸಾಯಿ ಬಾಬಾ ಪಾತ್ರ ಮಾಡಿ ದೇಶಾದ್ಯಂತ ಮನೆ ಮಾತಾಗಿದ್ದ ನಟ ಸುಧೀರ್ ದಲ್ವಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸೋಂಕಿನಿಂದಾಗಿ ಅವರ ಮೂಳೆ ಮತ್ತು ಕೀಲುಗಳ ಮೇಲೆ ತೀವ್ರ ಪರಿಣಾಮ ಬೀರಿದ್ದು, ಪ್ರಸ್ತುತ ವಾಕರ್ ಸಹಾಯದಿಂದ ನಡೆಯುತ್ತಿದ್ದಾರೆ. ಅವರಿಗೆ ಸ್ಟಾರ್ ಹೀರೋಗಳು ಹಾಗೂ ಸಾಯಿ ಬಾಬಾ ಭಕ್ತರು ಆರ್ಥಿಕ ನೆರವು ನೀಡಿದ್ದಾರೆ.

‘ಸಾಯಿ ಬಾಬಾ’ ಖ್ಯಾತಿಯ ನಟ ಸುಧೀರ್ ದಲ್ವಿಗೆ ಅನಾರೋಗ್ಯ; ಸಹಾಯಕ್ಕೆ ಬಂದ ಹೀರೋಗಳು
Sudhir DalviImage Credit source: Sarla Charities Trust
ಮದನ್​ ಕುಮಾರ್​
|

Updated on: Sep 02, 2026 | 7:39 PM

Share

‘ಶಿರಡಿ ಕೆ ಸಾಯಿ ಬಾಬಾ’ ಸಿನಿಮಾದಲ್ಲಿ ಸಾಯಿ ಬಾಬಾ ಅವರ ಪಾತ್ರದ ಮೂಲಕ ಪ್ರತಿಯೊಬ್ಬರ ಮನ ಗೆದ್ದಿದ್ದ ಹಿರಿಯ ನಟ ಸುಧೀರ್ ದಲ್ವಿ ಅವರು ಇತ್ತೀಚೆಗೆ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಅವರ ವೈದ್ಯಕೀಯ ವೆಚ್ಚ ಭರಿಸಲು ಬಾಲಿವುಡ್‌ನ ಪ್ರಮುಖ ನಟರು ನೆರವಿನ ಹಸ್ತ ಚಾಚಿದ್ದಾರೆ. ಸೆಪ್ಸಿಸ್ ಸಮಸ್ಯೆಯಿಂದಾಗಿ ಸುಧೀರ್ ದಲ್ವಿ ಅವರ ಆರೋಗ್ಯ ತೀವ್ರ ಹದಗೆಟ್ಟು, ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಅವರ ಆಸ್ಪತ್ರೆಯ ಬಿಲ್ 15 ಲಕ್ಷ ರೂಪಾಯಿಗೂ ಅಧಿಕವಾಗಿತ್ತು. ಈ ಕಷ್ಟದ ಸಮಯದಲ್ಲಿ ನಟರಾದ ಅಕ್ಷಯ್ ಕುಮಾರ್, ರಣಬೀರ್ ಕಪೂರ್, ಕಾರ್ತಿಕ್ ಆರ್ಯನ್ ಸೇರಿದಂತೆ ಚಿತ್ರರಂಗದ ಹಲವರು ಆರ್ಥಿಕ ಸಹಾಯ ಹಸ್ತ ಚಾಚಿದ್ದಾರೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸುಧೀರ್ ದಲ್ವಿ ಅವರ ಪತ್ನಿ ಸುಹಾಸ್ ದಲ್ವಿ, ‘ನಾವು ಆಸ್ಪತ್ರೆಯ ಬಿಲ್ ಪಾವತಿಸಲು ಕಷ್ಟಪಡುತ್ತಿದ್ದೇವೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಬಾಲಿವುಡ್‌ನ ಹಲವರು ಸಹಾಯಕ್ಕೆ ಬಂದರು. ಕಾರ್ತಿಕ್ ಆರ್ಯನ್, ರಣಬೀರ್ ಕಪೂರ್ ಮತ್ತು ಅಕ್ಷಯ್ ಕುಮಾರ್ ಅವರು ತಕ್ಷಣವೇ ನೆರವು ನೀಡಿದವರಲ್ಲಿ ಪ್ರಮುಖರು’ ಎಂದು ಹೇಳಿದ್ದಾರೆ.

‘ಸುಧೀರ್ ಅವರು ಸಾಯಿ ಬಾಬಾ ಪಾತ್ರದ ಮೂಲಕ ಹೆಸರುವಾಸಿಯಾದವರು. ಹೀಗಾಗಿ ಅನೇಕ ಸಾಯಿ ಬಾಬಾ ಭಕ್ತರು ಕೂಡ ನಮ್ಮ ನೆರವಿಗೆ ಧಾವಿಸಿದರು. ಈ ಪ್ರೀತಿ ಮತ್ತು ಉದಾರತೆಯನ್ನು ಕಂಡು ನಮಗೆ ಭಾವುಕರಾಗಿದ್ದೇವೆ’ ಎಂದು ಸುಹಾಸ್ ದಲ್ವಿ ಅವರು ಧನ್ಯವಾದ ತಿಳಿಸಿದ್ದಾರೆ. ಪ್ರಸ್ತುತ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಸುಧೀರ್ ಅವರು ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಡಿಸೆಂಬರ್‌ನಲ್ಲಿ ಬಾಂಬೆ ಹೈಕೋರ್ಟ್ ಶ್ರೀ ಸಾಯಿಬಾಬಾ ಸಂಸ್ಥಾನ ಟ್ರಸ್ಟ್‌ನಿಂದ ಸುಧೀರ್ ದಲ್ವಿ ಅವರ ಚಿಕಿತ್ಸೆಗೆ 11 ಲಕ್ಷ ರೂಪಾಯಿ ದೇಣಿಗೆ ನೀಡಲು ಅನುಮತಿ ನೀಡಿತ್ತು. ತೀವ್ರ ಸೋಂಕು ಉಂಟಾಗಿದ್ದರಿಂದ ಅವರ ಮೂಳೆ ಹಾಗೂ ಕೀಲುಗಳ ಮೇಲೆ ಪರಿಣಾಮ ಬೀರಿದ್ದು, ಸದ್ಯಕ್ಕೆ ವಾಕರ್ ಸಹಾಯದಿಂದ ನಡೆಯುತ್ತಿದ್ದಾರೆ ಎಂದು ಅವರ ಪತ್ನಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶಿರಡಿ ಸಾಯಿ ಬಾಬಾ ಮಂದಿರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಶಾರುಖ್​ ಖಾನ್​

ರಾಮಾನಂದ್ ಸಾಗರ್ ಅವರ ‘ರಾಮಾಯಣ’ ಧಾರಾವಾಹಿಯಲ್ಲಿ ಗುರು ವಸಿಷ್ಠರ ಪಾತ್ರ ಮಾಡಿದ್ದ ಸುಧೀರ್ ದಲ್ವಿ ಅವರು ‘ಚಾಣಕ್ಯ’, ‘ಜೈ ಹನುಮಾನ್’, ‘ವಿಷ್ಣು ಪುರಾಣ’, ‘ಬುನಿಯಾದ್’ ಮತ್ತು ‘ಕ್ಯೂಂಕಿ ಸಾಸ್ ಭಿ ಕಭಿ ಬಹು ಥಿ’ ಮುಂತಾದ ಜನಪ್ರಿಯ ಧಾರಾವಾಹಿಗಳಲ್ಲಿ ಹಾಗೂ ಅನೇಕ ಸಿನಿಮಾಗಳಲ್ಲಿ ನಟಿಸಿ ಮೂರು ದಶಕಗಳ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!