Akshay Kumar: ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸಿದ ಅಕ್ಷಯ್​ ಕುಮಾರ್​; ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ

Akshay Kumar | Income Tax: ಅಕ್ಷಯ್​ ಕುಮಾರ್ ಶೂಟಿಂಗ್​ನಲ್ಲಿ ಬ್ಯುಸಿ ಇರುವ ಕಾರಣ ಅವರ ತಂಡದವರು ಈ ಮೆಚ್ಚುಗೆ ಪತ್ರವನ್ನು ಸ್ವೀಕರಿಸಿದ್ದಾರೆ. ಅಕ್ಕಿ ಫ್ಯಾನ್ಸ್ ವಲಯದಲ್ಲಿ ಇದರ ಫೋಟೋ ವೈರಲ್​ ಆಗುತ್ತಿದೆ.

Akshay Kumar: ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸಿದ ಅಕ್ಷಯ್​ ಕುಮಾರ್​; ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ
ಅಕ್ಷಯ್ ಕುಮಾರ್
TV9kannada Web Team

| Edited By: Madan Kumar

Jul 25, 2022 | 8:59 AM

ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಚಿತ್ರರಂಗದಲ್ಲಿ ಅನೇಕ ದಾಖಲೆಗಳನ್ನು ಬರೆದಿದ್ದಾರೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯರಾಗಿರುವ ಅವರು ಸಾಕಷ್ಟು ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಮಾಡಿಯೂ ಸೈ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, ಹಲವು ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ರಿಯಲ್​ ಹೀರೋ ಎನಿಸಿಕೊಂಡಿದ್ದುಂಟು. ಈಗ ತೆರಿಗೆ (Income Tax) ವಿಚಾರದಲ್ಲಿ ಅವರು ಸುದ್ದಿ ಆಗುತ್ತಿದ್ದಾರೆ. ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸುವ ಸೆಲೆಬ್ರಿಟಿ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ. ಇದಕ್ಕಾಗಿ ಆದಾಯ ತೆರಿಗೆ ಇಲಾಖೆಯಿಂದ (Income Tax Department) ಮೆಚ್ಚುಗೆ ಪತ್ರ ನೀಡಲಾಗಿದೆ. ಇದರ ಫೋಟೋ ವೈರಲ್​ ಆಗುತ್ತಿದೆ. ಈ ಸುದ್ದಿ ಕೇಳಿ ಅಕ್ಷಯ್​ ಕುಮಾರ್​ ಅಭಿಮಾನಿಗಳು ಹಿರಿಹಿರಿ ಹಿಗ್ಗುತ್ತಿದ್ದಾರೆ.

ಬಾಲಿವುಡ್​ನ ಟಾಪ್​ ಹೀರೋಗಳ ಪೈಕಿ ಅಕ್ಷಯ್​ ಕುಮಾರ್​ ಕೂಡ ಪ್ರಮುಖರು. ಪ್ರತಿ ಸಿನಿಮಾಗೆ ಅವರು ಬಹುಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಸಿನಿಮಾ ಮಾತ್ರವಲ್ಲದೇ ಜಾಹೀರಾತುಗಳಲ್ಲಿ ನಟಿಸುವ ಮೂಲಕವೂ ಸಂಪಾದನೆ ಮಾಡುತ್ತಾರೆ. ಅನೇಕ ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ರಾಯಭಾರಿ ಆಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಹೊಂದಿದ್ದಾರೆ. ದೇಶದ ಅನೇಕ ಕಡೆಗಳಲ್ಲಿ ಅಕ್ಷಯ್​ ಕುಮಾರ್​ ಆಸ್ತಿ ಹೊಂದಿದ್ದಾರೆ. ಹಲವು ಉದ್ಯಮದ ಮೇಲೆ ಅವರು ಹೂಡಿಕೆ ಮಾಡಿದ್ದಾರೆ.

ಭಾರತದ ಶ್ರೀಮಂತ ನಟರಲ್ಲಿ ಒಬ್ಬರಾಗಿರುವ ಅಕ್ಷಯ್​ ಕುಮಾರ್​ ಅವರು ತೆರಿಗೆ ಕಟ್ಟುವ ವಿಚಾರದಲ್ಲಿ ಹೆಚ್ಚು ಪ್ರಾಮಾಣಿಕತೆ ತೋರಿಸಿದ್ದಾರೆ. ಸದ್ಯ ಅವರು ಸಿನಿಮಾ ಶೂಟಿಂಗ್​ ಸಲುವಾಗಿ ಇಂಗ್ಲೆಂಡ್​ಗೆ ತೆರಳಿದ್ದಾರೆ. ಅಕ್ಷಯ್​ ಕುಮಾರ್​ ಪರವಾಗಿ ಅವರ ತಂಡದವರು ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರವನ್ನು ಸ್ವೀಕರಿಸಿದ್ದಾರೆ. ಅಕ್ಕಿ ಅಭಿಮಾನಿಗಳ ವಲಯದಲ್ಲಿ ಇದರ ಫೋಟೋ ವೈರಲ್​ ಆಗುತ್ತಿದೆ.

ಅಂದಹಾಗೆ, ಅಕ್ಷಯ್​ ಕುಮಾರ್​ ಅವರು ಈ ರೀತಿ ಪ್ರಶಂಸೆಗೆ ಪಾತ್ರರಾಗಿರುವುದು ಇದೇ ಮೊದಲೇನಲ್ಲ. ತೆರಿಗೆ ಪಾವತಿಸುವಲ್ಲಿ ಕಳೆದ 5 ವರ್ಷಗಳಿಂದ ಅವರು ನಂಬರ್​ ಒನ್​ ಸ್ಥಾನವನ್ನು ಕಾಯ್ದುಕೊಂಡು ಬಂದಿದ್ದಾರೆ. ಸಿನಿಮಾ ವಿಚಾರಕ್ಕೆ ಬರುವುದಾದರೆ, ಅಕ್ಷಯ್​ ಕುಮಾರ್​ ಅವರಿಗೆ 2022ರ ವರ್ಷದ ಮೊದಲಾರ್ಧ ಅಷ್ಟೊಂದು ಆಶಾದಾಯಕವಾಗಿ ಇರಲಿಲ್ಲ. ‘ಬಚ್ಚನ್​ ಪಾಂಡೆ’ ಹಾಗೂ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾಗಳು ಸೋಲುಂಡಿವೆ. ಈಗ ಹೊಸ ಭರವಸೆಯೊಂದಿಗೆ ಆಗಸ್ಟ್​ 11ರಂದು ಅವರ ‘ರಕ್ಷಾ ಬಂಧನ್​’ ಸಿನಿಮಾ ತೆರೆ ಕಾಣುತ್ತಿದೆ.

ಇದನ್ನೂ ಓದಿ

Follow us on

Related Stories

Most Read Stories

Click on your DTH Provider to Add TV9 Kannada