AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಆ ರೀತಿ ಮೀಸೆ ಬರಲ್ಲ’: ನೇರವಾಗಿ ಒಪ್ಪಿಕೊಂಡು ಜನರ ಕ್ಷಮೆ ಕೇಳಿದ ಅಕ್ಷಯ್ ಕುಮಾರ್

ನಟ ಅಕ್ಷಯ್ ಕುಮಾರ್ ಅವರು ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾಗಾಗಿ ನಕಲಿ ಮೀಸೆ ಅಂಟಿಸಿಕೊಂಡು ಟ್ರೋಲ್ ಆಗಿದ್ದರು. ಆ ರೀತಿ ಮೀಸೆ ಅಂಟಿಸಿಕೊಳ್ಳುವುದು ತಮಗೆ ಅನಿವಾರ್ಯ ಎಂದು ಅವರು ಈಗ ಬಾಯಿಬಿಟ್ಟಿದ್ದಾರೆ. ಜನರಿಗೆ ಆ ಲುಕ್ ಇಷ್ಟ ಆಗದೇ ಇರುವುದಕ್ಕೆ ಅಕ್ಷಯ್ ಕುಮಾರ್ ಕ್ಷಮೆ ಕೇಳಿದ್ದಾರೆ.

‘ನನಗೆ ಆ ರೀತಿ ಮೀಸೆ ಬರಲ್ಲ’: ನೇರವಾಗಿ ಒಪ್ಪಿಕೊಂಡು ಜನರ ಕ್ಷಮೆ ಕೇಳಿದ ಅಕ್ಷಯ್ ಕುಮಾರ್
Akshay Kumar Image Credit source: Yash Raj Films
ಮದನ್​ ಕುಮಾರ್​
|

Updated on: Apr 22, 2026 | 5:20 PM

Share

ಬಾಲಿವುಡ್‌ನ ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಅವರು ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. 2022ರಲ್ಲಿ ತೆರೆಕಂಡ, ಐತಿಹಾಸಿಕ ಕಥಾಹಂದರದ ‘ಸಾಮ್ರಾಟ್ ಪೃಥ್ವಿರಾಜ್’ (Samrat Prithviraj) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗಿತ್ತು. ಆ ಸಮಯದಲ್ಲಿ ಚಿತ್ರಕ್ಕಿಂತ ಹೆಚ್ಚಾಗಿ ಅಕ್ಷಯ್ ಕುಮಾರ್ ಧರಿಸಿದ್ದ ನಕಲಿ ಮೀಸೆ ಭಾರಿ ಟೀಕೆಗೆ ಗುರಿಯಾಗಿತ್ತು. ಈಗ ಸುಮಾರು 4 ವರ್ಷಗಳ ನಂತರ ಅಕ್ಷಯ್ ಈ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಶುಭಂಕರ್ ಮಿಶ್ರಾ ಅವರ ಯೂಟ್ಯೂಬ್ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಅಕ್ಷಯ್, ನಕಲಿ ಮೀಸೆ ಬಳಸಲು ಇದ್ದ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಸಿನಿಮಾಕ್ಕಾಗಿ ಅಕ್ಷಯ್ ಕುಮಾರ್ ಹೆಚ್ಚು ಸಮಯ ಮೀಸಲಿಡುವುದಿಲ್ಲ ಎಂಬ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಏಕಕಾಲಕ್ಕೆ ಹಲವು ಸಿನಿಮಾಗಳಲ್ಲಿ, ಹಲವು ಲುಕ್‌ಗಳಲ್ಲಿ ಕೆಲಸ ಮಾಡುತ್ತಿರುತ್ತೇನೆ. ಉದಾಹರಣೆಗೆ, ಈಗ ನಾನು ಗಡ್ಡ ಬಿಟ್ಟಿದ್ದೇನೆ. ಇದನ್ನು ಬೆಳೆಸಲು ನನಗೆ ಆರು ವಾರಗಳು ಬೇಕಾಯಿತು ಮತ್ತು ಆ ಸಮಯದಲ್ಲಿ ನಾನು ಯಾವುದೇ ಕೆಲಸ ಮಾಡಲಿಲ್ಲ’ ಎಂದು ಸ್ಪಷ್ಟನೆ ನೀಡಿದರು.

ಮುಂದುವರಿದು ಮಾತನಾಡಿದ ಅವರು, ‘ಸಾಮ್ರಾಟ್ ಪೃಥ್ವಿರಾಜ್ ಸಿನಿಮಾದ ಕಥೆಗೆ ಒಂದು ವಿಶಿಷ್ಟವಾದ ಮೀಸೆಯ ಅವಶ್ಯಕತೆಯಿತ್ತು. ಆದರೆ ಅಂತಹ ಮೀಸೆ ನನ್ನ ಮುಖದ ಮೇಲೆ ಸಹಜವಾಗಿ ಬೆಳೆಯಲು ಸಾಧ್ಯವಿರಲಿಲ್ಲ. ಹಾಗಾಗಿ ನಕಲಿ ಮೀಸೆ ಬಳಸಬೇಕಾಯಿತು. ಅದು ನೋಡಲು ಚೆನ್ನಾಗಿರಲಿಲ್ಲ ಅಥವಾ ಜನರಿಗೆ ಇಷ್ಟವಾಗಿಲ್ಲದಿರಬಹುದು. ಆದರೆ ಅಂತಿಮವಾಗಿ ಇದು ಕೇವಲ ಅಭಿನಯವಷ್ಟೇ’ ಎಂದಿದ್ದಾರೆ.

ಚಿತ್ರದ ಲುಕ್ ಬಗ್ಗೆ ಅಸಮಾಧಾನಗೊಂಡಿದ್ದ ಅಭಿಮಾನಿಗಳ ಬಗ್ಗೆ ಅಕ್ಷಯ್ ಕುಮಾರ್ ಬೇಸರ ವ್ಯಕ್ತಪಡಿಸಿದರು. ‘ಒಂದೊಮ್ಮೆ ಜನರಿಗೆ ಆ ಲುಕ್ ಇಷ್ಟವಾಗದಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಕೆಲವು ಬಾರಿ ಅಂತಹ ಪ್ರಯೋಗಗಳನ್ನು ಮಾಡಬೇಕಾಗುತ್ತದೆ. ಆದರೆ ಅದು ವಿಫಲವಾದರೆ ನಾವೇ ಜವಾಬ್ದಾರರು’ ಎಂದು ಅವರು ನೇರವಾಗಿ ಹೇಳಿದ್ದಾರೆ. ನಕಲಿ ಮೀಸೆಯ ಕಾರಣಕ್ಕೆ ಅವರು ಜನರಲ್ಲಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಅಕ್ಷಯ್ ಕುಮಾರ್ ಪುತ್ರ ಆರವ್ ಭಾಟಿಯಾ ತಿಂಗಳ ಸಂಬಳ ಕೇವಲ 4,500 ರೂಪಾಯಿ

‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾ 2022ರ ಜೂನ್ 3ರಂದು ಬಿಡುಗಡೆ ಆಗಿತ್ತು. ಚಂದ್ರಪ್ರಕಾಶ್ ದ್ವಿವೇದಿ ಅವರು ಆ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ಅಂದಾಜು 175 ಕೋಟಿ ರೂಪಾಯಿ ಬಜೆಟ್​ನಲ್ಲಿ ‘ಯಶ್ ರಾಜ್ ಫಿಲ್ಮ್ಸ್’ ಸಂಸ್ಥೆಯು ನಿರ್ಮಾಣ ಮಾಡಿತ್ತು. ಆದರೆ ವಿಶ್ವಾದ್ಯಂತ ಆ ಸಿನಿಮಾ ಗಳಿಸಿದ್ದು ಕೇವಲ 90 ಕೋಟಿ ರೂಪಾಯಿ ಮಾತ್ರ. ಆ ಸಿನಿಮಾದಲ್ಲಿ ಮಾನುಷಿ ಚಿಲ್ಲರ್, ಸಂಜಯ್ ದತ್ ಮತ್ತು ಸೋನು ಸೂದ್ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್